ಶಿವಮೊಗ್ಗ : ಮಾದಕ ದ್ರವ್ಯ ವ್ಯಸನವು ಸಾಮಾಜಿಕ ಪಿಡುಗಾಗಿದ್ದು, ಮಾದಕ ವಸ್ತುಗಳ ಸೇವನೆ ಮಾಡುವುದರಿಂದ ದೈಹಿಕ ಮತ್ತು ಮಾನಸಿಕ ಆರೋಗ್ಯದ ಮೇಲೆ ದುಷ್ಪರಿಣಾಮಗಳು ಉಂಟಾಗುತ್ತವೆ. ಆದ್ದರಿಂದ ಯಾರೂ ಮಾದಕ ದ್ರವ್ಯದ ವ್ಯಸನಕ್ಕೆ ಒಳಗಾಗಬೇಡಿ ಎಂದು ಶಿವಮೊಗ್ಗ ಜಿಲ್ಲಾ ಪೊಲೀಸ್ ಅಧೀಕ್ಷಕ ಮಿಥುನ್ ಕುಮಾರ್.ಜಿ.ಕೆ ಐಪಿಎಸ್ ಹೇಳಿದರು.
ಗುರುವಾರ ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನದ ವಿಶ್ವವಿದ್ಯಾಲಯ ಇರುವಕ್ಕಿಯಲ್ಲಿ ಆಯೋಜಿಸಿದ್ದ ಅರಿವು ಕಾರ್ಯಕ್ರಮದಲ್ಲಿ ಮುಖ್ಯ ಅಥಿತಿಗಳಾಗಿ ಭಾಗವಹಿಸಿ, ವಿದ್ಯಾರ್ಥಿಗಳ ಕುರಿತು ಮಾತನಾಡಿದ ಅವರು, ಶಿವಮೊಗ್ಗ ಜಿಲ್ಲಾ ಪೆÇಲೀಸ್ ಇಲಾಖೆಯಿಂದ ಮಾದಕ ದ್ರವ್ಯದ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಂಡು, ಎನ್‍ಡಿಪಿಎಸ್ ಕಾಯ್ದೆಯಡಿ ಹೆಚ್ಚಿನ ಪ್ರಕರಣಗಳನ್ನು ದಾಖಲಿಸಲಾಗುತ್ತಿದೆ. ನಿಮಗೆ ಮಾದಕ ವಸ್ತುಗಳ ಸಾಗಾಟ, ಮಾರಾಟ, ಸೇವನೆ ಮತ್ತು ಬೆಳೆಯುತ್ತಿರುವ ಬಗ್ಗೆ ಮಾಹಿತಿ ಇದ್ದಲ್ಲಿ ಪೆÇಲೀಸ್ ಇಲಾಖೆಗೆ ಮಾಹಿತಿ ನೀಡಿ ಎಂದರು.
ಐಟಿ, ಬಿಟಿ ಉದ್ಯಮ ಮತ್ತು ತಂತ್ರಜ್ಞಾನವು ಇಷ್ಟು ಮುಂದುವರೆದರೂ ಕೂಡ, ಇವತ್ತಿಗೂ ಕೃಷಿಯು ಭಾರತದ ಆರ್ಥಿಕತೆಯಲ್ಲಿ ಹೆಚ್ಚಿನ ಪಾಲು ಹೊಂದಿದ್ದು, ಭಾರತ ದೇಶದ ಆರ್ಥಿಕತೆಯ ಬೆನ್ನೆಲುಬಾಗಿರುತ್ತದೆ. ಭಾರತದ ಕೃಷಿಯು ಮಳೆಯಾಧಾರಿತ ಕೃಷಿಯಾಗಿದ್ದು, ಹೆಚ್ಚಿನ ಪ್ರಮಾಣದಲ್ಲಿ ಸಣ್ಣ ಹಿಡುವಳಿದಾರರೇ ಇದ್ದು, ತಮಗೆ ಇರುವ ಸ್ವಲ್ಪ ಜಮೀನಿನಲ್ಲಿಯೇ ಹೆಚ್ಚು ಲಾಭ ತರುವ ಬೆಳೆಗಳನ್ನು ಬೆಳೆಯುತ್ತಾರೆ. ಹವಮಾನದಲ್ಲಿನ ಸಣ್ಣಪುಟ್ಟ ವ್ಯತ್ಯಾಸವೂ ಕೂಡ ಕೃಷಿಯ ಮೇಲೆ ನೇರ ಪರಿಣಾಮ ಬೀರಿ ರೈತರಿಗೆ ತೊಂದರೆಯಾಗುತ್ತದೆ. ಆದ್ದರಿಂದ ರೈತರಿಗೆ ಸಹಾಯವಾಗುವ ನಿಟ್ಟಿನಲ್ಲಿ ಕೃಷಿ ವಿಜ್ಞಾನ ವಿದ್ಯಾರ್ಥಿಗಳಾದ ನಿಮ್ಮ ಪಾತ್ರವು ಪ್ರಮುಖವಾಗಿರುತ್ತದೆ ಎಂದರು.
ನಿಮ್ಮ ತಂದೆ ತಾಯಿಯವರ ಕನಸನ್ನು ಈಡೇರಿಸಿ, ವಿದ್ಯಾರ್ಥಿ ಜೀವನವು ಮುಂದಿನ ನಿಮ್ಮ ಜೀವನಕ್ಕೆ ದಾರಿ ದೀಪವಾಗಲಿ ಎಂದು ಆಶಿಸಿದರು.
ಕಾರ್ಯಕ್ರಮದಲ್ಲಿ ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನದ ವಿಶ್ವವಿದ್ಯಾಲಯ ಇರುವಕ್ಕಿಯ ಕುಲಸಚಿವ ಡಾ. ಶಶಿಧರ್.ಕೆ.ಸಿ, ಶಿಕ್ಷಣ ನಿರ್ದೇಶಕ ಡಾ. ಹೇಮ್ಲ ನಾಯಕ್, ವಿದ್ಯಾರ್ಥಿ ಕಲ್ಯಾಣ ವಿಭಾಗದ ಡೀನ್ ಡಾ. ಶಿವಶಂಕರ್ ಹಾಗೂ ಸಾಗರ ಉಪ ವಿಭಾಗದ ಡಿವೈಎಸ್‍ಪಿ ಗೋಪಾಲಕೃಷ್ಣ ಟಿ ನಾಯಕ್, ಸಾಗರ ಟೌನ್ ಪೆÇಲೀಸ್ ಠಾಣೆ ಪಿಐ ಮಹಾಬಲೇಶ್ವರ್ ನಾಯಕ್, ಕಾರ್ಗಲ್ ವೃತ್ತ ಸಿಪಿಐ ನಾಗರಾಜ್ ಮತ್ತು ವಿಶ್ವವಿದ್ಯಾಲಯದ ಪ್ರಾಧ್ಯಾಪಕರು ಮತ್ತು ವಿಧ್ಯಾರ್ಥಿಗಳು ಉಪಸ್ಥಿತರಿದ್ದರು.