Sunday, November 10, 2024
Google search engine
Homeಇ-ಪತ್ರಿಕೆಶಿವಮೊಗ್ಗದ ಖಾಸಗಿ ಆಸ್ಪತ್ರೆಯಲ್ಲಿ ಡೆಂಗ್ಯೂಗೆ 6 ವರ್ಷದ ಮಗು ಸಾವು

ಶಿವಮೊಗ್ಗದ ಖಾಸಗಿ ಆಸ್ಪತ್ರೆಯಲ್ಲಿ ಡೆಂಗ್ಯೂಗೆ 6 ವರ್ಷದ ಮಗು ಸಾವು

ಚಿಕ್ಕಮಗಳೂರು:  ಜಿಲ್ಲೆಯ ಕಡೂರು ತಾಲೂಕಿನ ಸಖರಾಯಪಟ್ಟಣದಲ್ಲಿ ಡೆಂಘೀ ಸೋಂಕಿಗೆ ಆರು ವರ್ಷದ ಮಗು ಮೃತಪಟ್ಟಿದೆ ಎಂದು ಹೇಳಲಾಗಿದೆ.

ಸಾನಿಯಾ (6) ಸಾವನ್ನಪ್ಪಿದ ಬಾಲಕಿ. ಶಿವಮೊಗ್ಗದ ಖಾಸಗಿ ಆಸ್ಪತ್ರೆಯಲ್ಲಿ ‌ಚಿಕಿತ್ಸೆ ಫಲಿಸದೆ ಬಾಲಕಿ ಮೃತಪಟ್ಟಿದ್ದಾಳೆ ಎಂದು ತಿಳಿದುಬಂದಿದೆ.

ಶಿವಮೊಗ್ಗದ ಖಾಸಗಿ ಆಸ್ಪತ್ರೆಯಲ್ಲಿ ಬಾಲಕಿ ಸಾನಿಯಾಗೆ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ, ಚಿಕಿತ್ಸೆ ಫಲಿಸದೆ ಬಾಲಕಿ ಸಾವನ್ನಪ್ಪಿದ್ದಾಳೆ.

ಮೃತ ಬಾಲಕಿಯ ತಂದೆ ಆಸಿಫ್ ಸರ್ಕಾರಿ ಆಸ್ಪತ್ರೆಗಳ ನಿರ್ಲಕ್ಷಕ್ಕೆ ಸರ್ಕಾರಕ್ಕೆ ಛೀಮಾರಿ ಹಾಕಿದ್ದಾರೆ. ರಾಜ್ಯ ಸರ್ಕಾರದ ವಿರುದ್ಧ ಮೃತ ಬಾಲಕಿ ತಂದೆ ಬೇಸರ ವ್ಯಕ್ತಪಡಿಸಿದ್ದಾರೆ.

“ಡೆಂಗ್ಯೂ ಕಾಯಿಲೆಗೆ ಸರ್ಕಾರಿ ಆಸ್ಪತ್ರೆಗಳಲ್ಲಿ ಸೂಕ್ತ ಚಿಕಿತ್ಸೆ ಸಿಗುತ್ತಿಲ್ಲ. ನನಗೆ ಯಾವುದೇ ಸಹಾಯ ಬೇಡ. ಆದರೆ, ಸರ್ಕಾರಿ ಆಸ್ಪತ್ರೆಗಳನ್ನ ಅಭಿವೃದ್ಧಿ ಮಾಡಿ. ಈ ಆಸ್ಪತ್ರೆಗಳಲ್ಲಿ ಬಡವರಿಗೆ ಹೆಚ್ಚಿನ ಸೌಲಭ್ಯ ಸಿಗಬೇಕು. ನನ್ನ ಮಗಳಿಗಾದ ಸ್ಥಿತಿ ಯಾರಿಗೂ ಆಗುವುದು ಬೇಡ” ಎಂದು ಮಗಳ ಮೃತದೇಹದ ಮುಂದೆ ನಿಂತು ರಾಜ್ಯ ಸರ್ಕಾರಕ್ಕೆ ಮನವಿ ಮಾಡಿ ಬೇಸರ ವ್ಯಕ್ತಪಡಿಸಿದ್ದಾರೆ.

RELATED ARTICLES
- Advertisment -
Google search engine

Most Popular

Recent Comments