ಸೊರಬ: ಅಜಿಂ ಪ್ರೇಮ್ ಜೀ ಪೌಂಡೇಷನ್ ಸಹಕಾರದೊಂದಿಗೆ ಮುಂದಿನ ಮೂರು ವರ್ಷಗಳ ಅವಧಿಗೆ ಶಾಲಾ ಮಕ್ಕಳಿಗೆ ವಾರದಲ್ಲಿ 6 ದಿನವೂ ಮೊಟ್ಟೆ ವಿತರಿಸಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ತಿಳಿಸಿದ್ದಾರೆ.
ಕಳೆದ ಕೆಲವು ದಿನಗಳಿಂದ ತಾಲೂಕಿನಲ್ಲಿ ಎಡಬಿಡದೆ ಸುರಿಯುತ್ತಿರುವ ಮಳೆಯಿಂದ ಹಾನಿಗೊಳಗಾದ ಪ್ರದೇಶಗಳಿಗೆ ಸಚಿವರು ಭೇಟಿ ನೀಡಿ ಮಾತನಾಡಿದ ಅವರು, ಮಳೆ ಹಾನಿ ಸಂತ್ರಸ್ತರಿಗೆ ಸೂಕ್ತ ಸಾಂತ್ವನ ಹೇಳಿ ಅಗತ್ಯ ಪರಿಹಾರ ಕೊಡಿಸಲಾಗುವುದು ಎಂದಿದ್ದಾರೆ.
ತಾಲೂಕಿನ ಕಡಸೂರು, ತಟ್ಟಿಕೆರೆ, ಜೋಳದಗುಡ್ಡೆ, ಬಂಕಸಾಣ ಭಾಗದಲ್ಲಿ ವರದಾ ನದಿಯಿಂದ ಜಲಾವೃತಗೊಂಡಿರುವ ಪ್ರದೇಶ ಮತ್ತು ಮಳೆ ಹಾನಿ ಪರಿಶೀಲನೆ ನಡೆಸಿ ಅವರು ಮಾತನಾಡಿದರು.
ಸರ್ಕಾರ ಪ್ರಕೃತಿ ಕೋಪದಿಂದ ಹಾನಿಗಳಿಗೆ ಪರಿಹಾರ ಒದಗಿಸಲು ಅನುದಾನ ಮೀಸಲಿಟ್ಟಿದೆ ಅಧಿಕಾರಿಗಳು ತಡ ಮಾಡಿದೆ ಸರಿಯಾದ ವರದಿ ತಯಾರಿಸಿ ಸರ್ಕಾರಕ್ಕೆ ಸಲ್ಲಿಸಿ ಎಂದು ತಾಕೀತು ಮಾಡಿದರು.
ತಾಲೂಕಿನ ವರದಾ ನದಿಗೆ 5 ಬ್ಯಾರೇಜ್‌ಗಳನ್ನು ನಿರ್ಮಿಸಲು 58 ಕೋಟಿ ರೂ. ಅನುದಾನ ಬಿಡುಗಡೆಯಾಗಿದ್ದು, ಮಳೆಗಾಲ ಮುಗಿದ ಕೂಡಲೇ ಟೆಂಡರ್ ಕರೆದು ಕಾಮಗಾರಿ ಆರಂಭಿಸಲಾಗುವುದು ಇದರಿಂದ ರೈತರು ಬೇಸಿಗೆಯಲ್ಲಿ ಬೆಳೆ ಬೆಳೆಯಲು ಅನುಕೂಲವಾಗುವುದು ಎಂದರು. ವರದ ನದಿಗೆ ಬ್ಯಾರೇಜ್ ನಿರ್ಮಾಣ ಮಾಡುವುದರಿಂದ
ಅಂತರ್ಜಲ ಹೆಚ್ಚಾಗುವುದರಿಂದ ಬೋರ್‌ವೆಲ್‌ಗಲ್ಲಿ ನೀರಿನ ಪ್ರಮಾಣ ಹೆಚ್ಚಾಗಿ ರೈತರಿಗೆ ಅನುಕೂಲವಾಗಲಿದೆ ಎಂದರು.
ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಡಾ. ಗುರುದತ್ತ ಹೆಗಡೆ, ಎಸ್ಪಿ ಮಿಥುನ್ ಕುಮಾರ್, ಸಿಇಒ ಹೇಮಂತ್. ಸಾಗರ ಉಪ ವಿಭಾಗಾಧಿಕಾರಿ ಡಾ. ಸತೀಶ್ ಕುಮಾರ್, ತಹಸೀಲ್ದಾರ್ ಮಂಜುಳಾ ಬಿ.ಹೆಗಡಾಳ, ಇಒ ಡಾ. ಪ್ರದೀಪ್‌ಕುಮಾರ್, ಶಿರಸ್ತೇದಾರ್ ನಾಗರಾಜ್, ಸಹಾಯಕ ಕೃಷಿ ನಿರ್ದೇಶಕ ಕೆ.ಜಿ.ಕುಮಾರ್, ತೋಟಗಾರಿಕಾ ಸಹಾಯಕ ನಿರ್ದೇಶಕ ಮಂಜುನಾಥ್,
ಸಿಪಿಐ ಎಲ್.ರಾಜಶೇಖರ್, ಪಿಎಸ್‌ಐ ನಾಗರಾಜ್, ಮುಖಂಡರಾದ ತಾಪಂ ಮಾಜಿ ಅಧ್ಯಕ್ಷ ಎಚ್.ಗಣಪತಿ, ಎಪಿಎಂಸಿ ಮಾಜಿ ಅಧ್ಯಕ್ಷ ಎಲ್.ರಾಜಶೇಖರ್, ಸತ್ಯನಾರಾಯಣ, ಜೆ.ಪ್ರಕಾಶ್, ಉಮಾಪತಿ ಇತರರಿದ್ದರು.