Thursday, December 5, 2024
Google search engine
Homeಇ-ಪತ್ರಿಕೆಜಿಲ್ಲಾ ಉಸ್ತುವಾರಿ ಸಚಿವರ ಕಚೇರಿ ಮುಂದೆ ಎಬಿವಿಪಿ ಪ್ರತಿಭಟನೆ: ಬಂಧನ, ಬಿಡುಗಡೆ

ಜಿಲ್ಲಾ ಉಸ್ತುವಾರಿ ಸಚಿವರ ಕಚೇರಿ ಮುಂದೆ ಎಬಿವಿಪಿ ಪ್ರತಿಭಟನೆ: ಬಂಧನ, ಬಿಡುಗಡೆ

ಶಿವಮೊಗ್ಗ: ವಿದ್ಯಾರ್ಥಿಗಳ ಶೈಕ್ಷಣಿಕ ಸಮಸ್ಯೆಗಳನ್ನು ಸರಿಪಡಿಸುವಂತೆ ಆಗ್ರಹಿಸಿ, ಜಿಲ್ಲಾ ಉಸ್ತುವಾರಿ ಸಚಿವರ ಕಚೇರಿ ಮುಂದೆ ಪ್ರತಿಭಟನೆ ನಡೆಸುತ್ತಿದ್ದ ಎಬಿವಿಪಿ ಕಾರ್ಯಕರ್ತರನ್ನು ಇಂದು ಪೊಲೀಸರು ಬಂಧಿಸಿ ನಂತರ ಬಿಡುಗಡೆ ಮಾಡಿದರು.

ವಿದ್ಯಾರ್ಥಿಗಳ ಸಮಸ್ಯೆಗಳು ಸಾಕಷ್ಟಿವೆ. ಗ್ರಾಮೀಣ ಭಾಗದ ವಿದ್ಯಾರ್ಥಿಗಳಿಗೆ ಇದುವರೆಗೂ ಬಸ್ ಪಾಸ್ ಸಿಕ್ಕಿಲ್ಲ. ಅಲ್ಲದೆ ಬಸ್‌ಗಳ ಸಂಖ್ಯೆಯೂ ಕೂಡ ಕಡಿಮೆ ಇದೆ. ಹಾಗೆಯೇ ವಿದ್ಯಾರ್ಥಿಗಳ ಹಾಸ್ಟೆಲ್ ಪ್ರವೇಶಾತಿ ಆಯ್ಕೆಯಲ್ಲಿ ವಿಳಂಬವಾಗುತ್ತಿದೆ. ವಿದ್ಯಾರ್ಥಿ ವೇತನವನ್ನು ನೀಡುತ್ತಿಲ್ಲ. ಹಾಸ್ಟೆಲ್ ಪ್ರವೇಶಾತಿಗೆ ಅರ್ಜಿ ಹಾಕಿ ಕಾಯುತ್ತಿದ್ದಾರೆ ಎಂದು ಪ್ರತಿಭಟನಕಾರರು ದೂರಿದರು.

ಕಾಲೇಜುಗಳು ಆರಂಭವಾಗಿವೆ. ಸಾವಿರಾರು ವಿದ್ಯಾರ್ಥಿಗಳು ರಾಜ್ಯದ ಹಾಸ್ಟೆಲ್‌ಗಳಲ್ಲಿ ಪ್ರವೇಶ ಪಡೆಯಬೇಕಾಗಿದೆ. ಇದರಿಂದ ವಿದ್ಯಾರ್ಥಿಗಳಿಗೆ ಉನ್ನತ ಶಿಕ್ಷಣ ಪಡೆಯಲು ಅತ್ಯಂತ ಕಷ್ಟವಾಗಿದೆ ಎಂದರು.

ವಿದ್ಯಾರ್ಥಿ ವೇತನವನ್ನೇ ನಂಬಿ ವ್ಯಾಸಂಗ ಮಾಡುತ್ತಿರುವ ಬಡ ಮತ್ತು ಮಧ್ಯಮ ವರ್ಗದ ವಿದ್ಯಾರ್ಥಿಗಳ ಸಂಖ್ಯೆ ಹೆಚ್ಚಾಗಿದೆ. ಇದರ ಜೊತೆಗೆ ಕಾರ್ಮಿ ಕರ ಮಕ್ಕಳ ವಿದ್ಯಾರ್ಥಿ ವೇತನ ರದ್ದುಗೊಳಿಸಲಾಗಿದೆ. ರೈತ ವಿದ್ಯಾನಿಧಿಯೂ ಕೂಡ ಇಲ್ಲವಾಗಿದೆ. ಕೂಡಲೇ ಸರ್ಕಾರ ಕ್ರಮ ಕೈಗೊಳ್ಳಬೇಕು ಎಂದರು.

ರಾಜ್ಯದ ಎಲ್ಲಾ ವಿಶ್ವವಿದ್ಯಾ ನಿಲಯಗಳಲ್ಲಿ ಏಕರೂಪ ವೇಳ ಪಟ್ಟಿಯನ್ನು ಸಮರ್ಪಕವಾಗಿ ಜಾರಿಗೆ ಮಾಡಬೇಕು ಎಂದು ಅವರು ಆಗ್ರಹಿಸಿದರು.

ಪ್ರತಿಭಟನೆಯಲ್ಲಿ ಪ್ರಮುಖರಾದ ಹೆಚ್.ಕೆ.ಪ್ರವೀಣ್, ಪುನೀತ್, ಅಭಿಷೇಕ್, ರವಿ, ಸಿಂಚನ, ಯಶಸ್ವಿನಿ, ರಂಜನಿ, ವರುಣ್, ತರುಣ್, ತೇಜಸ್ಸು, ಮನೋಜ್, ಲೋಹಿತ್, ಪ್ರಮೋದ್, ಆಶ್ರಿತೆ, ರೋಹಿತ್ ಮುಂತಾದವರು ಇದ್ದರು.

RELATED ARTICLES
- Advertisment -
Google search engine

Most Popular

Recent Comments