ಶಿವಮೊಗ್ಗ: ಶಿವಮೊಗ್ಗ ಸರ್ಕಾರಿ ಬಸ್ ನಿಲ್ದಾಣದ ಪುರುಷರ ವಿಶ್ರಾಂತಿ ಕೊಠಡಿಯಲ್ಲಿ ಸುಮಾರು 45-50 ವರ್ಷ ವ್ಯಕ್ತಿ ಮಲಗ್ಗಿದಲ್ಲೇ ಮೃತಪಟ್ಟಿದ್ದು, ಮೃತ ದೇಹವು ಮೆಗ್ಗಾನ್ ಆಸ್ಪತ್ರೆಯ ಶವಾಗಾರದಲ್ಲಿರಿಸಲಾಗಿದೆ.
ಮೃತ ವ್ಯಕ್ತಿಯು 05.06 ಅಡಿ ಎತ್ತರ, ಗೋಧಿ ಮೈಬಣ್ಣ, ದುಂಡು ಮುಖ, ಸಾಧಾರಣ ಮೈಕಟ್ಟು ಹೊಂದಿದ್ದು, ಬಲ ಕಿಬ್ಬೊಟ್ಟೆಯ ಮೇಲೆ ರಾಗಿಕಾಳು ಗಾತ್ರದ ಕಪ್ಪು ಮಚ್ಚೆ ಇರುತ್ತದೆ. ಮೈಮೇಲೆ ಕಪ್ಪುಬಿಳಿ ಬಣ್ಣದ ತುಂಬು ತೋಳಿನ ಶರ್ಟ್, ಕಂದು ಬಣ್ಣದ ಅರ್ಧ ತೋಳಿನ ಟೀಶರ್ಟ್, ಕಂದು ಬಣ್ಣದ ಚುಕ್ಕಿಗಳಿರುವ ಲುಂಗಿ ಧರಿಸಿರುತ್ತಾರೆ.
ಈ ಮೃತ ವ್ಯಕ್ತಿಯ ವಾರಸ್ಸುದಾರರು ಇದ್ದಲ್ಲಿ ದೊಡ್ಡಪೇಟೆ ಪೊಲೀಸ್ ಠಾಣೆ ದೂ.ಸಂ.:08182-261414/ 9916882544 ನ್ನು ಸಂಪರ್ಕಿಸಿ ಮಾಹಿತಿ ನೀಡುವಂತೆ ಪೊಲೀಸ್ ಪ್ರಕಟಣೆ ತಿಳಿಸಿದೆ.