ಪತ್ರಿಕಾಗೋಷ್ಟಿಯಲ್ಲಿ ಆಡಳಿತ ಮಂಡಳಿಯ ಅಧ್ಯಕ್ಷ ಕೃಷ್ಣಮೂರ್ತಿ.ಎನ್ ಮಾಹಿತಿ
ಶಿವಮೊಗ್ಗ : ರಾಜ್ಯ ಕನ್ನಡ ದೈವಜ್ಞ ಬ್ರಾಹ್ಮಣರ ಸಂಘದ ವತಿಯಿಂದ ಶ್ರೀ ಸತ್ಯನಾರಾಯಣ ಪೂಜೆ, ಶ್ರೀ ಹಯಗ್ರೀವ ಪೂಜೆ ಕಾರ್ಯಕ್ರಮದ ಉದ್ಘಾಟನೆ, ದಾನಿಗಳೊಗೆ ಸನ್ಮಾನ, ಪ್ರತಿಭಾ ಪುರಸ್ಕಾರ, 19ನೇ ವಾರ್ಷಿಕ ಮಹಾಸಭೆಯನ್ನು ನ.24 ರಂದು ಬೆಳಗ್ಗೆ 10.30 ಕ್ಕೆ ನಗರದ ವಾಜಪೇಯಿ ಬಡಾವಣೆಯ ಸಂಘದ ಕಾರ್ಯಾಲಯದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ರಾಜ್ಯ ಕನ್ನಡ ದೈವಜ್ಞ ಬ್ರಾಹ್ಮಣರ ಸಂಘ (ರಿ) ಆಡಳಿತ ಮಂಡಳಿಯ ಅಧ್ಯಕ್ಷ ಕೃಷ್ಣಮೂರ್ತಿ.ಎನ್ ತಿಳಿಸಿದರು.
ಶುಕ್ರವಾರ ಪತ್ರಿಕಾ ಭವನದಲ್ಲಿ ನಡೆದ ಪತ್ರಿಕಾಗೋಷ್ಟಿಯಲ್ಲಿ ಮಾತನಾಡಿದ ಅವರು, ಕಾರ್ಯಕರಮದ ಉದ್ಘಾಟನೆಯನ್ನು ರಾಜ್ಯ ಬಿಜೆಪಿ ವಕ್ತಾರರಾದ ಎಂ.ಜಿ.ಮಹೇಶ್ ನೆರೆವೇರಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಶಿವಮೊಗ್ಗ ನಗರ ಶಾಸಕ ಎಸ್.ಎನ್.ಚನ್ನಬಸಪ್ಪ ಭಾಗವಹಿಸಲಿದ್ದಾರೆ. ಕಾರ್ಯಕ್ರಮದ ಅಧ್ಯಕ್ಷತೆಯನ್ನು ರಾಜ್ಯ ಕನ್ನಡ ದೈವಜ್ಞ ಬ್ರಾಹ್ಮಣರ ಸಂಘದ ಅಧ್ಯಕ್ಷ ಎನ್.ಕೃಷ್ಣಮೂರ್ತಿ ವಹಿಸಲಿದ್ದಾರೆ ಎಂದರು.
ಈ ಕಾರ್ಯಕ್ರಮದಲ್ಲಿ ಕಟ್ಟಡ ಸಹಾಯಾರ್ಥ ದೇಣಿಗೆ ನೀಡಿದ ಸಮಾಜ ಬಾಂಧವರನ್ನು ಸನ್ಮಾನಿಸಲಾಗುವುದು. ಹಾಗು ಎಸ್‍ಎಸ್‍ಎಲ್‍ಸಿ ಮತ್ತು ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ – 2024 ರಲ್ಲಿ ಅತ್ಯುತ್ತಮ ಶ್ರೇಣಿಯಲ್ಲಿ ತೇರ್ಗಡೆಗೊಂಡಿರುವ ಸಮಾಜದ ಪ್ರತಿಭಾನ್ವಿತ ಮಕ್ಕಳನ್ನು ನಗದು ಪುರಸ್ಕಾರದೊಂದಿಗೆ ಸನ್ಮಾನಿಸಲಾಗುವುದು ಎಂದರು.
2010 ರಲ್ಲಿ ಸೂಡಾದಿಂದ ರೂ.36 ಲಕ್ಷ ಪಾವತಿಸಿ ನಿವೇಶನವನ್ನು ಪಡೆದಿದ್ದೇವೆ. ಈಗ ಸಮುದಾಯ ಭವನದ ಕನಸು ನನಸಾಗಬೇಕಾದಲ್ಲಿ ಸುಮಾರು ರೂ.6 ಕೋಟಿಗಳ ಅವಶ್ಯಕತೆ ಇದೆ. ಪ್ರವರ್ಗ 2ಎ ಒಬಿಸಿ ಗುಂಪಿನಲ್ಲಿ ಗುರುತಿಸಿಕೊಂಡಿರುವ ನಮ್ಮ ಜನಾಂಗಕ್ಕೆ ಇದುವರೆಗೂ ಸರ್ಕಾರದಿಂದ ಯಾವುದೇ ರೀತಿಯ ಆರ್ಥಿಕ ಸೌಲಭ್ಯ ದೊರೆಯದೇ ಇರುವುದು ಬೇಸರದ ಸಂಗತಿಯಾಗಿದೆ. ನೊಂದಾಯಿತ ಸಂಘದ 18 ವರ್ಷಗಳು ಪೂರ್ಣಗೊಂಡಿದ್ದರೂ, ದೇಶ ಸ್ವತಂತ್ರಗೊಂಡು 75 ವರ್ಷ ಕಳೆದರೂ ನಮ್ಮಂತಹ ಉಪಜಾತಿಗಳ ಅಭಿವೃದ್ಧಿ ಬಗ್ಗೆ ಗಮನಹರಿಸದೆ ಇರುವುದು ದುರಾದೃಷ್ವೇ ಸರಿ ಎಂದರು.
ಪತ್ರಿಕಾಗೋಷ್ಟಿಯಲ್ಲಿ ಆಡಳಿತ ಮಂಡಳಿಯ ಕಾರ್ಯದರ್ಶಿ ಮಂಜುನಾಥ್.ಡಿ.ಆರ್, ಖಜಾಂಚಿ ರಾಮಚಂದ್ರ.ಎನ್.ಡಿ, ಸಹಕಾರ್ಯದರ್ಶಿ ರಾಜು ಪಾಲಂಕರ್.ಜಿ, ಸಂಘಟನಾ ಕಾರ್ಯದರ್ಶಿ ವಸಂತ ಕುಮಾರ್.ಸಿ, ನಿರ್ದೇಶಕರಾದ ಮಂಜುನಾಥ್.ಎನ್, ವಿನಾಯಕ.ಎನ್, ಗೋಪಾಲಪ್ಪ, ಲೋಕೇಶ್.ಎಂ ಉಪಸ್ಥಿತರಿದ್ದರು.