ಅಂಕೋಲಾ: ಭಾರೀ ಮಳೆಗೆ ಅಂಕೋಲಾ ಕುಮಟಾ ಮಾರ್ಗ ಮಧ್ಯೆ ಶಿರೂರು ಬೊಮ್ಮಯ್ಯ ದೇವಸ್ಥಾನದ ಬಳಿ ಭಾರಿ ಪ್ರಮಾಣದ ಗುಡ್ಡ ಕುಸಿತವಾಗಿದೆ. ಏಳು ಮಂದಿ ಸಾವನ್ನಪ್ಪಿದ್ದಾರೆ. ಇದುವರೆಗೆ ಒಟ್ಟು 6 ಜನರ ಮೃತದೇಹಗಳು ಪತ್ತೆಯಾಗಿವೆ.
ಇನ್ನುಳಿದವರ ಮೃತ ದೇಹಗಳಿಗಾಗಿ ಎನ್ಡಿಆರ್ಎಫ್ ಶೋಧ ಕಾರ್ಯ ಮುಂದುವರೆಸಿದೆ. ಇನ್ನು ಈ ಘಟನೆಯಲ್ಲಿ ಹೆದ್ದಾರಿ ಪಕ್ಕದಲ್ಲಿ ಹೋಟೆಲ್ ಇಟ್ಟುಕೊಂಡಿದ್ದ ಒಂದೇ ಕುಟುಂಬದ ಲಕ್ಷ್ಮಣ್ ನಾಯ್ಕ್, ಪತ್ನಿ ಶಾಂತಿ, ಪುತ್ರಿ ಆವಾತಿಕಾ ಹಾಗೂ ಪುತ್ರ ರೋಷನ್(11) ಸೇರಿ ಟ್ರಕ್ ಚಾಲಕನ ಶವ ಪತ್ತೆಯಾಗಿವೆ. ಈ ನಾಲ್ವರ ಮೃತದೇಹಗಳು ಗೋಕರ್ಣ ಸಮೀಪ ಸಿಕ್ಕಿವೆ. ಇನ್ನು ಕುಮಟಾ ಸರ್ಕಾರಿ ಅಸ್ಪತ್ರೆಯ ಶವಾಗಾರದಲ್ಲಿ ಮೃತ ದೇಹ ಇಡಲಾಗಿದೆ. ಇನ್ನಿಬ್ಬರ ಮೃತ ದೇಹಗಳನ್ನು ಗುರುತಿಸಬೇಕಿದೆ.
ಹೆದ್ದಾರಿಯಲ್ಲಿ ಟೀ ಅಂಗಡಿ ಮತ್ತಿತರ ಸಣ್ಣಪುಟ್ಟ ಅಂಗಡಿಗಳು ಸಂಪೂರ್ಣ ಹಾನಿಯಾಗಿವೆ.
ಗುಡ್ಡ ಕುಸಿತ ರಭಸಕ್ಕೆ ಹೆದ್ದಾರಿ ಅಂಚಿಗೆ ನಿಲ್ಲಿಸಿದ್ದ ಗ್ಯಾಸ್ ಟ್ಯಾಂಕರ್ ವಾಹನ, ಗಂಗಾವಳಿ ನದಿ ನೀರಿನಲ್ಲಿ ಕೊಚ್ಚಿ ಹೋಗಿದೆ. ಲಾರಿ ಮತ್ತಿತರ ವಾಹನಗಳು ಮಣ್ಣಿನಡಿ ಸಿಲುಕಿಕೊಂಡಿವೆ . ಒಮ್ಮೆಲೆ ಗುಡ್ಡ ಕುಸಿದು ಮಣ್ಣು ನದಿಯಲ್ಲಿ ಜೋರಾಗಿ ಜರಿದ ಪರಿಣಾಮ ಗಂಗಾವಳಿ ನದಿ ಪಾತ್ರದ ಆಚೆ ದಡದ ಮನೆಯೂ ಕೊಚ್ಚಿಹೋಗಿದೆ ಎನ್ನಲಾಗಿದೆ.
ರಾಷ್ಟ್ರೀಯಲ್ಲಿ ಟ್ಯಾಂಕರ್ ಚಾಲಕ ಹಾಗೂ ಕ್ಲೀನರ್ ಟಿ ಕುಡಿಯುತ್ತಿದ್ದರು. ಇದೇ ವೇಳೆ ಭಾರಿ ಗುಡ್ಡ ಕುಸಿದಿದೆ. ಗುಡ್ಡ ಕುಸಿತದ ರಭಸಕ್ಕೆ ಗ್ಯಾಸ್ ಟ್ಯಾಂಕರ್ ನದಿಗೆ ಬಿದ್ದಿದ್ದು, ಚಾಲಕ ಹಾಗೂ ಕ್ಲೀನರ್ ಮಣ್ಣಿನಡಿ ಸಿಲುಕಿದ್ದಾರೆ. ಮಣ್ಣಿನಡಿ ಸಿಲುಕಿದವರು ಮೃತಪಟ್ಟಿರುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ.