Wednesday, January 22, 2025
Google search engine
Homeಇ-ಪತ್ರಿಕೆಹಾವೇರಿ: ಭಾರೀ ಮಳೆಗೆ ಮನೆ ಕುಸಿದು ಬಿದ್ದು 3 ಸಾವು; ಮೂವರು ಗಂಭೀರ

ಹಾವೇರಿ: ಭಾರೀ ಮಳೆಗೆ ಮನೆ ಕುಸಿದು ಬಿದ್ದು 3 ಸಾವು; ಮೂವರು ಗಂಭೀರ

ಹಾವೇರಿ: ಸವಣೂರುತಾಲೂಕಿನ ಮಾದಾಪುರ ಗ್ರಾಮದಲ್ಲಿ ಮಳೆಯಿಂದ ಮನೆಯೊಂದರ ಗೋಡೆ ಕುಸಿದು ಬಿದ್ದು ಮೂವರು ಸಾವನ್ನಪ್ಪಿರುವ ಘಟನೆ ನಡೆದಿದೆ.  

ಸಂತ್ರಸ್ತರನ್ನು ಚೆನ್ನಮ್ಮ(30), ಅಮೂಲ್ಯ (3), ಅನನ್ಯಾ (6) ಎಂದು ಗುರುತಿಸಲಾಗಿದೆ.

ಕಳೆದ ಎರಡು ದಿನಗಳಿಂದ ನಿರಂತರ ಮಳೆಯಾಗುತ್ತಿರುವ ಹಿನ್ನೆಲೆ ಇಂದು ನಸುಕಿನ ಜಾವ ಸುಮಾರು 3:30ಕ್ಕೆ ಮನೆಯ ಮೇಲ್ಚಾವಣಿ ಕುಸಿದು ದುರ್ಘಟನೆ ಸಂಭವಿಸಿದೆ. ಮನೆಯಲ್ಲಿ ಒಟ್ಟು 6 ಜನ ವಾಸವಾಗಿದ್ದರು. ಈ ಪೈಕಿ ಮೂವರು ಸಾವನ್ನಪ್ಪಿದ್ದು, ಮೂವರು ಗಾಯಗೊಂಡಿದ್ದಾರೆ.

ನಿರಂತರ ಸುರಿಯುತ್ತಿರುವ ಮಳೆ ಹಿನ್ನಲೆ ಮಣ್ಣಿನ ಮನೆಯ ಗೋಡೆ ಕುಸಿದಿದ್ದು, ಮಣ್ಣಿನಡಿ ಉಸಿರುಗಟ್ಟಿ ಕೊನೆಯುಸಿರೆಳೆದಿದ್ದಾರೆ. ಸವಣೂರು ಪೋಲಿಸ್ ಠಾಣೆಯಲ್ಲಿ ಘಟನೆ ಸಂಬಂಧ ಪ್ರಕರಣ ದಾಖಲಾಗಿದ್ದು, ಘಟನೆ ಸಂದರ್ಭದಲ್ಲಿ ಮನೆಯಲ್ಲಿ 7 ಮಂದಿ ಮಲಗಿದ್ದರು ಎಂಬ ಮಾಹಿತಿ ಲಭ್ಯವಾಗಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

RELATED ARTICLES
- Advertisment -
Google search engine

Most Popular

Recent Comments