ಶಿವಮೊಗ್ಗ: ಬಡವರು ಸೂರಿಗಾಗಿ ನಿಟ್ಟುಸಿರು ಬಿಡುತ್ತಿದ್ದಾರೆ. ಅವರಿಗೆ ಸರ್ಕಾರ ವಿಳಂಬ ಮಾಡದೇ ಸೂರು ನೀಡಿ ಎಂದು ರಾಷ್ಟ್ರಭಕ್ತಿ ಬಳಗದ ಕೆ.ಎಸ್.ಈಶ್ವರಪ್ಪ ಆಗ್ರಹಿಸಿದರು.
ಅವರು ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಶಿವಮೊಗ್ಗದಲ್ಲಿ ಬಡವರಿಗಾಗಿ ಸೂರು ನೀಡಲು ಆಶ್ರಯಮನೆ ಯೋಜನೆಯನ್ನು ಕಳೆದ 9 ವರ್ಷಗಳ ಹಿಂದೆಯೇ ಜಾರಿಗೆ ತರಲಾಗಿತ್ತು. ಗೋವಿಂದಪುರದಲ್ಲಿ 3 ಸಾವಿರ ಆಶ್ರಯ ಮನೆಗಳು ನಿರ್ಮಾಣವಾಗಬೇಕಿತ್ತು. ಅಲ್ಲಿ ಕೇವಲ 288 ಮನೆಗಳಿಗೆ ಹಕ್ಕುಪತ್ರ ನೀಡಲಾಗಿದೆ. ಉಳಿದ ಬಡವರು ಸೂರಿಗಾಗಿ ನಿಟ್ಟುಸಿರು ಬಿಡುತ್ತಿದ್ದಾರೆ ಎಂದರು.
ಬಿಜೆಪಿಯಿಂದ ತಮಗೆ ಕರೆಬಂದಿದ್ದು, ಸದ್ಯದಲ್ಲಿಯೇ ಈ ಬಗ್ಗೆ ತೀರ್ಮಾನ ಕೈಗೊಳ್ಳುವೆ ಎಂದು ಈಶ್ವರಪ್ಪ ಹೇಳಿದರು.
ಈಗಾಗಲೇ ಬಿಜೆಪಿಯಲ್ಲೇ ನಾವಿದ್ದು, ರಾಷ್ಟ್ರಭಕ್ತ ಬಳಗವು ಬಿಜೆಪಿಯ ಒಂದು ಭಾಗವೇ ಆಗಿದೆ. ಚುನಾವಣೆಯ ಒಂದು ವಿಷಯದಲ್ಲಿ ಮಾತ್ರ ಒಂದಿಷ್ಟು ಭಿನ್ನಾಭಿಪ್ರಾಯವಾಗಿದ್ದವು. ಈಗ ಬಿಜೆಪಿ ಕಡೆಯಿಂದ ತಮಗೆ ಕರೆಬಂದಿದ್ದು, ಬಿಜೆಪಿ ಮತ್ತು ಸೇರುವ ಬಗ್ಗೆ ನಿರ್ಧಾರ ಕೈಗೊಳ್ಳುವೆ ಎಂದರು.
ಶಿವಮೊಗ್ಗ ನಗರದ ಅಭಿವೃದ್ಧಿ ಕುಂಠಿತಗೊಂಡಿದೆ. ಈ ಅಭಿವೃದ್ಧಿಗೆ ಮಹಾನಗರ ಪಾಲಿಕೆ ಪಾತ್ರ ಹೆಚ್ಚಾಗಿದೆ. ಆದರೆ ಪಾಲಿಕೆಯ ಅವಧಿ ಮುಗಿದು ಹಲವು ತಿಂಗಳುಗಳು ಆದರು ಕೂಡ ಚುನಾವಣೆ ಇನ್ನೂ ಘೋಷಣೆಯಾಗಿಲ್ಲ. ಅಧಿಕಾರಿಗಳು ಬೇಜವಬ್ದಾರಿಯಿಂದ ವರ್ತಿಸುತ್ತಿದ್ದಾರೆ. ಕೂಡಲೇ ಮಹಾನಗರಪಾಲಿಕೆಗೆ ಚುನಾವಣೆ ನಡೆಸಬೇಕು ಎಂದರು.
ಸ್ಥಳೀಯ ಸಂಸ್ಥೆ ಚುನಾವಣೆಗೆ ಸಂಬಂಧಿಸಿದಂತೆ ರಾಷ್ಟ್ರಭಕ್ತ ಬಳಗವು ಆಯಾ ಸಂದರ್ಭಕ್ಕೆ ತಕ್ಕಂತೆ ತೀರ್ಮಾನ ತೆಗೆದುಕೊಳ್ಳುತ್ತದೆ. ಡಿಸಿಸಿ ಬ್ಯಾಂಕ್ ಚುನಾವಣೆಯಲ್ಲಿ ರಾಷ್ಟ್ರಭಕ್ತ ಬಳಗದ ಮಹಾಲಿಂಗಶಾಸ್ತ್ರಿಯವರು ವಿಜೇತರಾಗಿದ್ದಾರೆ. ಅವರನ್ನು ಜು.15ರಂದು ಸನ್ಮಾನಿಸಲಾಗುವುದು ಎಂದರು.
ಪತ್ರಿಕಾಗೋಷ್ಟಿಯಲ್ಲಿ ಪ್ರಮುಖರಾದ ಮಹಾಲಿಂಗಶಾಸ್ತ್ರಿ, ಈ.ವಿಶ್ವಾಸ್, ಗನ್ನಿಶಂಕರ್, ಅ.ಮಾ.ಪ್ರಕಾಶ್, ಭೂಪಾಲ್, ಬಾಲು, ನಾಗರಾಜು, ಮೋಹನ್ ಇದ್ದರು.