ಕರ್ನಾಟಕ ಶೋಷಿತ ಸಮುದಾಯಗಳ ಮಹಾ ಒಕ್ಕೂಟ
ಶಿವಮೊಗ್ಗ: ರಾಜ್ಯದ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷಾ ವರದಿ ಜಾರಿಗೊಳಿಸಲು ಒತ್ತಾಯಿಸಿ ಕರ್ನಾಟಕ ಶೋಷಿತ ಸಮುದಾಯಗಳ ಮಹಾ ಒಕ್ಕೂಟ ಜಿಲ್ಲಾಧಿಕಾರಿಗಳ ಮೂಲಕ ಮುಖ್ಯಮಂತ್ರಿಗಳಿಗೆ ಸೋಮವಾರ ಮನವಿ ಸಲ್ಲಿಸಿತು.
ರಾಜ್ಯದ ಎಲ್ಲಾ ಜಾತಿಗಳ ಸಾಮಾಜಿಕ, ಆರ್ಥಿಕ ಮತ್ತು ಶೈಕ್ಷಣಕ ಸ್ಥಿತಿಗತಿಗಳನ್ನು ಅಧ್ಯಯನ ನಡೆಸಿ ತಯಾರಿಸಲಾಗಿರುವ ಸಮೀಕ್ಷ ವರದಿಯನ್ನು ಜಾರಿಗೊಳಿಸಲು ರಾಜ್ಯ ಸರ್ಕಾರ ಮೀನಾಮೇಷ ಎಣ ಸುವ ಅಗತ್ಯವಿಲ್ಲ. ಸುಮಾರು 159 ಕೋಟಿ ರೂ.ಗಳನ್ನು ಖರ್ಚು ಮಾಡಿ ತಯಾರಿಸಿರುವ ಈ ವರದಿಯು ತಕ್ಷಣ ಫಲಪ್ರದ ಆಗಬೇಕು. ಅಕ್ಟೋಬರ್ 18 ರಂದು ನಡೆಯುವ ಸಚಿವ ಸಂಪುಟ ಸಭೆಯಲ್ಲಿ ಚರ್ಚಿಸಿ ಸೂಕ್ತ ತೀರ್ಮಾನ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿಗಳಾದ ಸಿದ್ಧರಾಮಯ್ಯರವರು ಹೇಳಿರುವುದು ಸ್ವಾಗತಾರ್ಹ. ಆದರೆ ಅದನ್ನು ಕೂಡಲೇ ಜಾರಿಗೊಳಿಸಬೇಕೆಂದು ಮನವಿದಾರರು ಒತ್ತಾಯಿಸಿದರು.
ಜಾತಿಗಳ ಸಾಮಾಜಿಕ, ಆರ್ಥಿಕ ಮತ್ತು ಶೈಕ್ಷಣಕ ಸ್ಥಿತಿಗತಿಗಳನ್ನು ಅಧ್ಯಯನ ನಡೆಸಿ ತಯಾರಿಸಲಾಗಿರುವ ಸಮೀಕ್ಷ ವರದಿಯನ್ನು ರಾಜ್ಯ ಸರ್ಕಾರ ಒಪ್ಪಿಕೊಂಡು ಬಿಡುಗಡೆ ಮಾಡಬೇಕಾಗಿರುವುದು ಅತ್ಯಾವಶ್ಯಕವಾಗಿದೆ. ಹಿರಿಯ ನ್ಯಾಯವಾದಿ ಹೆಚ್.ಕಾಂತರಾಜು ಅವರ ನೇತೃತ್ವದಲ್ಲಿ ಶಾಶ್ವತ ಹಿಂದುಳಿದ ವರ್ಗಗಳ ಆಯೋಗ ನಡೆಸಿದ ಸಮೀಕ್ಷೆಗೆ ಅಂಕಿ-ಅಂಶಗಳನ್ನೂ ಸಂಗ್ರಹಿಸಿದ ವಿಧಾನವನ್ನು ತಜ್ಞರ ಸಮಿತಿ ಮತ್ತು ಐ.ಐ.ಎಂ. ಸಂಸ್ಥೆಗಳು ದೃಡೀಕರಿಸಿದೆ ಎಂದರು.
ಕೊಟ್ಟ ಮಾತಿನಂತೆ ಈಗ ಜಾತಿ ಜನಗಣತಿಯ ವರದಿಯನ್ನು ಒಪ್ಪಿ ಬಿಡುಗಡೆ ಮಾಡಿ ‘ನಾವು ನುಡಿದಂತೆ ನಡೆಯುವವರು’ ಎನ್ನುವುದನ್ನು ಸಾಬೀತು ಮಾಡಬೇಕು. ಅಕ್ಟೋಬರ್ 18ರಂದು ನಡೆಯುವ ಸಚಿವ ಸಂಪುಟ ಸಭೆಯಲ್ಲಿ ಜಾತಿ ಜನಗಣತಿಯ ವರದಿಯನ್ನು ಮಂಡಿಸಿದಾಗ, ಕೆಲವರು ಆಕ್ಷೇಪ ಎತ್ತಿ ಅದನ್ನು ಒಪ್ಪಬೇಕೋ, ಬೇಡವೋ ಎಂದು ನಿರ್ಧರಿಸುವ ಅಭಿಪ್ರಾಯ ಸಂಪುಟ ಸಭೆಯ ಅಧಿಕಾರ. ಆದರೆ ಸಂಪುಟ ಸಭೆಯಲ್ಲಿ ಮಂಡಿಸಬಾರದು ಎಂಬುದು ಗೂಂಡಾ ಪ್ರವೃತ್ತಿ, ಸರ್ವಾಧಿಕಾರಿ ಧೋರಣೆ. ಇದು ಪ್ರಜಾಪ್ರಭುತ್ವಕ್ಕೆ ಮಾರಕ. ಇಂತಹ ಜೊಳ್ಳು ಬೆದರಿಕೆಗೆ ತಲೆ ಕೆಡಿಸಿಕೊಳ್ಳದೆ ಸಿದ್ಧರಾಮಯ್ಯನವರು ಯಾವುದೇ ಕಾರಣಕ್ಕೂ ಹಿಂದೆ ಸರಿಯಬಾರದು ಎಂದರು.
ರಾಜ್ಯ ಸರ್ಕಾರ ಮತ್ತು ಮುಖ್ಯಮಂತ್ರಿ ಸಿದ್ಧರಾಮಯ್ಯ ಇದೇ ಅಕ್ಟೋಬರ್ 18ರಂದು ನಡೆಯುವ ಸಚಿವ ಸಂಪುಟ ಸಭೆಯಲ್ಲಿ, ಜಾತಿ ಜನಗಣತಿ ವರದಿಯನ್ನು ಒಪ್ಪಿ ಬಿಡುಗಡೆಗಾಗಿ ಒತ್ತಾಯಿಸಿ, ದಿನಾಂಕ 16 ಅಕ್ಟೋಬರ್ 2024ರಂದು ಬೆಂಗಳೂರಿನ ಪ್ರೀಡಂ ಪಾರ್ಕಿನಲ್ಲಿ “ಹಕ್ಕೊತ್ತಾಯ ಸಮಾವೇಶ” ಆಯೋಜಿಸುತ್ತಿದ್ದೇವೆ ಎಂದು ಮನವಿಯಲ್ಲಿ ತಿಳಿಸಲಾಗಿದೆ.
ಮನವಿ ಸಂದರ್ಭದಲ್ಲಿ ಜಿಲ್ಲಾ ಸಂಚಾಲಕರುಗಳಾದ ಕೆ ರಂಗನಾಥ್, ಅಫ್ತಾಬ್ ಫಾರ್ವಿಜ್, ಎಸ್.ಎಂ ಶರತ್ ಮರಿಯಪ್ಪ, ಜಿ.ಡಿ ಮಂಜುನಾಥ್, ಎಂ ಪ್ರವೀಣ್ ಕುಮಾರ್, ಬಿ ಲೋಕೇಶ್ , ಜಗದೀಶ್, ಗುರುಪ್ರಸಾದ್, ಕೆ ಎಲ್ ಪವನ್, ಕೇಶವ, ಮಾಲ್ತೇಶ್ ,ವಿನೋದ್, ಪ್ರದೀಪ್, ವಿನಯ್ ಹಾಗೂ ಇತರರು ಇದ್ದರು.
ಜಾತಿಗಣತಿಯ ವರದಿ ಬಂದರೆ ಜಾತಿಗಳ ವಸ್ತುಸ್ಥಿತಿ ತಿಳಿಯಲಿದೆ. ಅದಕ್ಕೆ ಪೂರಕವಾಗಿ ಸರ್ಕಾರಗಳು ಕಾರ್ಯಕ್ರಮಗಳನ್ನು ರೂಪಿಸಬಹುದಾಗಿದೆ. ಈಗ ರಾಜ್ಯದ ಸುಮಾರು ಆರುವರೆ ಕೋಟಿ ಜನಸಂಖ್ಯೆಯ ಅಧ್ಯಯನವಾಗಿರುವುದರಿಂದ ಜಾತಿ ಜನಗಣತಿಯನ್ನು ಸರ್ಕಾರ ಒಪ್ಪಿಕೊಳ್ಳುವುದರಿಂದ ಎಲ್ಲಾ ಜಾತಿಗಳಿಗೂ ಒಂದಲ್ಲ ಒಂದು ರೀತಿಯಲ್ಲಿ ಅನುಕೂಲ ಆಗಲಿದೆ. ಹಾಗಾಗಿ ಎಲ್ಲಾ ಜಾತಿಗಳು ಕೂಡ ಜಾತಿ ಜನಗಣತಿ ವರದಿ ಬಿಡುಗಡೆಗೆ ಸರ್ಕಾರದ ಮೇಲೆ ಒತ್ತಡ ತರಬೇಕ
– ಕೆ. ರಂಗನಾಥ್, ಜಿಲ್ಲಾ ಸಂಚಾಲಕ