Thursday, December 5, 2024
Google search engine
Homeಇ-ಪತ್ರಿಕೆಬಿಜೆಪಿ ಅಭ್ಯರ್ಥಿಗಳ ಗೆಲುವು ಖಚಿತ: ಬಿ.ವೈ. ರಾಘವೇಂದ್ರ ವಿಶ್ವಾಸ

ಬಿಜೆಪಿ ಅಭ್ಯರ್ಥಿಗಳ ಗೆಲುವು ಖಚಿತ: ಬಿ.ವೈ. ರಾಘವೇಂದ್ರ ವಿಶ್ವಾಸ

ಮೈಸೂರು : ವಿಧಾನಪರಿಷತ್ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಗಳು ಗೆಲ್ಲುತ್ತಾರೆ. ಈ ಚುನಾವಣೆಯಲ್ಲಿ ಜೆಡಿಎಸ್ ಮೈತ್ರಿಯ ಬಲವಿದೆ. ಹಾಗಾಗಿ ಪಕ್ಷದ ಅಭ್ಯರ್ಥಿಗಳ ಗೆಲುವು ನಿಶ್ಚಿತ ಎಂದು ಸಂಸದ ಬಿ.ವೈ. ರಾಘವೇಂದ್ರ ಹೇಳಿದರು.
ಮೈಸೂರಿನಲ್ಲಿ ಗುರುವಾರ ನೈರುತ್ಯ ಶಿಕ್ಷಕರ ಹಾಗೂ ಪದವೀಧರ ಕ್ಷೇತ್ರದ ಚುನಾವಣೆಯ ಸಂಬಂಧ ನಡೆದ ಸಭೆಯ ಸಂದರ್ಭದಲ್ಲಿ ಮಾತನಾಡಿದ ಅವರು, ನೈರುತ್ಯ ಪದವೀಧರ ಕ್ಷೇತ್ರದ ಟಿಕೆಟ್ ಕೈ ತಪ್ಪಿರುವುದಕ್ಕೆ ಬಂಡಾಯ ಅಭ್ಯರ್ಥಿಯಾಗಿ ಸ್ಪರ್ಧಿಸಿರುವ ಮಾಜಿ ಶಾಸಕ ರಘುಪತಿ ಭಟ್ ಅವರ ಜತೆ ನಮ್ಮ ಮುಖಂಡರು ಮಾತುಕತೆ ನಡೆಸುತ್ತಿದ್ದಾರೆ. ನಾಮಪತ್ರ ವಾಪಸ್ ಪಡೆಯಲು ಇನ್ನು ೩ ದಿನ ಬಾಕಿ ಇದೆ. ಅಷ್ಟರಲ್ಲಿ ನಾಮಪತ್ರ ವಾಪಸ್ ಪಡೆಯುತ್ತಾರೆ. ಎಲ್ಲವೂ ಸರಿಹೋಗಲಿದೆ. ರಘುಪತಿಭಟ್ ಅವರು ನಮ್ಮ ಪಕ್ಷದ ನಿಷ್ಠಾವಂತ ಕಾರ್ಯಕರ್ತ ಎಂದರು.
ಈ ಚುನಾವಣೆಯಲ್ಲಿ ನಾವು ಪಕ್ಷದ ಬಲ ಹಾಗೂ ಕಾರ್ಯಕರ್ತರ ಬಲದಿಂದ ಗೆಲ್ಲುತ್ತೇವೆ. ಹಾಸನದ ಪೆನ್‌ಡ್ರೈವ್ ಪ್ರಕರಣ ವಿಧಾನಪರಿಷತ್ ಚುನಾವಣೆ ಮೇಲೆ ಯಾವುದೇ ಪರಿಣಾಮ ಬೀರುವುದಿಲ್ಲ. ಮತದಾರರು ವೈಯುಕ್ತಿಕ ವಿಚಾರಗಳನ್ನು ರಾಜಕೀಯಕ್ಕೆ ತರಲ್ಲ. ಪೆನ್‌ಡ್ರೈವ್ ಪ್ರಕರಣಕ್ಕೆ ಸಂಬಂಧಿಸಿದಂತೆ ಜೆಡಿಎಸ್ ನಾಯಕಕರು ಉತ್ತರ ಕೊಟ್ಟಿದ್ದಾರೆ. ಈ ಪ್ರಕರಣ ನ್ಯಾಯಾಲಯದಲ್ಲಿದೆ ಹೆಚ್ಚು ಮಾತನಾಡಲ್ಲ ಎಂದರು.
ಲೋಕಸಭಾ ಚುನಾವಣೆಯಲ್ಲೂ ಹೆಚ್ಚಿನ ಅಂತರದಿಂದ ಗೆಲ್ಲುವ ವಿಶ್ವಾಸ ವ್ಯಕ್ತಪಡಿಸಿದ ರಾಘವೇಂದ್ರ ಅವರು, ಈಶ್ವರಪ್ಪ ಅವರ ಸ್ಪರ್ಧೆಯಿಂದ ಯಾವುದೇ ತೊಂದರೆಯಾಗಿಲ್ಲ. ಕಳೆದ ಬಾರಿಗಿಂತ ಹೆಚ್ಚು ಮತಗಳಿಂದ ಗೆಲ್ಲುತ್ತೇನೆ. ಈಶ್ವರಪ್ಪ ಅವರು ಚುನಾವಣಾ ಅಕ್ರಮದ ಬಗ್ಗೆ ದೂರು ಕೊಟ್ಟಿರುವ ಬಗ್ಗೆ ನನಗೆ ಮಾಹಿತಿ ಇಲ್ಲ. ಚುನಾವಣಾ ಫಲಿತಾಂಶ ಬರಲಿ ನಂತರ ಮಾತನಾಡುತ್ತೇನೆ ಎಂದರು.
ಮಾಜಿ ಸಚಿವ ಈಶ್ವರಪ್ಪ ಅವರನ್ನು ಮತ್ತೆ ಪಕ್ಷಕ್ಕೆ ಕರೆತರುವ ವಿಚಾರವೂ ನನಗೆ ಗೊತ್ತಿಲ್ಲ. ಎಲ್ಲವನ್ನು ರಾಜ್ಯ ಮತ್ತು ಕೇಂದ್ರ ನಾಯಕರು ತೀರ್ಮಾನ ಮಾಡುತ್ತಾರೆ ಎಂದರು.ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ನಿರೀಕ್ಷೆಯಂತೆ ೪೦೦ ಕ್ಕೂ ಹೆಚ್ಚು ಸ್ಥಾನ ಗೆಲ್ಲಲಿದೆ. ಪ್ರಧಾನಿ ಮೋದಿ ಅವರು ಮೂರನೇ ಬಾರಿಗೆ ಪ್ರಧಾನಿಯಾಗುವುದು ಖಂಡಿತ ಎಂದರು.

RELATED ARTICLES
- Advertisment -
Google search engine

Most Popular

Recent Comments