ಬೆಂಗಳೂರು: ನಟ ದರ್ಶನ್ ಅವರ ಪತ್ನಿ ವಿಜಯಲಕ್ಷ್ಮೀ ಅವರು ತಮ್ಮ ಇನ್ ಸ್ಟಾಗ್ರಾಂ ಖಾತೆಯಲ್ಲಿ ಅಭಿಮಾನಿಗಳನ್ನುದ್ದೇಶಿಸಿ ಪೋಸ್ಟ್ ಮಾಡಿದ್ದಾರೆ.
ಈ ಪೋಸ್ಟ್ ಸಾಕಷ್ಟು ವೈರಲ್ ಆಗಿದೆ.
ನನ್ನ ಪ್ರೀತಿಯ ಸಹೋದರರೇ,
ದರ್ಶನ್ ಅವರಿಗೆ ನೀವು, ತಮ್ಮ ಅಭಿಮಾನಿಗಳು ಎಂದರೆ ಅಪಾರವಾದ ಪ್ರೀತಿ. ನೀವು ಅವರನ್ನು ಪ್ರೀತಿಸುವಷ್ಟೇ ಅವರು ತಮ್ಮ “ಸೆಲೆಬ್ರಿಟಿಗಳನ್ನು” ತನ್ನ ಹೃದಯದಲ್ಲೇ ಹೊತ್ತಿರುವುದು ನಿಮಗೇ ಗೊತ್ತಿದೆ.
ಇದೊಂದು ಪರೀಕ್ಷೆಯ ಸಮಯ. ನನಗೆ, ನಿಮಗೆ, ನಮ್ಮೆಲ್ಲರಿಗೆ. ನಾವು ತಾಳ್ಮೆ ಕಳೆದುಕೊಂಡು ಮಾತನಾಡುವುದರಿಂದ ಹಾನಿಯಾಗುವುದು ನಮಗೆ. ಆದ್ದರಿಂದ ತಾಳ್ಮೆ, ಶಾಂತಿಯಿಂದಿರೋಣ. ನಿಮ್ಮ ಆತಂಕವನ್ನು ನಾನು, ದರ್ಶನರಿಗೆ ತಲುಪಿಸಿದ್ದೇನೆ. ಅವರೂ ನಿಮ್ಮ ಪ್ರತಿ ಕಾಳಜಿ ವ್ಯಕ್ತಪಡಿಸಿದ್ದಾರೆ.
ನಾವು ನಮ್ಮ ನ್ಯಾಯಾಲಯಗಳ ಮೇಲೆ ವಿಶ್ವಾಸವಿಡೋಣ. ನಮಗೆ ನ್ಯಾಯ ಸಿಗುವ ಸಂಪೂರ್ಣ ಭರವಸೆ ನನಗಿದೆ. ಇಂತಹ ಕಷ್ಟದ ಸಮದಲ್ಲಿ, ದರ್ಶನರ ಅನುಪಸ್ಥಿತಿಯನ್ನು ದುರುಪಯೋಗ ಪಡೆಸಿಕೊಂಡು ಅವರಿಗೆ ಕೇಡು ಬಯಸುವ/ಮ ತಾಯಿ ಚಾಮುಂಡೇಶ್ವರಿ ನೋಡಿಕೊಳ್ಳುತ್ತಾಳೆ. ಒಳ್ಳೆಯ ಸಮಯ ಮತ್ತೆ ಮರಳಿ ಬರಲಿದೆ.
ಸತ್ಯಮೇವ ಜಯತೆ!