Thursday, December 5, 2024
Google search engine
Homeಅಂಕಣಗಳುಲೇಖನಗಳುಅನಂತ್‌ಕುಮಾರ್ ಹೆಗಡೆ ವಜಾಕ್ಕೆ ಒತ್ತಾಯ

ಅನಂತ್‌ಕುಮಾರ್ ಹೆಗಡೆ ವಜಾಕ್ಕೆ ಒತ್ತಾಯ

ಶಿವಮೊಗ್ಗ : ನಾಡಪ್ರೇಮಿ ಟಿಪ್ಪುಸುಲ್ತಾನ್ ಜಯಂತಿ ಯನ್ನು ಸರ್ಕಾರ ಆಚರಿಸುತ್ತಿರುವುದಕ್ಕೆ ವಿರೋಧ ವ್ಯಕ್ತಪಡಿಸುತ್ತಿರುವ ಕೇಂದ್ರ ಸಚಿವ ಅನಂತಕುಮಾರ್ ಹೆಗಡೆ ಹಾಗೂ ರಾಜ್ಯದ ಬಿಜೆಪಿ ಸಂಸದರನ್ನು ವಜಾಗೊಳಿ ಸಬೇಕೆಂದು ಆಗ್ರಹಿಸಿ ಶಿವಮೊಗ್ಗ ಗ್ರಾಮಾಂತರ ಯುವ ಕಾಂಗ್ರೆಸ್ ಕಾರ್ಯಕರ್ತರು ಇಂದು ತಾಲ್ಲೂಕು ಕಚೇರಿ ಎದುರು ಪ್ರತಿಭಟನೆ ನಡೆಸಿ ತಹಶೀಲ್ದಾರ್ ಮೂಲಕ ರಾಷ್ಟ್ರಪತಿಗಳಿಗೆ ಮನವಿ ಸಲ್ಲಿಸಿದರು.
ನ.೧೦ರಂದು ನಡೆಯುವ ಟಿಪ್ಪು ಜಯಂತಿ ಆಚರಣೆ ವಿಷಯದಲ್ಲಿ ರಾಜ್ಯದ ಬಿಜೆಪಿ ಸಂಸದರು ಕಾರ್ಯ ಕ್ರಮದ ಆಹ್ವಾನ ಪತ್ರಿಕೆಯಲ್ಲಿ ತಮ್ಮ ಹೆಸರನ್ನು ಮುದ್ರಿಸ ಬೇಡಿ ಎಂದು ಪತ್ರ ಬರೆದು ಮತ್ತು ಹೇಳಿಕೆಗಳನ್ನು ನೀಡುವುದರ ಮೂಲಕ ಸಮಾಜದಲ್ಲಿ ಒಡಕು ತರುವು ದರೊಂದಿಗೆ ಸಾಮರಸ್ಯವನ್ನು ಹಾಳುಗೆಡವುತ್ತಿದ್ದಾರೆ ಎಂದು ಕಾರ್ಯಕರ್ತರು ಆರೋಪಿಸಿದರು.
ಭಾರತದ ಸಂವಿಧಾನಕ್ಕೆ ಅಗೌರವ ತರುತ್ತಾ ಸಂವಿಧಾ ನಿಕ ಹುದ್ದೆಗೆ ಬಂದಂತಹ ಸಂದರ್ಭದಲ್ಲಿ ಪ್ರಮಾಣ ವಚನ ಪಡೆಯುವಾಗ ಯಾವುದೇ ಧರ್ಮ ಜಾತಿಗಳಿಗೆ ನೋವನ್ನುಂಟು ಮಾಡುವುದಿಲ್ಲ ಎಂದು ಹೇಳಿ ಪ್ರಮಾಣವಚನ ಸ್ವೀಕರಿಸಿದವರು ಇಂದು ಸಂವಿಧಾನಕ್ಕೆ ವಿರುದ್ಧವಾಗಿದ್ದು, ಕೂಡಲೇ ತಮ್ಮ ತಮ್ಮ ಸ್ಥಾನಕ್ಕೆ ರಾಜೀ ನಾಮೆ ನೀಡಬೇಕು. ಇಲ್ಲದಿದ್ದಲ್ಲಿ ಅವರನ್ನು ಸ್ಥಾನ ದಿಂದಲೇ ವಜಾಗೊಳಿಸಬೇಕೆಂದು ಒತ್ತಾಯಿಸಿದರು.
ಟಿಪ್ಪು ಜಯಂತಿ ಆಚರಣೆಗೆ ಬಿಜೆಪಿಯವರು ತೀವ್ರ ವಿರೋಧ ವ್ಯಕ್ತಪಡಿಸುತ್ತಿದ್ದು, ಹಿಂದೆ ಇದೇ ಬಿಜೆಪಿ ನಾಯಕರಾದ ಬಿ.ಎಸ್.ಯಡಿಯೂರಪ್ಪ ಟಿಪ್ಪುಟೋಪಿ, ಖಡ್ಗ ಹಿಡಿದು ಹಾಡಿ ಹೊಗಳಿದ್ದರು. ಹಾಗೆಯೇ ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಸಹ ಟಿಪ್ಪು ಪುಸ್ತಕಕ್ಕೆ ಮುನ್ನುಡಿ ಬರೆದಿದ್ದರು. ವಿಧಾನಸೌಧದ ವಜ್ರ ಮಹೋತ್ಸವ ಸಮಾರಂಭದಲ್ಲಿ ರಾಷ್ಟ್ರಪತಿಗಳು ತಮ್ಮ ಭಾಷಣದಲ್ಲಿ ಟಿಪ್ಪುಸುಲ್ತಾನ್ ಕ್ಷಿಪಣಿ ಜನಕನೆಂದು ಹಾಡಿ ಹೊಗಳಿದ್ದಾರೆ. ಇಂದು ಟಿಪ್ಪುವನ್ನು ವಿರೋಧಿಸುತ್ತಿರುವ ಎರಡು ನಾಲಿಗೆಯ ನಾಯಕರು ನಕಲಿ ದೇಶಭಕ್ತರು, ಸಂವಿಧಾನದ ವಿರೋಧಿಗಳು. ಇಂತಹವರು ನೈತಿಕತೆ ಇದ್ದರೆ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕೆಂದು ಆಗ್ರಹಿಸಿದ ಕಾರ‍್ಯಕರ್ತರು ಇಲ್ಲದಿದ್ದಲ್ಲಿ ರಾಜ್ಯಾದ್ಯಂತ ಪ್ರತಿಭಟನೆ ಹಮ್ಮಿಕೊಳ್ಳಬೇಕಾದೀತು ಎಂದು ಎಚ್ಚರಿಸಿದರು.
ಪ್ರತಿಭಟನೆಯಲ್ಲಿ ಗ್ರಾಮಾಂತರ ಯುವ ಕಾಂಗ್ರೆಸ್ ಅಧ್ಯಕ್ಷ ಇ.ಟಿ.ನಿತಿನ್‌ರಾವ್, ಮುಖಂಡರಾದ ರಂಜಿತ್, ಪ್ರದೀಪ್, ರಾಘವೇಂದ್ರ, ಜಿಲ್ಲಾ ಕಾಂಗ್ರೆಸ್ ಮುಖಂಡರಾದ ಬಲದೇವಕೃಷ್ಣ, ಷಣ್ಮುಖಪ್ಪಗೌಡ ಇನ್ನಿತರರು ಭಾಗವಹಿಸಿದ್ದರು.

RELATED ARTICLES
- Advertisment -
Google search engine

Most Popular

Recent Comments