ಶಿವಮೊಗ್ಗ, ಜಿಲ್ಲೆಯಲ್ಲಿರುವ ಎಲ್ಲಾ ೧೭೨೧ ಮತಗಟ್ಟೆಗಳಲ್ಲಿ ಚುನಾವಣಾ ಆಯೋಗದ ನಿರ್ದೇಶನದ ಪ್ರಕಾರ ಅಗತ್ಯ ಮೂಲಸೌಕರ್ಯ ಗಳನ್ನು ಫೆ. ೧೦ರ ಒಳಗಾಗಿ ಕಲ್ಪಿಸಿ ವರದಿಯನ್ನು ಸಲ್ಲಿಸಬೇಕು ಎಂದು ಜಿಲ್ಲಾಧಿಕಾರಿ ಡಾ.ಎಂ.ಲೋಕೇಶ್ ಅಧಿಕಾರಿಗಳಿಗೆ ತಿಳಿಸಿದರು.
ಇಂದು ಜಿ.ಪಂ. ಸಭಾಂಗಣದಲ್ಲಿ ಚುನಾ ವಣಾ ಸಿದ್ಧತೆ ಕುರಿತು ಅಧಿಕಾರಿಗಳಿಗೆ ಆಯೋಜಿ ಸಲಾಗಿದ್ದ ಕಾರ್ಯಾಗಾರದಲ್ಲಿ ಮಾತನಾಡಿದ ಅವರು, ಎಲ್ಲಾ ಮತಗಟ್ಟೆಗಳಲ್ಲಿ ವಿಕಲಚೇತ ನರಿಗೆ ಅನುಕೂಲವಾಗುವಂತೆ ರ‍್ಯಾಂಪ್, ಕುಡಿಯುವ ನೀರಿನ ಸೌಲಭ್ಯ, ವಿದ್ಯುತ್ ವ್ಯವಸ್ಥೆ, ಮತದಾರರಿಗೆ ಕುಳಿತುಕೊಳ್ಳಲು ಕೋಣೆ, ಅಗತ್ಯ ಪೀಠೋಪಕರಣಗಳು, ಶೌಚಾಲಯ ವ್ಯವಸ್ಥೆ ಯನ್ನು ಕಡ್ಡಾಯವಾಗಿ ಕಲ್ಪಿಸಲು ಚುನಾವಣಾ ಆಯೋಗ ಆದೇಶ ನೀಡಿದೆ. ಮತಗಟ್ಟೆಗಳ ದುರಸ್ತಿ ಕಾರ್ಯ, ಮೂಲಸೌಕರ್ಯ ಕಲ್ಪಿಸುವ ಕಾರ್ಯವನ್ನು ಸಂಬಂಧಪಟ್ಟ ಇಲಾಖೆಗಳು ತಕ್ಷಣ ಕೈಗೆತ್ತಿಕೊಳ್ಳಬೇಕು ಎಂದರು.
ಹೆಚ್ಚಿನ ಅನುದಾನ ಅಗತ್ಯವಿರುವ ಕಾಮಗಾರಿ ಗಳ ಅಂದಾಜು ಪಟ್ಟಿಯನ್ನು ಅನುಮೋದನೆಗಾಗಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವ ಹಣಾಧಿಕಾರಿ ಅವರಿಗೆ ತಕ್ಷಣ ಸಲ್ಲಿಸುವಂತೆ ತಿಳಿಸಿದ ಅವರು, ಮತದಾರರ ಮೇಲೆ ಒತ್ತಡ ಬೀರುವಂತಹ ವ್ಯಕ್ತಿಗಳನ್ನು, ಸಮಾಜ ಘಾತುಕರನ್ನು ಗುರುತಿಸಿ ಅವರಿಂದ ಬಾಂಡ್ ಪಡೆಯುವ ಕಾರ್ಯವನ್ನು ಆರಂಭಿಸಬೇಕು. ಹಿಂದಿನ ಚುನಾವಣೆ ಸಂದರ್ಭದಲ್ಲಿ ನಡೆದಿರುವ ಅಹಿತಕರ ಘಟನೆಗಳು, ಬದಲಾದ ಸಾಮಾಜಿಕ ಸನ್ನಿವೇಶದಲ್ಲಿ ಆಯಾ ಮತಗಟ್ಟೆ ವ್ಯಾಪ್ತಿಯಲ್ಲಿ ಉಂಟಾಗಿರುವ ಬದಲಾವಣೆಗಳನ್ನು ಗುರುತಿಸಿ ಸೂಕ್ಷ್ಮ ಮತ್ತು ಅತಿಸೂಕ್ಷ್ಮ ಮತಗಟ್ಟೆಗಳನ್ನು ಗುರುತಿಸಬೇಕು. ಈ ರೀತಿಯಲ್ಲಿ ಗುರುತಿಸುವ ಸಂದರ್ಭದಲ್ಲಿ ಅದಕ್ಕೆ ಸೂಕ್ತ ವಿವರಣೆಯನ್ನು ನೀಡಬೇಕು ಎಂದು ಹೇಳಿದರು.
ಪೊಲೀಸ್ ವರಿಷ್ಟಾಧಿಕಾರಿ ಅಭಿನವ ಖರೆ ಮಾತನಾಡಿ, ಸೂಕ್ಷ್ಮ ಮತ್ತು ಅತಿಸೂಕ್ಷ್ಮ ಮತಗಟ್ಟೆಗಳ ಗುರುತಿಸುವಿಕೆ, ಆಮಿಷ ಮತ್ತು ಒತ್ತಡಕ್ಕೆ ಒಳಗಾಗಲು ಸಾಧ್ಯವಿರುವ ಮತದಾ ರರ ಪ್ರದೇಶಗಳ ಗುರುತಿಸುವಿಕೆ ಕಾರ್ಯವನ್ನು ತಕ್ಷಣದಿಂದ ಆರಂಭಿಸುವಂತೆ ತಿಳಿಸಿದರು.
ಅಪರ ಜಿಲ್ಲಾಧಿಕಾರಿ ಕೆ.ಚನ್ನಬಸಪ್ಪ ಮಾತ ನಾಡಿ, ಮತಗಟ್ಟೆಗಳು, ಅದರ ವ್ಯಾಪ್ತಿ, ಚುನಾ ವಣಾಧಿಕಾರಿಗಳ ಕರ್ತವ್ಯಗಳು, ಸೂಕ್ಷ್ಮ ಮತ್ತು ಅತಿಸೂಕ್ಷ್ಮ ಮತಗಟ್ಟೆಗಳು ಇತ್ಯಾದಿ ವಿವರಗಳ ಸಮಗ್ರ ಮಾಹಿತಿಯನ್ನು ಒದಗಿಸಿದರು. ಜಿಲ್ಲೆಯ ಮತಗಟ್ಟೆಗಳ ಸಂಖ್ಯೆ ಕಳೆದ ಬಾರಿ ೧೭೦೭ ಇದ್ದದ್ದು, ಈಗ ೧೭೨೧ ಆಗಿದೆ. ಚುನಾವಣಾ ಆಯೋಗದ ನಿರ್ದೇಶನದ ಪ್ರಕಾರ ಮತಗಟ್ಟೆ ಗಳನ್ನು ಸ್ಥಾಪಿಸಲಾಗಿದೆ. ಎಲ್ಲಾ ಮತಗಟ್ಟೆಗಳಿಗೆ ಈಗಾಗಲೇ ಕಂದಾಯ ಇಲಾಖೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲಿಸಿ ವರದಿ ನೀಡಿದ್ದು, ಇದೇ ರೀತಿ ಪೊಲೀಸರು ಸಹ ಭೇಟಿ ನೀಡಿ ಪರಿಶೀಲನೆ ನಡೆಸಬೇಕು ಎಂದು ಹೇಳಿದರು.
ಸಭೆಯಲ್ಲಿ ಜಿ.ಪಂ. ಸಿಇಓ ರಾಕೇಶ್ ಕುಮಾರ್, ಮಹಾನಗರ ಪಾಲಿಕೆ ಆಯುಕ್ತ ಮುಲ್ಲೈ ಮುಹಿಲನ್, ಪ್ರೊಬೆಷನರಿ ಐಪಿಎಸ್ ಅಧಿಕಾರಿ ಸೇರಿದಂತೆ ಹಿರಿಯ ಅಧಿಕಾರಿಗಳು ಹಾಜರಿದ್ದರು.
ಚುನಾವಣಾ ಅಧಿಕಾರಿಗಳಿಗೆ ಕಾರ್ಯಾಗಾರ ಮತಗಟ್ಟೆಗಳಲ್ಲಿ ಅಗತ್ಯ ಮೂಲಸೌಕರ್ಯ ಫೆ.೧೦ರೊಳಗಾಗಿ ಕಲ್ಪಿಸಬೇಕು: ಡಿಸಿ
RELATED ARTICLES