ಚಿತ್ರದುರ್ಗ : ಚಿತ್ರದುರ್ಗ ತಾಲ್ಲೂಕು ವ್ಯಾಪ್ತಿಯಲ್ಲಿ ಈ ವರ್ಷದ ಏಪ್ರಿಲ್ ನಿಂದ ಜುಲೈವರೆಗೆ ಒಟ್ಟು 164 ಬಾಲ ಗರ್ಭಿಣಿಯರು ಪತ್ತೆಯಾಗಿರುವುದು ಕಳವಳಕಾರಿ ಸಂಗತಿಯಾಗಿದ್ದು, ಈ ಪ್ರಕರಣಗಳಲ್ಲಿ ವೈದ್ಯಾಧಿಕಾರಿಗಳು ಪೊಲೀಸ್ ಇಲಾಖೆಗೆ ಮಾಹಿತಿ ನೀಡಿ, ತಪ್ಪದೇ ಎಫ್.ಐ.ಆರ್ ದಾಖಲಿಸಬೇಕು ಎಂದು ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯ ಡಾ. ಕೆ.ಟಿ.ತಿಪ್ಪೇಸ್ವಾಮಿ ಸೂಚಿಸಿದರು.
ನಗರದ ತಹಶೀಲ್ದಾರ್ ಕಚೇರಿ ಸಭಾಂಗಣದಲ್ಲಿ ಮಕ್ಕಳ ಹಕ್ಕುಗಳ ರಕ್ಷಣೆಗೆ ಸಂಬAಧಿಸಿದAತೆ ಚಿತ್ರದುರ್ಗ ತಾಲ್ಲೂಕು ಮಟ್ಟದ ಅಧಿಕಾರಿಗಳ ಸಭೆ ಜರುಗಿಸಿ ಮಾತನಾಡಿದ ಅವರು, ತಾಯಿ ಕಾರ್ಡು ನೀಡುವಾಗ ಕಡ್ಡಾಯವಾಗಿ ಜನನ ಪ್ರಮಾಣ ಪತ್ರವನ್ನೇ ವಯಸ್ಸಿಗೆ ಆಧಾರವಾಗಿ ಪರಿಗಣಿಸಬೇಕು. ಇದನ್ನು ಹೊರತು ಪಡಿಸಿದರೆ ಶಾಲಾ ದಾಖಲೆ ಹಾಗೂ ವೈದ್ಯಕೀಯ ಪ್ರಮಾಣ ಪತ್ರಗಳು ಮಾತ್ರ ವಯಸ್ಸಿನ ಧೃಡೀಕರಣಕ್ಕೆ ಊರ್ಜಿತವಾಗುತ್ತವೆ. ಆಧಾರ್ ಅನ್ನು ಕೇವಲ ವಿಳಾಸದ ಧೃಡೀಕರಣಕ್ಕೆ ಮಾತ್ರ ಪರಿಗಣಿಸುವಂತೆ ಆರೋಗ್ಯ ಇಲಾಖೆ ಸ್ಪಷ್ಟವಾಗಿ ಸುತ್ತೋಲೆ ಹೊರಡಿಸಿದೆ ಎಂದರು.
ವೈದ್ಯಾಧಿಕಾರಿಗಳಿಗೆ ಬಾಲಗರ್ಭಿಣಿಯ ಶಂಕೆ ಉಂಟಾದಕೂಡಲೇ ಪರಿಶೀಲಿಸಿ ಕ್ರಮ ಕೈಗೊಳ್ಳಬೇಕು. ರಾಜ್ಯದಲ್ಲಿ ಸುಮಾರು ೧.೫ ಲಕ್ಷ ಬಾಲಗರ್ಭಿಣಿ ಪ್ರಕರಣಗಳು ಇರುವ ಬಗ್ಗೆ ಮಾಹಿತಿಯಿದೆ. ಚಿತ್ರದುರ್ಗ ತಾಲ್ಲೂಕು ವ್ಯಾಪ್ತಿಯಲ್ಲಿ ೩೦೦ ಕ್ಕೂ ಹೆಚ್ಚು ಪ್ರಕರಣಗಳು ಆರ್.ಸಿ.ಹೆಚ್ ತಂತ್ರಾAಶದಲ್ಲಿ ಗೋಚರವಾಗುತ್ತಿವೆ. ರಾಜ್ಯ ಸರ್ಕಾರ ಬಾಲಗರ್ಭಿಣಿ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದೆ. ಮುಖ್ಯಮಂತ್ರಿಗಳು ಸಹ ಆಯಾ ಜಿಲ್ಲಾಧಿಕಾರಿಗಳಿಗೆ ಸೂಕ್ತ ಕ್ರಮ ಕೈಗೊಳ್ಳುವಂತೆ ಸ್ಪಷ್ಟ ನಿರ್ದೇಶನ ನೀಡಿದ್ದಾರೆ. ಅಧಿಕಾರಿಗಳು ಇದರ ಗಂಭೀರತೆ ಅರಿತು ಕಾರ್ಯಪ್ರವೃತ್ತರಾಗಬೇಕು ಎಂದು ಸೂಚನೆ.
ಮಕ್ಕಳ ಸ್ನೇಹಿ ಗ್ರಾಮ ಪಂಚಾಯಿತಿಗಳಲ್ಲಿ ಮಕ್ಕಳ ಅಂಕಿ ಸಂಖ್ಯೆಗಳ ನಿಖರ ಮಾಹಿತಿ ಇರಬೇಕು. ತಾಲ್ಲೂಕಿನ ಎಲ್ಲಾ ಶಾಲೆ, ಹಾಸ್ಟೆಲ್‌ಗಳಲ್ಲಿ ಕಡ್ಡಾಯವಾಗಿ ಮಕ್ಕಳ ರಕ್ಷಣಾ ನೀತಿಯ ಅನುಷ್ಠಾನವಾಗಬೇಕು. ಇದರ ಜೊತೆಗೆ ಜಿಲ್ಲೆಯ ಯಾವುದೇ ಪದವಿ ಪೂರ್ವ ಕಾಲೇಜುಗಳಲ್ಲಿ ಮಕ್ಕಳ ರಕ್ಷಣಾ ನೀತಿಯು ಪಾಲನೆಯಾಗುತ್ತಿಲ್ಲ. ಕೂಡಲೇ ಪದವಿ ಪೂರ್ವ ಕಾಲೇಜುಗಳಲ್ಲಿ ಮಕ್ಕಳ ರಕ್ಷಣಾ ನೀತಿ ಅನುಷ್ಠಾನ ಮಾಡಬೇಕು. ಘಟನಾ ಸ್ಥಳದ ವ್ಯಾಪ್ತಿ ಬೇರೆಯಾಗಿದ್ದರೆ. ಶೂನ್ಯ ಎಫ್.ಐ.ಆರ್ ದಾಖಲಿಸಿ ಸೂಕ್ತ ಕ್ರಮಕ್ಕಾಗಿ ಸಂಬAಧಪಟ್ಟ ಪೊಲೀಸ್ ಠಾಣೆಗೆ ರವಾನಿಸಬೇಕು ಎಂದು ಸೂಚಿಸಿದರು.
ಸಭೆಯಲ್ಲಿ ತಹಶೀಲ್ದಾರ್ ಡಾ. ನಾಗವೇಣಿ, ತಾಲ್ಲೂಕು ಪಂಚಾಯತ್ ಇಓ ಹನುಮಂತಪ್ಪ, ಜಿಲ್ಲಾ ಮಕ್ಕಳ ಕಲ್ಯಾಣ ಸಮಿತಿ ಅಧ್ಯಕ್ಷ ಡಾ. ಆರ್.ಪ್ರಭಾಕರ್, ಜಿಲ್ಲಾ ಮಕ್ಕಳರಕ್ಷಣಾಧಿಕಾರಿ ಸವಿತಾ ಸೇರಿದಂತೆ ಮಕ್ಕಳ ರಕ್ಷಣಾ ನೀತಿ ಅನುಷ್ಠಾನದಎಲ್ಲಾ ಇಲಾಖೆ ತಾಲ್ಲೂಕು ಮಟ್ಟದ ಅಧಿಕಾರಿಗಳು ಇದ್ದರು.