ದಾವಣಗೆರೆ: ಶ್ರೀರಾಮಸೇನೆ ಜಿಲ್ಲಾಧ್ಯಕ್ಷ ಮಣಿಕಂಠ ಸರ್ಕಾರ ಪ್ರಯಾಣಿಸುತ್ತಿದ್ದ ಕಾರು ನಗರದ ರಿಂಗ್ ರೋಡಿನಲ್ಲಿ ಅಪಘಾತವಾಗಿದೆ. ಅಪಘಾತದಲ್ಲಿ ಮಣಿಕಂಠ ಸರ್ಕಾರ ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ತಿಳಿದು ಬಂದಿದೆ.
ನಗರದ ರಿಂಗ್ ರಸ್ತೆಯ ಜಿಲ್ಲಾಧಿಕಾರಿ ವಸತಿಗೃಹದ ಬಳಿ ಈ ಅಪಘಾತ ಸಂಭವಿಸಿದ್ದು, ಮಣಿಸರ್ಕಾರ ಪ್ರಯಾಣಿಸುತ್ತಿದ್ದ ಕಾರು ರಸ್ತೆಯ ಡಿವೇಡರ್ ರಭಸವಾಗಿ ಡಿಕ್ಕಿ ಹೊಡೆದು ಪಕ್ಕದಲ್ಲಿ ಚಲಿಸುತ್ತಿದ್ದ ಬೈಕ್ ನ್ನು ಉಜ್ಜಿಕೊಂಡು ಹೋಗಿ ಪಕ್ಕದ ಕಾರು ಶೋರೂಮಿಗೆ ನುಗ್ಗಿದೆ. ಅಪಘಾತಕ್ಕೆ ಅತೀ ವೇಗ ಹಾಗೂ ನಿರ್ಲಕ್ಷವೆ ಕಾರಣ ಎಂದು ಹೇಳಲಾಗುತ್ತಿದೆ.
ಡಿವೇಡರ್ ಗೆ ರಭಸವಾಗಿ ಡಿಕ್ಕಿ ಹೊಡೆದ ಕಾರಣ ಕಾರಿನ ಮುಂಭಾಗ ಸಂಪೂರ್ಣ ನುಜ್ಜುಗುಜ್ಜಾಗಿದೆ.
ಗಂಭೀರವಾಗಿ ಗಾಯಗೊಂಡಿರುವ ಮಣಿ ಸರ್ಕಾರ್ ಅವರನ್ನು ಎಸ್. ಎಸ್. ಹೈಟೆಕ್ ಆಸ್ಪತ್ರೆಗೆ ಚಿಕಿತ್ಸೆಗೆ ದಾಖಲಿಸಲಾಗಿದೆ. ಅಪಘಾತ ಕುರಿತಂತೆ ಇನ್ನಷ್ಟು ಮಾಹಿತಿ ಬರಬೇಕಿದೆ. ಮಣಿ ಸರ್ಕಾರ್ ಸದ್ಯಕ್ಕೆ ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ಹೇಳಲಾಗುತ್ತಿದೆ.