Thursday, December 12, 2024
Google search engine
Homeಇ-ಪತ್ರಿಕೆನಟ ದರ್ಶನ್‌ಗೆ ಜುಲೈ 18ರವರೆಗೆ ನ್ಯಾಯಾಂಗ ಬಂಧನ ವಿಸ್ತರಣೆ

ನಟ ದರ್ಶನ್‌ಗೆ ಜುಲೈ 18ರವರೆಗೆ ನ್ಯಾಯಾಂಗ ಬಂಧನ ವಿಸ್ತರಣೆ

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಬಂಧಿತನಾಗಿರುವ ನಟ ದರ್ಶನ್‌ಗೆ ಮತ್ತೆ ಪರಪ್ಪನ ಅಗ್ರಹಾರವೇ ಗತಿಯಾಗಿದೆ. ನಟ ದರ್ಶನ್‌ ಸೇರಿ ಹಲವು ಆರೋಪಿಗಳ ನ್ಯಾಯಾಂಗ ಬಂಧನದ ಅವಧಿಯನ್ನು ಜುಲೈ 18ರವರೆಗೆ ವಿಸ್ತರಣೆ ಮಾಡಲಾಗಿದೆ.

ಇಂದು ನ್ಯಾಯಾಂಗ ಬಂಧನ ಅವಧಿ ಮುಗಿದಿದ್ದು, ಕೋರ್ಟ್‌ಗೆ ದರ್ಶನ್‌ ಅವರನ್ನು ಹಾಜರುಪಡಿಸಿದ್ದರು. ಈಗ ಕೋರ್ಟ್, ಜುಲೈ 18ರವರೆಗೆ ನ್ಯಾಯಾಂಗ ಬಂಧನವನ್ನು ವಿಸ್ತರಿಸಿ ಆದೇಶ ನೀಡಿದೆ.

ರೇಣುಕಾ ಸ್ವಾಮಿ ಕೊಲೆ ಪ್ರಕರಣದ ಎ2 ಆರೋಪಿ ದರ್ಶನ್ ಹಾಗೂ ಇತರೆ ಆರೋಪಿಗಳು ವಿಡಿಯೋ ಕಾನ್ಫೆರೆನ್ಸ್ ಮೂಲಕ ಕೋರರ್ಟ್‌ಗೆ ಹಾಜರಾಗಿದ್ದರು. ಬೆಂಗಳೂರು ಮತ್ತು ತುಮಕೂರು ಜೈಲಿನಿಂದ ಆರೋಪಿಗಳನ್ನ ಹಾಜರುಪಡಿಸಲಾಗಿತ್ತು. ಈ ವೇಳೆ ವಿಚಾರಣೆ ನಡೆಸಿದ ಕೋರ್ಟ್ ಜುಲೈ 18ರವರೆಗೆ ದರ್ಶನ್ ಅವರನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ.

RELATED ARTICLES
- Advertisment -
Google search engine

Most Popular

Recent Comments