ಶಿವಮೊಗ್ಗ: ಬಡ ಮತ್ತು ಸಾಮಾನ್ಯ ಜನರ ಆರ್ಥಿಕ ಸಬಲೀಕರಣಕ್ಕಾಗಿ ಸರ್ಕಾರ ಜಾರಿಗೆ ತಂದಿರುವ ಐದು ಮಹಾತ್ವಾಕಾಂಕ್ಷಿ ಗ್ಯಾರಂಟಿ ಯೋಜನೆಗಳು ಮುಂದುವರೆಯಲಿದ್ದು, ಇನ್ನೂ ಪರಿಣಾಮಕಾರಿ ಅನುಷ್ಟಾನ ಮತ್ತು ಯಶಸ್ಸಿಗೆ ಅಧಿಕಾರಿಗಳು ಸಹಕರಿಸಬೇಕೆಂದು ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಟಾನ ಪ್ರಾಧಿಕಾರದ ಅಧ್ಯಕ್ಷರಾದ ಸಿ ಎಸ್ ಚಂದ್ರಭೂಪಾಲ್ ಹೇಳಿದರು.
ಜಿಲ್ಲಾಡಳಿತ ಕಚೇರಿ ಸಭಾಂಗಣದಲ್ಲಿ ಜೂ.25 ರಂದು ಏರ್ಪಡಿಸಲಾಗಿದ್ದ ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಟಾನ ಪ್ರಾಧಿಕಾರದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಶಕ್ತಿ ಯೋಜನೆ, ಗೃಹಜ್ಯೋತಿ, ಗೃಹಲಕ್ಷ್ಮಿ, ಅನ್ನಭಾಗ್ಯ ಮತ್ತು ಯುವನಿಧಿ ಈ ಐದು ಯೋಜನೆಗಳು ರಾಜ್ಯದಲ್ಲಿ ಇತಿಹಾಸವನ್ನೇ ಸೃಷ್ಟಿಸಿದೆ. ಬಡ ಮತ್ತು ಸಾಮಾನ್ಯ ಜನರ ಬದುಕಿಗೆ ಶಕ್ತಿಯಾಗಿದೆ. ಅವರ ಆರ್ಥಿಕ ಸಬಲೀಕರಣಕ್ಕೆ ಕಾರಣವಾಗಿದ್ದು ಇಂತಹ ಯೋಜನೆಗಳ ಅನುಷ್ಟಾನದಲ್ಲಿ ಎದುರಾಗುವ ಸಣ್ಣ ಪುಟ್ಟ ತಾಂತ್ರಿಕ ಮತ್ತು ಇತರೆ ದೋಷಗಳನ್ನು ಅಧಿಕಾರಿಗಳು ಸರಿಪಡಿಸಿಕೊಂಡು ಮತ್ತು ಯೋಜನೆ ಕುರಿತು ಜನರಲ್ಲಿ ಅರಿವು ಮೂಡಿಸಿ ಮತ್ತಷ್ಟು ಪರಿಣಾಮಕಾರಿಯಾಗಿ ಜಾರಿಗೊಳಿಸಬೇಕೆಂದು ಅಧಿಕಾರಿಗಳಿಗೆ ಸೂಚನೆ ನೀಡಿದರು.
ಸಭೆಯಲ್ಲಿ ಜಿಲ್ಲಾ ಮತ್ತು ತಾಲ್ಲೂಕು ಮಟ್ಟದ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರು, ನಿರ್ದೇಶಕರು, ಸದಸ್ಯ ಕಾರ್ಯದರ್ಶಿಗಳು, ಗ್ಯಾರಂಟಿ ಯೋಜನೆಗಳ ಅನುಷ್ಟಾನ ಇಲಾಖೆಗಳ ಮುಖ್ಯಸ್ಥರು ಪಾಲ್ಗೊಂಡಿದ್ದರು.