ಬೆಂಗಳೂರು: ರೇಣುಕಾ ಸ್ವಾಮಿ ಕೊಲೆ ಪ್ರಕರಣದ ಆರೋಪಿಗಳ ನ್ಯಾಯಾಂಗ ಬಂಧನದ ಅವಧಿ ಮುಕ್ತಾಯವಾದ ಹಿನ್ನೆಲೆಯಲ್ಲಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿತ್ತು. ಇಂದು (ಜುಲೈ 18) ಅವರ ನ್ಯಾಯಾಂಗ ಬಂಧನವನ್ನು ಮತ್ತೆ 14 ದಿನಗಳ ಕಾಲ ವಿಸ್ತರಣೆ ಮಾಡಲಾಗಿದೆ.
ವಿಡಿಯೋ ಕಾನ್ಫರೆನ್ಸ್ ಮೂಲಕ ದರ್ಶನ್, ಪವಿತ್ರಾ ಗೌಡ ಹಾಗೂ ಇನ್ನುಳಿದ ಆರೋಪಿಗಳು ಹಾಜರಾಗಿದ್ದರು. ಎಲ್ಲರಿಗೂ ಆಗಸ್ಟ್ 1ರ ತನಕ ನ್ಯಾಯಾಂಗ ಬಂಧನ ಮುಂದುವರಿಯಲಿದೆ.
ವಿಶೇಷ ಪಬ್ಲಿಕ್ ಪ್ರಾಸಿಕ್ಯೂಟರ್ ಆರೋಪಿಗಳನ್ನು ಬಿಡುಗಡೆ ಮಾಡುವುದರಿಂದ ಪ್ರಸ್ತುತ ನಡೆಯುತ್ತಿರುವ ತನಿಖೆಗಳಿಗೆ ಅಡ್ಡಿಯಾಗಬಹುದು ಎಂದು ವಾದಿಸಿದರು. ಅಲ್ಲದೆ ಆರೋಪಿ ದರ್ಶನ್ ಮನೆಯಿಂದ 83.65 ಲಕ್ಷ ರೂಪಾಯಿ ನಗದು ವಶಪಡಿಸಿಕೊಂಡಿರುವುದನ್ನು ಪ್ರಾಸಿಕ್ಯೂಟರ್ ಬಹಿರಂಗಪಡಿಸಿದರು.
ಜಾಮೀನು ನೀಡುವುದರಿಂದ ನಿರ್ಣಾಯಕ ಸಾಕ್ಷ್ಯ ನಾಶಕ್ಕೆ ಕಾರಣವಾಗಬಹುದು ಎಂದು ಪ್ರಾಸಿಕ್ಯೂಷನ್ ಒತ್ತಿ ಹೇಳಿದೆ.