Monday, January 13, 2025
Google search engine
Homeಇ-ಪತ್ರಿಕೆಕೃಷಿ ಕ್ಷೇತ್ರ ವೈಜ್ಞಾನಿಕವಾಗಿ ಅಭಿವೃದ್ಧಿ ಹೊಂದಬೇಕು

ಕೃಷಿ ಕ್ಷೇತ್ರ ವೈಜ್ಞಾನಿಕವಾಗಿ ಅಭಿವೃದ್ಧಿ ಹೊಂದಬೇಕು

ಕೃಷಿ-ತೋಟಗಾರಿಕಾ ಮೇಳದಲ್ಲಿ ಮಧು ಬಂಗಾರಪ್ಪ ಅಭಿಮತ


ಶಿವಮೊಗ್ಗ : ಕೃಷಿ ಕ್ಷೇತ್ರನ್ನು ವೈಜ್ಞಾನಿಕವಾಗಿ ಅಭಿವೃದ್ಧಿಪಡಿಸಬೇಕು ಹಾಗೂ ಅದನ್ನು ಕೈಗಾರಿಕೆಯಂತೆ ಕಾಣಬೇಕಿದೆ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಮಧು ಬಂಗಾರಪ್ಪ ತಿಳಿಸಿದರು.

ಶನಿವಾರ ಕೆಳದಿ ಶಿವಪ್ಪನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಿಗಳ ವಿಶ್ವವಿದ್ಯಾಲಯ ಶಿವಮೊಗ್ಗ ಹಾಗೂ ಕೃಷಿ ಮತ್ತು ಕೃಷಿ ಸಂಬಂಧಿತ ಅಭಿವೃದ್ದಿ ಇಲಾಖೆಗಳ ಸಹಯೋಗದೊಂದಿಗೆ ನವುಲೆ ಕೃಷಿ ಕಾಲೇಜು ಆವರಣದಲ್ಲಿ ಪೌಷ್ಟಿಕ ಆಹಾರಕ್ಕಾಗಿ ವಿಕಸಿತ ಕೃಷಿ ಧ್ಯೇಯ ವಾಕ್ಯದೊಂದಿಗೆ ಆಯೋಜಿಸಲಾಗಿದ್ದ ಕೃಷಿ-ತೋಟಗಾರಿಕ ಮೇಳದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಇಂದಿನ ಕೃಷಿ ಮೇಳದಲ್ಲಿ ಹಲವಾರು ಜಿಲ್ಲೆಗಳ ರೈತರು ಆಸಕ್ತಿಯಿಂದ ಪಾಲ್ಗೊಂಡಿದ್ದಾರೆ. ಕೃಷಿಯನ್ನು ವೈಜ್ಞಾನಿಕವಾಗಿ ಅಭಿವೃದ್ಧಿಪಡಿಸಬೇಕು. ಇನ್ನಷ್ಟು ಸಂಶೋಧನೆ ಆಗಬೇಕು. ಪ್ರಸ್ತುತ ಹಗಲು ರಾತ್ರಿ ಸಂಶೋಧನೆ ಮಾಡುವುದರ ಮೂಲಕ ರೈತರಿಗೆ ಸಹಕರಿಸುತ್ತಿರುವ ಸಂಶೋಧಕರು, ವಿಜ್ಞಾನಿಗಳಿಗೆ, ತಜ್ಞರಿಗೆ ಅಭಿನಂದನೆಗಳು ಎಂದರು.

ರೈತರ ಹಿತದೃಷ್ಟಿಯಿಂದ ವಿಶ್ವವಿದ್ಯಾಲಯ ಸ್ಥಾಪನೆಯಾಗಿದ್ದು, ವಿಶ್ವವಿದ್ಯಾಲಯ ಸ್ಥಾಪನೆಗೆ ಕಾರಣರಾದ ಮಾಜಿಮುಖ್ಯಮಂತ್ರಿಗಳಾದ ಬಂಗಾರಪ್ಪ, ಕಾಗೋಡು ತಿಮ್ಮಪ್ಪನವರು ಹಾಗೂ ಶ್ರಮಿಸಿದ ಎಲ್ಲರಿಗೆ ಧನ್ಯವಾದಗಳು ಎಂದರು.

ರೈತರಿಗೆ ವೈಜ್ಞಾನಿಕ ಕೃಷಿ ಬಗ್ಗೆ ಸಂಪೂರ್ಣವಾಗಿ ಮಾಹಿತಿ ಇಲ್ಲ. ಮಾಹಿತಿ ಕೊರತೆ ಇದೆ. ನಮ್ಮ ದೇಶದಲ್ಲಿ ಶೇ.70 ರಿಂದ 80 ರಷ್ಟು ಪಾಲು ರೈತರಿದ್ದು, ಅವರಿಗೆ ನಾವು ಸ್ಪಂದಿಸುವುದು ಬಹಳ ಮುಖ್ಯವಾಗಿದೆ. ಎಲೆಚುಕ್ಕಿ, ಕೊಳೆ ರೋಗ ನಿವಾರಣೆಗೆ ಕ್ರಮ ವಹಿಸಬೇಕಿದೆ. ಅವು ಬಾರದಂತೆ ತಡೆಯುವ ವ್ಯವಸ್ಥೆ ಮಾಡಬೇಕು. ಆ ನಿಟ್ಟಿನಲ್ಲಿ ನಾನು ಸರ್ಕಾರದ ಹಂತದಲ್ಲಿ ಪ್ರಯತ್ನಿಸುತ್ತೇನೆ ಎಂದರು.

ಇರುವಕ್ಕಿಯಲ್ಲಿ ರಾಜ್ಯ ಮಟ್ಟದ ಕೃಷಿ ಮೇಳ ಮಾಡಿ ಎಲ್ಲರ ಗಮನ ಸೆಳೆದು, ಭವಿಷ್ಯದ ಕೃಷಿಗೆ ಒಳ್ಳೆಯ ಸಂದೇಶ ಹೋಗಬೇಕು. ರೈತರಿಗೆ ಅಗತ್ಯವಾದ ಎಲ್ಲ ಮಾಹಿತಿ ತಲುಪಿಸಬೇಕು. ಯುವಜನತೆ ಕೃಷಿಯಲ್ಲಿ ಆಸಕ್ತಿ ತೋರುತ್ತಿದ್ದಾರೆ, ಅದು ಸಂತೋಷದ ಸಂಗತಿ. ಅವರಿಗೆ ನಾವು ಪೆÇ್ರೀತ್ಸಾಹ ಮತ್ತು ಸಹಕಾರ ನೀಡಬೇಕು ಎಂದು ಹೇಳಿದರು.

ನದಿ ಮತ್ತು ನೀರು ಸಂರಕ್ಷಣೆ ಮಾಡುವುದು ಅತಿ ಮುಖ್ಯವಾಗಿದ್ದು, ನೀರನ್ನ ಶುದ್ದವಾಗಿಟ್ಟುಕೊಳ್ಳುವ ಸಾಮಾಜಿಕ ಪರಿಜ್ಞಾನ ತರಬೇಕಿದೆ. ನದಿ ಉಳಿಸುವ ನಿಟ್ಟಿನಲ್ಲಿ ಸಮಿತಿ ರಚಿಸಲಾಗುವುದು. ವಿದ್ಯಾರ್ಥಿಗಳಿಗೆ ವಾರದಲ್ಲಿ ಒಂದು ದಿನ ಸಾಮಾನ್ಯ ಜ್ಞಾನ ಕಲಿಕೆ ಆರಂಭಿಸಲಾಗುವುದು. ವ್ಯಕ್ತಿತ್ವ ವಿಕಸನ, ಕೃಷಿಯ ಬಗ್ಗೆಯೂ ತಿಳಿಸಲಾಗುವುದು ಎಂದರು.

ಕಾರ್ಯಕ್ರಮದ ಉದ್ಘಾಟನೆಯನ್ನು ಬಸವ ಕೇಂದ್ರದ ಶ್ರೀ ಮರುಳ ಸಿದ್ದ ಸ್ವಾಮೀಜಿ ನೆರವೇರಿಸಿ ಮಾತನಾಡಿದರು. ಹಾಗೂ ಕಾರ್ಯಕ್ರಮದಲ್ಲಿ ಶ್ರೇಷ್ಟ ರೈತ ಮತ್ತು ರೈತ ಮಹಿಳೆ ಪ್ರಶಸ್ತಿ ವಿತರಣೆ ಮಾಡಲಾಯಿತು. ತಾಂತ್ರಿಕ ಕೈಪಿಡಿಗಳು, ಸುಧಾರಿತ ಶೇಂಗಾ, ರಾಗಿ ತಳಿಗಳನ್ನು ಬಿಡುಗಡೆಗೊಳಿಸಲಾಯಿತು.

ವೇದಿಕೆಯಲ್ಲಿ ತರೀಕೆರೆ ಕ್ಷೇತ್ರದ ಶಾಸಕರಾದ ಶ್ರೀನಿವಾಸ್, ವಿಧಾನ ಪರಿಷತ್ ಶಾಸಕರಾದ ಬಲ್ಕೀಶ್ ಬಾನು, ರಾಜ್ಯ ಭೋವಿ ನಿಗಮದ ಅಧ್ಯಕ್ಷರಾದ ರವಿಕುಮಾರ್, ಕಾಡಾ ಅಧ್ಯಕ್ಷರಾದ ಡಾ. ಅಂಶುಮಂತ್, ಗ್ಯಾರಂಟಿ ಯೋಜನೆಗಳ ಅನುμÁ್ಟನ ಪ್ರಾಧಿಕಾರದ ಜಿಲ್ಲಾ ಅಧ್ಯಕ್ಷ ಸಿ.ಎಸ್.ಚಂದ್ರಭೂಪಾಲ್, ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದ ಕುಲಪತಿಗಳಾದ ಡಾ. ಆರ್.ಸಿ.ಜಗದೀಶ್, ಡಾ. ರಾಜೇಂದ್ರ ಹೆಗಡೆ ಸೇರಿದಂತೆ ಅಧಿಕಾರಿಗಳು, ರೈತರು ಪಾಲ್ಗೊಂಡಿದ್ದರು.

RELATED ARTICLES
- Advertisment -
Google search engine

Most Popular

Recent Comments