ಶಿವಮೊಗ್ಗ : ಪ್ರಸ್ತುತ ಅನುಷ್ಠಾನದಲ್ಲಿರುವ ಸಕಾಲ ಯೋಜನೆಯನ್ನು ವ್ಯವಸ್ಥಿತವಾಗಿ ಜಾರಿಗೆ ತರಲು ಸಂಬಂಧಿಸಿದ ಎಲ್ಲಾ ಇಲಾಖೆಗಳ ಅಧಿಕಾರಿಗಳು ಅಗತ್ಯ ಕ್ರಮ ಕೈಗೊಳ್ಳುವಂತೆ ಜಿಲ್ಲಾಧಿಕಾರಿ ಡಾ.ಎಂ. ಲೋಕೇಶ್ ಅಧಿಕಾರಿಗಳಿಗೆ ಸೂಚಿಸಿದರು.
ಇಂದು ಸಕಾಲ ಯೋಜನೆ ವ್ಯವಸ್ಥಿತ ಅನುಷ್ಠಾ ನದ ಕುರಿತು ತಮ್ಮ ಕಚೇರಿ ಸಭಾಂಗಣದಲ್ಲಿ ಏರ್ಪಡಿಸಲಾಗಿದ್ದ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡುತ್ತಿದ್ದರು. ಈ ಯೋಜನೆಯಡಿ ಒಟ್ಟು ೭೫೨ ಸೇವೆಗಳಲ್ಲಿ ಜಿಲ್ಲೆಯಲ್ಲಿ ೩೫ಇಲಾಖೆಗಳ ೫೫೬ಸೇವೆಗಳನ್ನು ಒದಗಿಸಲಾಗುತ್ತಿದೆ. ಅವುಗಳಲ್ಲಿ ಬಹುಮುಖ್ಯ ವಾಗಿ ಆರೋಗ್ಯ, ಅರಣ್ಯ ಸೇರಿದಂತೆ ಇನ್ನೂ ಹಲವು ಇಲಾಖೆಗಳ ಅಧಿಕಾರಿಗಳು ಆನ್‌ಲೈನ್ ನಲ್ಲಿ ತಮ್ಮ ಹೆಸರನ್ನು ನೋಂದಾಯಿಸಿ ಕೊಳ್ಳದಿರುವುದನ್ನು ಪ್ರಶ್ನಿಸಿದ ಅವರು ಈವರೆಗೆ ನೋಂದಾಯಿಸಿಕೊಳ್ಳದಿರುವ ಅಧಿಕಾರಿಗಳು ಕೂಡಲೆ ನೋಂದಾಯಿಸಿಕೊಳ್ಳುವಂತೆ ಸೂಚಿಸಿ ದರು. ಈವರೆಗೆ ನೋಂದಾಯಿಸಿಕೊಳ್ಳದ ಅಧಿಕಾರಿಗಳಿಗೆ ನೋಟೀಸ್ ಜಾರಿ ಮಾಡಲಾಗುವುದು ಎಂದರು.
ಸಕಾಲ ಯೋಜನೆಯ ಅನುಷ್ಠಾನ ಹಾಗೂ ನಿಯಮಗಳ ಕುರಿತು ಸಾರ್ವಜನಿಕರಲ್ಲಿ ಅರಿವು ಮೂಡಿಸಲು ಇಲಾಖೆಗಳ ಬಿತ್ತಿಗಳಲ್ಲಿ ಸಾರ್ವಜನಿಕರಿಗೆ ಕಾಣುವಂತೆ ಮಾಹಿತಿ ಫಲಕ ಅಳವಡಿಸಲು ಸೂಚಿಸಲಾಗಿದೆ ಎಂದರು.
ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಚನ್ನಬಸಪ್ಪ, ಉಪವಿಭಾಗಾಧಿಕಾರಿ ಕೃಷ್ಣಮೂರ್ತಿ, ಜಿಲ್ಲಾ ಪಂಚಾಯಿತಿ ಉಪಕಾರ್ಯದರ್ಶಿ ಕೆ.ಎಸ್.ಮಣಿ ಸೇರಿದಂತೆ ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.
ಸಕಾಲ ಯೋಜನೆ ವ್ಯವಸ್ಥಿತ ಅನುಷ್ಠಾನಕ್ಕೆ ಅಧಿಕಾರಿಗಳಿಗೆ ಸೂಚನೆ : ಜಿಲ್ಲಾಧಿಕಾರಿ
RELATED ARTICLES