ಶಿವಮೊಗ್ಗ: 2021 ನೇ ಸಾಲಿನಲ್ಲಿ ಶಿವಮೊಗ್ಗ ಟೌನ್‍ನ ವಾಸಿ 30 ವರ್ಷದ ಯುವಕನು 17 ವರ್ಷದ ಅಪ್ರಾಪ್ತೆ ಬಾಲಕಿಯ ಮಾನ ಹಾನಿ ಮಾಡುವುದಾಗಿ ಬೆದರಿಕೆ ಹಾಕಿರುತ್ತಾನೆಂದು ನೊಂದ ಬಾಲಕಿ ನೀಡಿದ ದೂರಿನ ಮೇರೆಗೆ ಪ್ರಕರಣದ ಆರೋಪಿಗೆ ನ್ಯಾಯಾಲಯವು ಜೂ.26 ರಂದು 5 ವರ್ಷ ಕಠಿಣ ಕಾರಾವಾಸ ಶಿಕ್ಷೆ, ರೂ.2,50,000 ದಂಡ, ದಂಡ ಕಟ್ಟಲು ವಿಫಲನಾದಲ್ಲಿ 1 ವರ್ಷ ಸಾಧಾ ಕಾರಾವಾಸ ಶಿಕ್ಷೆ ವಿಧಿಸಿ ನೊಂದ ಬಾಲಕಿಗೆ ಪರಿಹಾರವಾಗಿ ದಂಡದ ಮೊತ್ತದಲ್ಲಿ ರೂ.2,40,000 ನೀಡುವಂತೆ ಆದೇಶಿದೆ.
ಪ್ರಕರಣದ ಆಗಿನ ತನಿಖಾಧಿಕಾರಿ ಶಿವಮೊಗ್ಗ ಮಹಿಳಾ ಪೆÇಲೀಸ್ ಠಾಣೆ ಪಿಐ ವೀರೇಶ್.ಆರ್ ಅವರು ಪ್ರಕರಣದ ತನಿಖೆ ಪೂರೈಸಿ, ನ್ಯಾಯಾಲಯಕ್ಕೆ ಆರೋಪಿತನ ವಿರುದ್ಧ ದೋಷಾರೋಪಣಾ ಪತ್ರವನ್ನು ಸಲ್ಲಿಸಿರುತ್ತಾರೆ. ಶಿವಮೊಗ್ಗ ಟೌನ್‍ನ ವಾಸಿ 30 ವರ್ಷದ ಯುವಕನು 17 ವರ್ಷದ ಅಪ್ರಾಪ್ತೆ ಬಾಲಕಿಯ ಖಾಸಗೀ ಚಿತ್ರಗಳನ್ನು ಮೊಬೈಲ್‍ನಲ್ಲಿ ಸ್ಕ್ರೀನ್ ಶಾಟ್ ತೆಗೆದುಕೊಂಡು, ಆಕೆಯ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ್ದು, ಮಾನ ಹಾನಿ ಮಾಡುವುದಾಗಿ ಬೆದರಿಕೆ ಹಾಕಿರುತ್ತಾನೆಂದು ದೂರು ನೀಡಿದ್ದು, ಶಿವಮೊಗ್ಗ ಮಹಿಳಾ ಪೊಲೀಸ್ ಠಾಣೆಯಲ್ಲಿ ಕಲಂ 354(ಎ), 354(ಡಿ), 376(2)(ಎನ್), 509 ಐಪಿಸಿ ಮತ್ತು ಫೋಕ್ಸೋ ಹಾಗೂ ಐಟಿ ಕಾಯ್ದೆ ರೀತ್ಯಾ ಪ್ರಕರಣ ದಾಖಲಿಸಲಾಗಿರುತ್ತದೆ.
ನ್ಯಾಯಾಲಯದಲ್ಲಿ ಸರ್ಕಾರದ ಪರವಾಗಿ ಸರ್ಕಾರಿ ಅಭಿಯೋಜಕ ಶ್ರೀಧರ್.ಹೆಚ್.ಆರ್ ಅವರು ವಾದ ಮಂಡಿಸಿದ್ದು, ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಎಫ್‍ಟಿಎಸ್‍ಸಿ-2 ಶಿವಮೊಗ್ಗದಲ್ಲಿ ಪ್ರಕರಣದ ವಿಚಾರಣೆ ನಡೆದು, ಆರೋಪಿತನ ವಿರುದ್ಧ ಆರೋಪ ದೃಢಪಟ್ಟ ಹಿನ್ನೆಲೆಯಲ್ಲಿ, ನ್ಯಾಯಾಧೀಶ ಮೋಹನ್.ಜೆ.ಎಸ್ ಅವರು ಜೂ.26 ರಂದು ಪ್ರಕರಣದ ಆರೋಪಿ ಶಿವಮೊಗ್ಗ ಟೌನ್‍ನ ವಾಸಿ 30 ವರ್ಷದ ಯುವಕನಿಗೆ 5 ವರ್ಷ ಕಠಿಣ ಕಾರಾವಾಸ ಶಿಕ್ಷೆ, ರೂ.2,50,000 ದಂಡ, ದಂಡ ಕಟ್ಟಲು ವಿಫಲನಾದಲ್ಲಿ 1 ವರ್ಷ ಸಾಧಾ ಕಾರಾವಾಸ ಶಿಕ್ಷೆ ವಿಧಿಸಿ ನೊಂದ ಬಾಲಕಿಗೆ ಪರಿಹಾರವಾಗಿ ದಂಡದ ಮೊತ್ತದಲ್ಲಿ ರೂ.2,40,000 ನೀಡುವಂತೆ ಆದೇಶಿಸಿದೆ.
ಶಿವಮೊಗ್ಗ: ಬಾಲಕಿಗೆ ಮಾನಹಾನಿ ಬೆದರಿಕೆ: ಆರೋಪಿಗೆ 5 ವರ್ಷ ಕಠಿಣ ಕಾರಾವಾಸ ಶಿಕ್ಷೆ
RELATED ARTICLES