ದಾವಣಗೆರೆ: ಈ ಬಾರಿಯ ವಿಶ್ವ ಯೋಗಾ ದಿನಾಚರಣೆಯನ್ನು ‘ಸ್ವಂತ ಮತ್ತು ಸಮಾಜಕ್ಕಾಗಿ ಯೋಗ’ ಎಂಬ ಘೋಷವಾಕ್ಯದಡಿ ಅಂತರಾಷ್ಟ್ರೀಯ ಯೋಗ ದಿನಾಚರಣೆಯನ್ನು ನಗರದ ಹೈಸ್ಕೂಲ್ ಮೈದಾನದಲ್ಲಿ ಆಚರಿಸಲಾಯಿತು.
ಜಿಲ್ಲಾಧಿಕಾರಿ ಡಾ. ವೆಂಕಟೇಶ್ ಎಂ.ವಿ, ಪೊಲೀಸ್ ವರಿಷ್ಠಾಧಿಕಾರಿ ಉಮಾ ಪ್ರಶಾಂತ್ ಯೋಗಾದಲ್ಲಿ ಭಾಗಿಯಾಗಿದ್ದು, ಸಾವಿರ ಸಂಖ್ಯೆಯಲ್ಲಿ ಯೋಗಾಪಟುಗಳು ಸೇರಿದ್ದರು.
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಆಯುಷ್ ಇಲಾಖೆ ಸೇರಿದಂತೆ ಎಲ್ಲಾ ಇಲಾಖೆಗಳು, ತಪೋವನ ಆಯುರ್ವೇದ, ಯೋಗ ಮತ್ತು ನ್ಯಾಚುರೋಪತಿ ಮೆಡಿಕಲ್ ಕಾಲೇಜು, ಅಶ್ವಿನಿ ಆಯುರ್ವೇದ ಮೆಡಿಕಲ್ ಕಾಲೇಜು, ಎನ್.ಸಿ.ಸಿ, ಎನ್.ಎಸ್.ಎಸ್, ಪ್ರಜಾಪಿತ ಬ್ರಹ್ಮಕುಮಾರಿ ವಿಶ್ವವಿದ್ಯಾನಿಲಯ, ಪತಂಜಲಿ ಯೋಗ ಶಿಕ್ಷಣ ಸಮಿತಿ, ಪತಂಜಲಿ ಯೋಗ ಸಮಿತಿ ಇವರ ಸಂಯುಕ್ತಾಶ್ರಯದಲ್ಲಿ ಜಿಲ್ಲಾ ಕೇಂದ್ರದಲ್ಲಿ ಯೋಗಾ ದಿನವನ್ನು ಆಯೋಜಿಸಲಾಗಿತ್ತು.
ಸಂಸದೆ ಪ್ರಭಾ ಮಲ್ಲಿಕಾರ್ಜುನ್ ಹಾಗೂ ತರಳಬಾಳು ಶಿವಮುರ್ತಿ ಶಿವಾಚಾರ್ಯ ಸ್ವಾಮೀಜಿ..ಇಂದು ಬೆಳಿಗ್ಗೆ 7 ಗಂಟೆಗೆ ವಿಶ್ವ ಯೋಗಾ ದಿನಾಚರಣೆಗೆ ಚಾಲನೆ ನೀಡಿದರು.
ಈ ವೇಳೆ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಸುರೇಶ್ ಬಿ.ಇಟ್ನಾಳ್, ಜಿಲ್ಲಾ ಆಯುಷ್ ಅಧಿಕಾರಿ ಡಾ; ಯೋಗೇಂದ್ರಕುಮಾರ್ ಬಿ.ಯು, ಯೋಗ ಒಕ್ಕೂಟದ ಅಧ್ಯಕ್ಷ ವಾಸುದೇವ ರಾಯ್ಕರ್ ಇತರ ಪ್ರಮುಖರು ಉಪಸ್ಥಿತರಿದ್ದರು.