ಕೊಟ್ಟಿಗೆಹಾರ: ಕೊಟ್ಟಿಗೆಹಾರದಿಂದ ಬಣಕಲ್ ಹೋಗುವ ರಸ್ತೆಯ ಮಾರ್ಗ ಮಧ್ಯೆ ಮಳೆಗೆ ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ಹೇಮಾವತಿ ನದಿಯ ಕಿರು ಕಾಲುವೆಗೆ ನೇರವಾಗಿ ಬಿದ್ದಿದೆ.
ಕಾರು ಮಂಗಳೂರು ಕಡೆಯಿಂದ ಮೂಡಿಗೆರೆ ಕಡೆಗೆ ಸಾಗುತ್ತಿದ್ದಾಗ ಮಳೆಗೆ ತಿರುವು ಕಾಣದೇ ಹಳ್ಳಕ್ಕೆ ಬಿದ್ದಿದೆ. ಈ ಹೆದ್ದಾರಿಯಲ್ಲಿ ನೀರು ನಿಲ್ಲುವುದರಿಂದ ಈವರೆಗೆ ಸುಮಾರು ಮೂರು ನಾಲ್ಕು ವಾಹನಗಳು ಅಪಘಾತಕ್ಕೀಡಾಗಿವೆ.
ವಿಲ್ಲುಪುರಂ–ಮಂಗಳೂರು ರಾಷ್ಟ್ರೀಯ ಹೆದ್ದಾರಿಯ ಬಣಕಲ್ ಸಮೀಪ ಹೆದ್ದಾರಿ ಅವೈಜ್ಞಾನಿಕ ಕಾಮಗಾರಿಯಿಂದ ನೀರು ನಿಂತು ಇಂತಹ ಘಟನೆ ಸಂಭವಿಸುತ್ತಿದೆ. ಕಾರಿನಲ್ಲಿ ಇಬ್ಬರೇ ಇದ್ದುದರಿಂದ ಕಾರು ನೀರಿಗೆ ಜಾರಿರುವುದರಿಂದ ಯಾವುದೇ ಪ್ರಾಣ ಹಾನಿಯಾಗಿಲ್ಲ. ಸಣ್ಣ ಪುಟ್ಟ ಗಾಯಗಳಿಂದ ಪಾರಾಗಿದ್ದಾರೆ. ಮಂಗಳೂರು ಮೂಲದ ಕಾರೆಂದು ತಿಳಿದು ಬಂದಿದೆ.