Monday, January 13, 2025
Google search engine
Homeಇ-ಪತ್ರಿಕೆಶಿವಮೊಗ್ಗ: ಮುಸ್ಲಿಂ ಬಾಂಧವರಿಂದ ಅದ್ದೂರಿ ಮೊಹರಮ್ ಹಬ್ಬ

ಶಿವಮೊಗ್ಗ: ಮುಸ್ಲಿಂ ಬಾಂಧವರಿಂದ ಅದ್ದೂರಿ ಮೊಹರಮ್ ಹಬ್ಬ

ಶಿವಮೊಗ್ಗ: ಭಾವೈಕ್ಯತೆಯ ಸಂಕೇತವಾದ ಮೊಹರಮ್ ಹಬ್ಬವನ್ನು ಇಂದು  ನಗರದ ರಾಮಣ್ಣಶ್ರೇಷ್ಟಿ ಪಾರ್ಕ್‌ನ ಬಳಿ ಮುಸ್ಲಿಂ ಬಾಂಧವರು ಅದ್ದೂರಿಯಾಗಿ ಆಚರಿಸಿದರು.

ಹತ್ತು ದಿನ ನಡೆಯುವ ಈ ಹಬ್ಬದಲ್ಲಿ ಹಿಂದೂ ಮುಸ್ಲಿಂ ಎಲ್ಲರೂ ಭಾಗವಹಿಸುತ್ತಾರೆ. ಈ ಹಬ್ಬದಂದು ಹೆಜ್ಜೆ ಕುಣಿತ, ಮುಳ್ತಾ ಹೆಜ್ಜೆ ಕುಣಿತ, ಮಟಕಿ ಹೆಜ್ಜೆ ಕುಣಿತ, ಮರಗಾಲು ಕುಣಿತ ಕುಣಿಯಲಾಗುತ್ತದೆ. ನಾಡಿನಾದ್ಯಂತ ಇಂದು ಈ ಮೊಹರಂ ಹಬ್ಬವನ್ನು ಸಂಭ್ರಮ ಸಡಗರದಿಂದ ಆಚರಿಸಲಾಗುತ್ತಿದೆ.

ಯಾವುದೇ ತಾರತಮ್ಯ ಇಲ್ಲದಂತೆ ಈ ಹಬ್ಬದಲ್ಲಿ ಹಿಂದೂ ಮುಸ್ಲಿಮರು ಪಾಲ್ಗೊಳ್ಳುತ್ತಾರೆ. ಮುಖ್ಯವಾಗಿ ಗ್ರಾಮೀಣ ಇದನ್ನು ಬಾಬಯ್ಯ ಹಬ್ಬ ಎನ್ನಲಾಗುತ್ತಿದೆ.

ಮೊಹರಂನಿಂದ ಇಸ್ಲಾಂ ವರ್ಷ ಪ್ರಾರಂಭವಾಗುತ್ತದೆ. ಇದಕ್ಕೆ ಚಾರಿತ್ರಿಕ ಹಿನ್ನೆಲೆ ಇದೆ. ಇಸ್ಲಾಂ ಸಂಸ್ಥಾಪಕ ಮಹಮ್ಮದ್ ಪೈಗಂಬರ್ ಕೊನೆಯ ಪುತ್ರಿ ಫಾತಿಮಾ ಬೇಬಿ ಪತಿ ಹಜರತ್ ಆಲಿ 4ನೇ ಖಲೀಫರಾಗಿದ್ದರು. ಆಗ ದಮಾಸ್ಕಸ್‌ನಲ್ಲಿ ಮುಅವಿಯ ಎಂಬ ಸರ್ದಾರನು ತಾನೇ ಖಲೀಫನೆಂದು ಸಾರಿಕೊಂಡು ಜನರ ಮೇಲೆ ಧರ್ಮ ಪ್ರಭುತ್ವ ಹೇರಿದನು.

ಹಜರತ್ ಅಲಿ ಬಳಿಕ ಅವರ ಮಗ ಪೈಗಂಬರರ ಎರಡನೇ ಮೊಮ್ಮಗ ಇಮಾಮ್ ಹುಸೇನ್ ಖಲೀಫ್ ಪಟ್ಟ ಅಲಂಕರಿಸಬೇಕಾಗಿತ್ತು. ಆದರೆ ಮುಅವಿಯಾನ್ ಮಗ ಯಜೀದನು ತಾನೇ ಖಲೀಫನೆಂದು ಘೋಷಿಸಿಕೊಂಡನು. ಈ ಅನ್ಯಾಯವನ್ನು ಇಮಾನ್ ಹುಸೇನರು ಪ್ರತಿಭಟಿಸಿದರು.

ಸತ್ಯ ನ್ಯಾಯವನ್ನು ಕಾಪಾಡಲು ಇಮಾಮ್ ಹುಸೇನರು 72 ಅನುಯಾಯಿಗಳೊಡನೆ ಯುದ್ಧ ಸಾರಿದರು. ಮೊಹರಂ ತಿಂಗಳ ಹತ್ತನೇ ದಿನ ಕರುಬಲಾ ಎಂಬ ಮರುಭೂಮಿಯಲ್ಲಿ ನಡೆದ ತುಮುಲ ಯುದ್ಧದಲ್ಲಿ ಇಮಾಮ್ ಹುಸೇನ್ ಹುತಾತ್ಮರಾದರು. ಶಾಂತಿ ಮತ್ತು ಧರ್ಮಕ್ಕಾಗಿ ತಮ್ಮನ್ನೆ ಸಮರ್ಪಿಸಿಕೊಂಡು ಹಜರತ್ ಹಸನ್ ಮತ್ತು ಹುಸೇನರ ಪುಣ್ಯ ಸ್ಮರಣೆಯ ನಿಮಿತ್ತ ಈ ಹಬ್ಬ ನಡೆಯುತ್ತದೆ.

RELATED ARTICLES
- Advertisment -
Google search engine

Most Popular

Recent Comments