ಶಿವಮೊಗ್ಗ: ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಶಿವಮೊಗ್ಗದ ಅಶೋಕ ನಗರದಲ್ಲಿ ನಡೆದ ಡೆಂಗ್ಯೂ ನಿಯಂತ್ರಣ ಕುರಿತು ಜನರಲ್ಲಿ ಜಾಗೃತಿ ಮೂಡಿಸುವ ಕಾರ್ಯಕ್ರಮದಲ್ಲಿ ಶಿವಮೊಗ್ಗ ನಗರದ ಶಾಸಕರಾದ ಎಸ್ಎನ್ ಚನ್ನಬಸಪ್ಪ ಅವರು ಮನೆ ಮನೆಗೆ ತೆರಳಿ ಸಾರ್ವಜನಿಕರಿಗೆ ಈಡಿಸ್ ಸೊಳ್ಳೆ ಉತ್ಪತ್ತಿಯ ಕುರಿತಂತೆ ಜಾಗೃತಿ ಮೂಡಿಸುವ ಕೆಲಸ ಮಾಡಿದರು.
ಈ ಸಂದರ್ಭದಲ್ಲಿ ಆರೋಗ್ಯ ಇಲಾಖೆ ಅಧಿಕಾರಿಗಳು ಹಾಗೂ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.