ಚಿಕ್ಕಮಗಳೂರು: ಭದ್ರಾ ನದಿಯ ನೆರೆಗೆ ಬಾಳೆಹೊನ್ನೂರು ಮುಳುಗಿದೆ.
ಕಳೆದ 20 ದಿನಗಳಿಂದ ಮಳೆಯು ರಾಜ್ಯಾದ್ಯಂತ ಬಿರುಸು ಪಡೆದಿದ್ದು, ಅದರಲ್ಲೂ ಕಳೆದ ಎರಡು ದಿನಗಳಿಂದ ಸುರಿದ ಭಾರೀ ಮಳೆಗೆ ಭದ್ರಾ ನದಿ ಉಕ್ಕಿ ಹರಿದಿದೆ. ಭದ್ರಾ ನದಿ ದಂಡೆಯಲ್ಲಿರುವ ತೋಟಗಳು ಸಂಪೂರ್ಣ ಮುಳುಗಿವೆ.
ರಾಜ್ಯದ ನಾಲ್ಕು ಜಿಲ್ಲೆಗೆ ರೆಡ್ ಅಲರ್ಟ್ ಜಾರಿಯಾಗಿದ್ದರೆ ಮೂರು ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಜಾರಿಯಾಗಿದದೆ
ದಕ್ಷಿಣ ಕನ್ನಡ, ಕೊಡಗು, ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗೆ ರೆಡ್ ಅಲರ್ಟ್ ಜಾರಿಯಾಗಿದ್ದು, ಭಾರೀ ಮಳೆ ಬೀಳಲಿದೆ. ಉತ್ತರ ಕನ್ನಡ, ಉಡುಪಿ, ಹಾಸನ ಜಿಲ್ಲೆಗಳಿಗೆ ಹವಾಮಾನ ಇಲಾಖೆ) ಆರೆಂಜ್ ಅಲರ್ಟ್ ಜಾರಿ ಮಾಡಿದೆ. ಬೆಳಗಾವಿ, ಮೈಸೂರಿಗೆ ಯೆಲ್ಲೋ ಅಲರ್ಟ್ ಜಾರಿಯಾಗಿದೆ.