ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿ ನಟ ದರ್ಶನ್ ಅವರಿಗೆ ಗಲ್ಲು ಶಿಕ್ಷೆಯಾಗಬೇಕು ಎಂದು ಮಾಜಿ ಗೃಹಸಚಿವ ಆರಗ ಜ್ಞಾನೇಂದ್ರ ಆಗ್ರಹಿಸಿದ್ದಾರೆ.
ಪ್ರಕರಣ ತನಿಖೆ ವಿಷಯದಲ್ಲಿ ಪೊಲೀಸರ ನಡೆ ಅನುಮಾನಾಸ್ಪದವಾಗಿದೆ ಎಂದು ಗಂಭೀರವಾಗಿ ಆರೋಪಿಸಿರುವ ಅವರು, ದರ್ಶನ್ ಮಾಡಿರುವ ಕೃತ್ಯಕ್ಕೆ ಕ್ಷಮೆಯೇ ಇಲ್ಲ ಎಂದು ಹರಿಹಾಯ್ದಿದ್ದಾರೆ.
ಸರಕಾರದಿಂದ ರೇಣುಕಾಸ್ವಾಮಿ ಕುಟುಂಬಕ್ಕೆ ನ್ಯಾಯ ದೊರೆಯುವ ಸಾಧ್ಯತೆ ಇಲ್ಲದ ಕಾರಣ, ನ್ಯಾಯಾಲಯ ದರ್ಶನ್ ಗೆ ಗಲ್ಲುಶಿಕ್ಷೆ ವಿಧಿಸಬೇಕು ಎಂದು ಅವರು ಹೇಳಿದ್ದಾರೆ.
ಪ್ರಕರಣದ ಕುರಿತು ರಾಜ್ಯಾದ್ಯಂತ ಜನರು ಆಕ್ರೋಶವನ್ನು ಹೊರಹಾಕುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಈಗ ಹಲವು ರಾಜಕಾರಣಿಗಳು ದರ್ಶನ್ ಕುರಿತು ಟೀಕೆ ಆರಂಭಿಸಿದ್ದಾರೆ.