ಬೆಂಗಳೂರು: ಪ್ರಜ್ವಲ್ ರೇವಣ್ಣ ಜಾಮೀನಿಗಾಗಿ ಸಲ್ಲಿಸಿದ್ದ ಅರ್ಜಿಯನ್ನು ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ಇಂದು (ಜೂನ್ 26) ವಜಾ ಮಾಡಿ ಆದೇಶ ಹೊರಡಿಸಿದೆ.
ಹೊಳೆನರಸೀಪುರ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಮೊದಲನೇ ಪ್ರಕರಣದಲ್ಲಿ ಪ್ರಜ್ವಲ್ ರೇವಣ್ಣ ಪರ ವಕೀಲರು ಜಾಮೀನು ಅರ್ಜಿಯನ್ನು ವಿಶೇಷ ಕೋರ್ಟ್‌ನ ಜಡ್ಜ್ ಸಂತೋಷ್ ಗಜಾನನ ಭಟ್ ಅವರು ವಜಾ ಮಾಡಿ ಆದೇಶ ಹೊರಡಿಸಿದ್ದಾರೆ.
ಅತ್ಯಾಚಾರ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ 42ನೇ ಎಸಿಎಂಎಂ ನ್ಯಾಯಾಲಯವು, ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರನ್ನು ಜೂನ್ 29ರವರೆಗೂ ಎಸ್ಐಟಿ ಕಸ್ಟಡಿಗೆ ನೀಡಿದೆ. ಹೀಗಾಗಿ ಪ್ರಜ್ವಲ್ ರೇವಣ್ಣ ಅವರು ಇನ್ನೂ ಮೂರು ದಿನಗಳ ಕಾಲ ಎಸ್ಐಡಿ ಕಸ್ಟಡಿಯಲ್ಲಿ ವಿಚಾರಣೆ ಎದುರಿಸಲಿದ್ದಾರೆ.