ಬೆಂಗಳೂರು: ವಿಧಾನಸಭೆಯಲ್ಲಿ ಇಂದು ವಿರೋಧ ಪಕ್ಷಗಳ ಧರಣಿ ನಡುವೆಯೇ ಕಲಾಪ ಕಾರ್ಯಕಲಾಪಗಳನ್ನು ನಡೆಸಿದ ಸ್ಪೀಕರ್ ಯು.ಟಿ.ಖಾದರ್ ವಿಧೇಯಕಗಳ ಅಂಗೀಕಾರ ಪ್ರಸ್ತಾವನೆಯನ್ನು ಮುಗಿಸಿದರು. 6 ವಿಧೇಯಕಗಳ ಅಂಗೀಕಾರ, ನಾಲ್ಕು ನಿರ್ಣಯಗಳ ಅಂಗೀಕಾರವೂ ನಡೆಯಿತು.
ಅಂಗೀಕಾರಗೊಂಡ 6 ವಿಧೇಯಕಗಳು
>.ಕರ್ನಾಟಕ ಪ್ರಾಚೀನ ಮತ್ತು ಐತಿಹಾಸಿಕ ಸ್ಮಾರಕಗಳು ಮತ್ತು ಪುರಾತತ್ತ್ವ ಸ್ಥಳಗಳ ಮತ್ತು ಅವಶೇಷಗಳ ತಿದ್ದುಪಡಿ ವಿಧೇಯಕ-2024 ಅಂಗೀಕಾರ
>.ಕರ್ನಾಟಕ ಅನುಸೂಚಿತ ಜಾತಿಗಳು, ಅನುಸೂಚಿತ ಬುಡಕಟ್ಟುಗಳು ಮತ್ತು ಇತರೆ ಹಿಂದುಳಿದ ವರ್ಗಗಳ ತಿದ್ದುಪಡಿ ವಿಧೇಯಕ ಅಂಗೀಕಾರ
>.ಶ್ರೀ ರೇಣುಕಾಯಲ್ಲಮ್ಮ ದೇವಸ್ಥಾನ ಅಭಿವೃದ್ಧಿ ಪ್ರಾಧಿಕಾರ ವಿಧೇಯಕ-2024 ಅಂಗೀಕಾರ
>.ಕರ್ನಾಟಕ ಭೂ ಕಂದಾಯ ಎರಡನೇ ತಿದ್ದುಪಡಿ- 2024 ವಿಧೇಯಕ ಅಂಗೀಕಾರ
>.ಕರ್ನಾಟಕ ವೈದ್ಯಕೀಯ ನೋಂದಣಿ ಮತ್ತು ಇತರ ಕೆಲವು ಕಾನೂನು ತಿದ್ದುಪಡಿ ವಿಧೇಯಕ- 2024 ಅಂಗೀಕಾರ
>.ಕರ್ನಾಟಕ ಸರ್ಕಾರಿ ಉದ್ಯಾನವನಗಳ ಸಂರಕ್ಷಣಾ ತಿದ್ದುಪಡಿ ವಿಧೇಯಕ 2024 ಅಂಗೀಕಾರ