Tuesday, January 14, 2025
Google search engine
Homeಇ-ಪತ್ರಿಕೆಕೃಷಿ ನಮ್ಮ ದೇಶದ ಭವಿಷ್ಯ-ಕೃಷಿಕರ ಕೊಡುಗೆ ಅಪಾರ: ಎಸ್.ಮಧು ಬಂಗಾರಪ್ಪ

ಕೃಷಿ ನಮ್ಮ ದೇಶದ ಭವಿಷ್ಯ-ಕೃಷಿಕರ ಕೊಡುಗೆ ಅಪಾರ: ಎಸ್.ಮಧು ಬಂಗಾರಪ್ಪ

ಶಿವಮೊಗ್ಗ:   ಕೃಷಿ ನಮ್ಮ ದೇಶದ ಭವಿಷ್ಯವಾಗಿದ್ದು, ಕೃಷಿಗೆ ಎಂದಿಗೂ ಪ್ರಾಮುಖ್ಯತೆ ಇದೆ. ಕೃಷಿ ಮತ್ತು ತೋಟಗಾರಿಕೆ ಕೋರ್ಸ್‍ಗಳ ಬಗ್ಗೆ ವಿದ್ಯಾರ್ಥಿಗಳು ತಿಳಿದುಕೊಂಡು ಅದರ ಸದುಪಯೋಗ ಪಡೆಯಬೇಕೆಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಮಧು ಬಂಗಾರಪ್ಪ ವಿದ್ಯಾರ್ಥಿಗಳಿಗೆ ತಿಳಿಸಿದರು.

ಕೆಳದಿ ಶಿವಪ್ಪನಾಯಕ ಕೃಷಿ ಮತ್ತು ತೋಟಗಾರಿಕೆ ವಿಶ್ವವಿದ್ಯಾಲಯ ಹಾಗೂ ಶಾಲಾ ಶಿಕ್ಷಣ ಇಲಾಖೆ(ಪದವಿಪೂರ್ವ),ಶಿವಮೊಗ್ಗ ಇವರ ಸಹಯೋಗದಲ್ಲಿ ಜೂ.29 ರಂದು ಕುವೆಂಪು ರಂಗಮಂದಿರದಲ್ಲಿ ಏರ್ಪಡಿಸಲಾಗಿದ್ದ ಕೃಷಿ ಶಿಕ್ಷಣ ಸುಗ್ಗಿ_-2024  ಕಾರ್ಯ ಕ್ರಮ ಉದ್ಘಾಟಿಸಿ ಅವರಿ ಮಾತನಾಡಿದರು.

ಕೃಷಿ ಭವಿಷ್ಯದಲ್ಲಿ ಬೇಡಿಕೆ ಇರುವ ವಲಯ ಆಗಲಿದೆ. ಪ್ರಸ್ತುತ ನಮ್ಮ ದೇಶದಲ್ಲಿ ಶೇ.60 ರಷ್ಟು ರೈತರು ಇದ್ದು, ಕೃಷಿ ಕ್ಷೇತ್ರದಿಂದ ಜಿಡಿಪಿಗೆ ಶೇ.17 ಕೊಡುಗೆ ಇದೆ. ದೇಶಕ್ಕೆ ಕೃಷಿಕರ ಕೊಡುಗೆ ಅಪಾರವಾಗಿದೆ. ವಿದ್ಯಾರ್ಥಿಗಳು, ವಿಶೇಷವಾಗಿ ಪಿಯುಸಿ ಮುಗಿಸಿದ ವಿದ್ಯಾರ್ಥಿಗಳು ಕೃಷಿ, ತೋಟಗಾರಿಕೆ, ಅರಣ್ಯದಂತಹ ಪದವಿ-ಕೋರ್ಸ್‍ಗಳ ಬಗ್ಗೆ ತಿಳಿದುಕೊಳ್ಳಬೇಕು. ಈ ವೇದಿಕೆಯಲ್ಲಿ ಹಲವಾರು ಸಾಧಕರು, ಕೃಷಿ ತಜ್ಞರು ಕೃಷಿ ಕೋರ್ಸುಗಳು, ಉದ್ಯೋಗಾವಕಾಶಗಳ ಬಗ್ಗೆ ತಿಳಿಸಿಕೊಡಲಿದ್ದು, ವಿದ್ಯಾರ್ಥಿಗಳು ಕೃಷಿ ಕ್ಷೇತ್ರದಲ್ಲಿ ಸಾಧನೆ ಮಾಡಬೇಕೆಂಬ ಹಂಬಲ ಬೆಳೆಯುತ್ತದೆ.   ಕೃಷಿ ಉತ್ಪನ್ನಗಳು ಸಾಕಷ್ಟಿದ್ದು ಈ ಬಗ್ಗೆ ಜನರಿಗೆ ತಿಳಿಸುವಲ್ಲಿ ಹಿಂದೆ ಉಳಿದಿದ್ದೇವೆ. ಈ ಕೆಲಸವನ್ನು ನಾವು ಮಾಡಬೇಕಿದೆ. ಹಾಗೂ ಕೃಷಿ ಕೋರ್ಸ್‍ಗಳಿಗೆ ಸಾಕಷ್ಟು ಬೇಡಿಕೆ ಇದ್ದು ವಿದ್ಯಾರ್ಥಿಗಳು ಈ  ಕಾರ್ಯಕ್ರಮದ ಸದುಪಯೋಗ ಪಡೆಯಬೇಕೆಂದು ಮನವಿ ಮಾಡಿದರು.  
 
ಅನೇಕ ವಿದ್ಯಾರ್ಥಿಗಳಿಗೆ ನೀಟ್ ತರಬೇತಿ ಪಡೆಯುವುದು ಆರ್ಥಿಕ ಹೊರೆಯಾಗುತ್ತದೆ. ಆದ್ದರಿಂದ ಮೊದಲ ಬಾರಿಗೆ ಶಿಕ್ಷಣ ಇಲಾಖೆಯಿಂದ ವಿದ್ಯಾರ್ಥಿಗಳಿಗೆ ಉಚಿತವಾಗಿ ನೀಟ್ ಕೋಚಿಂಗ್ ನೀಡಲಾಗುವುದು. ಮೊದಲ ಹಂತದಲ್ಲಿ 20 ಸಾವಿರ ವಿದ್ಯಾರ್ಥಿಗಳಿಗೆ ಉಚಿತ ಕೋಚಿಂಗ್ ನೀಡುವ ಉದ್ದೇಶ ಹೊಂದಲಾಗಿದೆ ಎಂದರು ತಿಳಿಸಿದರು.

ಕಾ‍ರ್ಯಕ್ರಮದ ಅಧ್ಯಕ್ಷತೆಯನ್ನು ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದ ಕುಲಪತಿ ಡಾ.ಆರ್.ಸಿ.ಜಗದೀಶ ವಹಿಸಿದ್ದರು. ಆಡಳಿತ ಮಂಡಳಿ ಸದಸ್ಯರು ಮತ್ತು ತರೀಕೆರೆ ಕ್ಷೇತ್ರದ ಶಾಸಕರಾದ ಜಿ.ಎಚ್.ಶ್ರೀನಿವಾಸ, ಡಾ.ಪಿ.ಕೆ. ಬಸವರಾಜ, ಡಾ.ಬಿ.ಕೆ. ಕುಮಾರಸ್ವಾಮಿ ಮುಂತಾದವರು ಕಾರ್ಯಕ್ರಮದಲ್ಲಿ ಹಾಜರಿದ್ದರು.

RELATED ARTICLES
- Advertisment -
Google search engine

Most Popular

Recent Comments