ಚಾಲಕನ ನಿಯಂತ್ರಣ ತಪ್ಪಿದ ಸಿಟಿ ಬಸ್ ಚರಂಡಿಗೆ ಪಲ್ಟಿಯಾಗಿದೆ. ಶಿವಮಗ್ಗದ ಬೊಮ್ಮನಕಟ್ಟೆ ರೈಲ್ವೆ ಗೇಟ್ ಬಳಿ ಇಂದು ಬೆಳೆಗ್ಗೆ ಘಟನೆ ಸಂಭವಿಸಿದೆ.
ಬಸ್ಸಿನಲ್ಲಿ ವಿದ್ಯಾರ್ಥಿಗಳು ಸೇರಿ ಸುಮಾರು 20 ಪ್ರಯಾಣಿಕರಿದ್ದರು. ಘಟನೆಯಲ್ಲಿ ಗಾಯಗೊಂಡಿರುವ ಪ್ರಯಾಣಿಕರನ್ನು ಸ್ಥಳೀಯರು ರಕ್ಷಣೆ ಮಾಡಿದ್ದಾರೆ. ಸಿಟಿ ಬಸ್ಸು ಬೊಮ್ಮನಕಟ್ಟೆಯಿಂದ ಗೋಪಾಳಕ್ಕೆ ತೆರಳುತ್ತಿತ್ತು. ರೈಲ್ವೆ ಗೇಟ್ ಬಳಿ ಚಾಲಕನ ನಿಯಂತ್ರಣ ತಪ್ಪಿದ ಬಸ್ ವಿದ್ಯುತ್ ಕಂಬಕ್ಕೆ ಡಿಕ್ಕಿಯಾಗಿ ಬಳಿಕ ಫೆನ್ಸ್‌ಗೆ ಅಪ್ಪಳಿಸಿ ಪಲ್ಟಿಯಾಗಿದೆ ಎಂದು ತಿಳಿದು ಬಂದಿದೆ.
ಗಾಯಾಳುಗಳನ್ನು ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆ ಮತ್ತು ಸರ್ಜಿ ಆಸ್ಪತ್ರೆಗೆ ರವಾನಿಸಲಾಗಿದೆ. ವಿನೋಬನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ.