Thursday, December 5, 2024
Google search engine
Homeಇ-ಪತ್ರಿಕೆದರ್ಶನ್ ಅಭಿಮಾನಿಗಳಿಂದ ಕೊಲೆ ಬೆದರಿಕೆ: ದೂರು ದಾಖಲಿಸಿದ ನಟ ಪ್ರಥಮ್

ದರ್ಶನ್ ಅಭಿಮಾನಿಗಳಿಂದ ಕೊಲೆ ಬೆದರಿಕೆ: ದೂರು ದಾಖಲಿಸಿದ ನಟ ಪ್ರಥಮ್

ಬೆಂಗಳೂರು: ನಟ ದರ್ಶನ್ ಅಭಿಮಾನಿಗಳಿಂದ  ಕೊಲೆ ಬೆದರಿಕೆಯ ಕರೆಗಳು ಬರುತ್ತಿವೆ ಎಂದು ಆರೋಪಿಸಿ ನಟ ಪ್ರಥಮ್ ಜ್ಞಾನ ಭಾರತಿ ನಗರ ಪೊಲೀಸರಿಗೆ ಬುಧವಾರ ದೂರು ನೀಡಿದ್ದಾರೆ.

ಈ ಕುರಿತು ನಟ ಪ್ರಥಮ್ ತಮ್ಮ ಎಕ್ಸ್ ಖಾತೆಯ ಮೂಲಕ ಖಚಿತಪಡಿಸಿದ್ದಾರೆ.

“ಜೀವನ ದೊಡ್ಡದು, ಯಾರಿಗೋಸ್ಕರವೋ ಹಾಳು ಮಾಡಿಕೊಳ್ಳಬೇಡಿ. ನಾನು ಶಾಂತಿಯಿಂದಲೇ ಇದ್ದೆ. ಆದರೆ, ನೀವು ಅತಿಯಾಗಿ ನಮ್ಮ”ಕರ್ನಾಟಕದ ಅಳಿಯ” ಸಿನಿಮಾ ತಂಡದ ಕಚೇರಿ ನಂಬರ್‌ಗೆ ಕರೆ ಮಾಡಿ ಬೆದರಿಕೆ ಹಾಕುತಿದ್ದೀರಾ! ಇನ್ಮೇಲೆ ನನಗೆ ಬರುವ ಕರೆ, ಮೆಸೇಜ್ ಮತ್ತು ಸಾಮಾಜಿಕ ಜಾಲತಾಣದಲ್ಲಿ ಬೆದರಿಕೆಗಳು ಸೇರಿದಂತೆ ಎಲ್ಲವನ್ನು ಪೊಲೀಸರು ನೋಡಿಕೊಳ್ಳುತ್ತಾರೆ. ಬದುಕು ಸುಂದರವಾದದ್ದು ಅಂಧಾಭಿಮಾನಿಗಳೇ ಅದನ್ನು ನಿಮ್ಮ ತಂದೆ ತಾಯಿಗಳಿಗೆ ಮೀಸಲಿಡಿ” ಎಂದು ದರ್ಶನ್ ಅಭಿಮಾನಿಗಳಿಗೆ ಕಿವಿಮಾತು ಹೇಳಿದ್ದಾರೆ.

ನಟ ದರ್ಶನ್ ಅವರದ್ದು ಕೊಲೆ ಪ್ರಕರಣದಲ್ಲಿ ಏನೂ ತಪ್ಪಿಲ್ಲ ಎಂದು ಅಭಿಮಾನಿಗಳ ಸಮರ್ಥನೆ. ಇದಕ್ಕೆ  ನಟ ಪ್ರಥಮ್, “ಅನ್ನಪೂರ್ಣೇಶ್ವರಿ ನಗರ ಠಾಣೆ ನಮ್ಮ ಮನೆಯಿಂದ ಹತ್ತಿರದಲ್ಲಿದೆ. ಅಲ್ಲಿನ ಇನ್ಸ್‌ಪೆಕ್ಟರ್ ಅಥವಾ ಎಸಿಪಿಗೆ ಹೇಳಿ ಒಂದು ವಾರದ ಮಟ್ಟಿಗೆ ಪೊಲೀಸ್ ಕಾನ್‌ಸ್ಟೆಬಲ್ ಆಗಲು ನನಗೆ ಅನುಮತಿ ಕೊಡಿಸಿ, ನನಗೆ ಸಂಬಳ ಕೊಡಬೇಕಾಗಿಲ್ಲ, ಒಂದು ದೊಣ್ಣೆ ಸಿಕ್ಕಿದರೆ ಸಾಕು. ಸ್ಟೇಷನ್ ಮುಂದೆ ನಿಂತಿರುವವರಿಗೆಲ್ಲರಿಗೂ ನಾಯಿಗೆ ಹೊಡೆದಂಗೆ ಹೊಡೆಯುತ್ತೇನೆ” ಎಂದಿದ್ದರು.

ಇದರಿಂದ ರೊಚ್ಚಿಗೆದ್ದ ದರ್ಶನ್ ಅಭಿಮಾನಿಗಳು ಪ್ರಥಮ್ ಅವರಿಗೆ ಕೊಲೆ ಬೆದರಿಕೆ ಹಾಕುತ್ತಿದ್ದಾರೆ. ಈ ಕುರಿತು ಪ್ರಥಮ್ ಪೊಲೀಸ್ ದೂರು ನೀಡಿದ್ದಾರೆ.

RELATED ARTICLES
- Advertisment -
Google search engine

Most Popular

Recent Comments