ಬೆಂಗಳೂರು: ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ದರ್ಶನ್ ಸೇರಿದಂತೆ ಆರು ಆರೋಪಿಗಳನ್ನು ಕೋರ್ಟ್ ಮೂರನೇ ಬಾರಿಗೆ ಪೊಲೀಸ್ ಕಸ್ಟಡಿಗೆ ಒಪ್ಪಿಸಿದರೆ, ಪವಿತ್ರಾ ಗೌಡ ಮತ್ತು ಇತರ ಆರೋಪಿಗಳು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿತು.
ಚಿತ್ರ ನಟ ದರ್ಶನ್ ಸೇರಿದಂತೆ 6 ಮಂದಿ ಆರೋಪಿಗಳನ್ನು ಮತ್ತೆ ಪೊಲೀಸ್ ಕಸ್ಟಡಿಗೆ ನೀಡಲಾಗಿದೆ. ಪವಿತ್ರ ಗೌಡ ಅವರಿಗೆ ನ್ಯಾಯಂಗ ಬಂಧನ ವಿಧಿಸಲಾಗಿರುವುದರಿಂದ ಜೈಲು ಸೇರಲಿದ್ದಾರೆ.
ನಟ ದರ್ಶನ್, ನಟಿ ಪವಿತ್ರ ಗೌಡ ಸೇರಿದಂತೆ ಪೊಲೀಸ್ ಕಸ್ಟಡಿಯಲ್ಲಿದ್ದ ಎಲ್ಲ ಆರೋಪಿಗಳನ್ನು ಇಂದು ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗಿತ್ತು. ಈ ಸಂದರ್ಭದಲ್ಲಿ ಎ-2 ಆರೋಪಿಯಾಗಿರುವ ದರ್ಶನ್ ಮತ್ತು ಇತರ ಐವರ ವಿಚಾರಣೆ ಅಗತ್ಯವಿರುವುದರಿಂದ ಸರ್ಕಾರಿ ಅಭಿಯೋಜಕರ ವಿನಂತಿಯ ಮೇರೆಗೆ ಮತ್ತೆ ಪೊಲೀಸ್ ಕಸ್ಟಡಿಗೆ ನೀಡಲಾಗಿದೆ.
ಆರೋಪಿಗಳಾದ ವಿನಯ್, ಪ್ರದೋಷ್, ನಾಗರಾಜ್, ಲಕ್ಷ್ಮಣ್ ಮತ್ತು ಧನರಾಜ್ ಮತ್ತೆ ಪೊಲೀಸ್ ಕಸ್ಟಡಿಯಲ್ಲಿ ದರ್ಶನ್ ಅವರೊಂದಿಗೆ ವಿಚಾರಣೆ ಎದುರಿಸಲಿದ್ದಾರೆ.