Tuesday, January 14, 2025
Google search engine
Homeಇ-ಪತ್ರಿಕೆಚಂದ್ರಗುತ್ತಿ ಶ್ರೀ ರೇಣುಕಾಂಬದ ಕಾಣಿಕೆ ಹುಂಡಿಯಲ್ಲಿ ಸಂಗ್ರಹವಾಗಿದ್ದೆಷ್ಟು?

ಚಂದ್ರಗುತ್ತಿ ಶ್ರೀ ರೇಣುಕಾಂಬದ ಕಾಣಿಕೆ ಹುಂಡಿಯಲ್ಲಿ ಸಂಗ್ರಹವಾಗಿದ್ದೆಷ್ಟು?

ಸೊರಬ: ಚಂದ್ರಗುತ್ತಿಯ ಐತಿಹಾಸಿಕ ಹಾಗೂ ಪುರಾಣ ಪ್ರಸಿದ್ಧ ಶ್ರೀ ರೇಣುಕಾಂಬ ದೇವಸ್ಥಾನದ ಕಾಣಿಕೆ  ಹುಂಡಿ ಎಣಿಕೆ ಕಾರ್ಯ ದೇವಸ್ಥಾನದ ಆಡಳಿತ ಮಂಡಳಿ ಕಚೇರಿಯಲ್ಲಿ ನಡೆಯಿತು. 

ಸೊರಬ ತಾಲೂಕು  ದಂಡಾಧಿಕಾರಿ  ಹುಸೇನ್ ಸರಕಾವಸ್ ಅವರ ಸಮ್ಮುಖದಲ್ಲಿ ಜಾತ್ರೆ, ಮತ್ತು ಹುಣ್ಣಿಮೆ ಪೂರ್ವದಲ್ಲಿ ಭಕ್ತರ ಮೂಲಕ ಬಂದಂತಹ ಕಾಣಿಕೆ ಹುಂಡಿ ಹಣ ಏಣಿಕೆ  ಕಾರ್ಯ ನಡೆಸಲಾಯಿತು.

ಕಳೆದ ಬಾರಿ ಕಾಣಿಕೆ ಹುಂಡಿ ಎಣಿಸಿದಾಗ  22,53,700 ರೂ. ಕಾಣಿಕೆ ಸಂಗ್ರಹವಾಗಿತ್ತು, ಈ ಬಾರಿ ದೇವಸ್ಥಾನದ ಕಾಣಿಕೆ ಹುಂಡಿಯಲ್ಲಿ 43,61,080,    ರೂ. ಕಾಣಿಕೆ ಸಂಗ್ರಹವಾಗಿದೆ ಇತ್ತೀಚಿನ ವರ್ಷಗಳಲ್ಲಿ ಅತಿ ಹೆಚ್ಚು ಕಾಣಿಕೆ ಸಂಗ್ರಹವಾಗಿರುತ್ತದೆ.

ಏಣಿಕೆ  ಕಾರ್ಯ ನಡೆಯುವ ಕೊಠಡಿ ಸುತ್ತ ಸಿಸಿ ಕ್ಯಾಮೆರಾ ಆಳವಡಿಸಲಾಗಿತ್ತು.  ಕಾಣಿಕೆ ಹುಂಡಿ ಎಣಿಕೆ ಕಾರ್ಯದಲ್ಲಿ ನಾಡಕಚೇರಿ ಉಪ ತಹಶೀಲ್ದಾರ್ ಲಲಿತ ,  ಶಿರಸ್ತೇದಾರ್ ಎಸ್. ನಿರ್ಮಲ ಪ್ರಭಾಕರ್, ರಾಜಸ್ವ ನಿರೀಕ್ಷಕ ವಿ.ಎಲ್ ಶಿವಪ್ರಸಾದ್, ದೇವಸ್ಥಾನದ ಕಾರ್ಯ ನಿರ್ವಹಣಾಧಿಕಾರಿ ಪ್ರಮೀಳಾ ಮಹೇಶ್, ಮುಜರಾಯಿ ಇಲಾಖೆ ವಿಷಯ ನಿರ್ವಾಹಕಿ ಎಂ‌.ಶೃತಿ, ಹಾಗೂ ಕೆನರಾ ಬ್ಯಾಂಕ್  ಶಾಖೆಯ ಸಹಾಯಕ ವ್ಯವಸ್ಥಾಪಕರು,  ಕಂದಾಯ ಇಲಾಖೆ ಗ್ರಾಮ ಲೆಕ್ಕಿಗರು, ಗ್ರಾಮ ಸಹಾಯಕರು, ದೇವಸ್ಥಾನದ ಸಿಬ್ಬಂದಿಗಳು ಪಾಲ್ಗೊಂಡಿದ್ದರು.

RELATED ARTICLES
- Advertisment -
Google search engine

Most Popular

Recent Comments