Saturday, December 14, 2024
Google search engine
Homeಇ-ಪತ್ರಿಕೆಆಯ್ದ ಕಾಲೇಜುಗಳಲ್ಲಿ ಉಚಿತ ನೀಟ್ ತರಬೇತಿ: ಮಧು ಬಂಗಾರಪ್ಪ ಮಾಹಿತಿ

ಆಯ್ದ ಕಾಲೇಜುಗಳಲ್ಲಿ ಉಚಿತ ನೀಟ್ ತರಬೇತಿ: ಮಧು ಬಂಗಾರಪ್ಪ ಮಾಹಿತಿ

ಶಿವಮೊಗ್ಗ : ಸಾರ್ವಜನಿಕರ ಕುಂದು ಕೊರತೆಗಳ ಬಗ್ಗೆ ಅಹವಾಲುಗಳನ್ನು ಸ್ವೀಕರಿಸಲು ಜೂ.28 ರಂದು ಜನಸ್ಪಂದನ ಕಾರ್ಯಕ್ರಮ ಮತ್ತು ಜೂ.29 ರಂದು ಕೆಡಿಪಿ ಸಭೆಯನ್ನು ಹಮ್ಮಿಕೊಳ್ಳಲಾಗಿದೆ ಎಂದು ಶಾಲಾ ಶಿಕ್ಷಣ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಮಧು ಬಂಗಾರಪ್ಪ ತಿಳಿಸಿದರು.

ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕಳೆದ ಬಾರಿಯೂ ಇಂತಹ ಕಾರ್ಯಕ್ರಮವನ್ನು ಆಯೋಜಿಸಿ ಸಾರ್ವಜನಿಕರ ಕುಂದುಕೊರತೆಗಳ ಬಗ್ಗೆ ಅಹವಾಲು ಸ್ವೀಕರಿಸಲಾಗಿತ್ತು. ಅದೇ ರೀತಿ ಈ ಬಾರಿಯೂ ಜನಸ್ಪಂದನ ಕಾರ್ಯಕ್ರಮ ಹಮ್ಮಿಕೊಂಡು ಸಾರ್ವಜನಿಕರ ಸಮಸ್ಯೆಗಳಿಗೆ ಸ್ಪಂದಿಸಲಾಗುವುದು. ಕಳೆದ ಎರಡು ಮೂರು ತಿಂಗಳಿಂದ ಚುನಾವಣೆ ಹಿನ್ನಲೆಯಲ್ಲಿ ಅಭಿವೃದ್ಧಿ ಕೆಲಸಗಳು ಕುಂಠಿತಗೊಂಡಿವೆ. ಈಗ ಚುನಾವಣೆ ಮುಗಿದಿದೆ, ಬಜೆಟ್‍ನಲ್ಲಿ ಹಣ ಕೂಡ ಮಂಜೂರಾಗಿದ್ದು, ಅಭಿವೃದ್ಧಿ ಕೆಲಸಕ್ಕೆ ವೇಗ ನೀಡಲಾಗುವುದು ಎಂದರು.

ಬೆಂಗಳೂರಿನಲ್ಲಿ ನಡೆದ ಇತ್ತೀಚಿನ ಸಭೆಯೊಂದರಲ್ಲಿ ಜಿಲ್ಲಾ ಮಟ್ಟದಲ್ಲಿರುವ ಸಮಸ್ಯೆಗಳನ್ನು ಅವರವರ ಹಂತದಲ್ಲಿಯೇ ಬಗೆಹರಿಸಿಕೊಳ್ಳಲು ಮುಖ್ಯಮಂತ್ರಿಗಳು ಸಂಬಂಧಿಸಿದ ಸಚಿವರಿಗೆ ಸೂಚಿಸಿದ್ದಾರೆ. ಅರಣ್ಯಕ್ಕೆ ಸಂಬಂಧಿಸಿದ ಕಾನೂನು ಸಡಿಲವಾಗಬೇಕು. ಕಾನೂನು ಸಡಿಲ ಮಾಡಿಲ್ಲವೆಂದರೆ ಬಹಳ ಸಮಸ್ಯೆಗೆ ಪರಿಹಾರ ಕಂಡುಕೊಳ್ಳುವುದು ಕಷ್ಟವಾಗುತ್ತದೆ ಎಂದರು.

ಅನಧಿಕೃತ ಶಾಲೆಗಳ ಬಗ್ಗೆ ಕೇಳಿದ ಪತ್ರಕರ್ತರ ಪ್ರಶ್ನೆಗೆ ಉತ್ತರಿಸಿದ ಅವರು, ರಾಜ್ಯದಲ್ಲಿ ಸುಮಾರು 1900 ಅನಧಿಕೃತ ಶಾಲೆಗಳನ್ನು ಸರ್ಕಾರ ಗುರುತಿಸಿದ್ದು ಕಾನೂನು ಉಲ್ಲಂಘಿಸಿದವರ ವಿರುದ್ಧ ಕ್ರಮಕೈಗೊಳ್ಳಲಾಗುವುದು ಎಂದರು.

ನೀಟ್‍ಗೆ ಸಂಬಂಧಿಸಿದಂತೆ ರಾಜ್ಯದ ಆಯ್ದ ಕಾಲೇಜುಗಳಲ್ಲಿ ಸರ್ಕಾರದ ವತಿಯಿಂದ ಉಚಿತವಾಗಿ ನೀಟ್ ತರಬೇತಿ ನೀಡುವ ಕ್ರಮ ಕೈಗೊಳ್ಳಲಾಗುವುದು. ಬಡ ವಿದ್ಯಾರ್ಥಿಗಳಿಗೆ ಇದರಿಂದ ಪ್ರಯೋಜನವಾಗುವುದು. ಅನುದಾನಿತ ಶಾಲೆಗಳ ನೇಮಕಾತಿಗೆ ಸಂಬಂಧಿಸಿದಂತೆ ಈಗಿರುವ ನಿರ್ಬಂಧವನ್ನು ಸಡಿಲಿಸಲು ಈಗಾಗಲೇ ಕ್ರಮಕೈಗೊಳ್ಳಲಾಗಿದೆ ಎಂದ ಅವರು, ದರ್ಶನ್ ಪ್ರಕರಣ ಕುರಿತಂತೆ ಕಾನೂನು ಇದೆ, ಕಾನೂನು ನೋಡಿಕೊಳ್ಳುತ್ತದೆ ಎಂದು ಹೇಳಿದರು.

ಪತ್ರಿಕಾಗೋಷ್ಠಿಯಲ್ಲಿ ವಿಧಾನ ಪರಿಷತ್ ಸದಸ್ಯೆ ಬಲ್ಕೀಷ್ ಬಾನು, ಪ್ರಮುಖರಾದ ಆರ್.ಪ್ರಸನ್ನಕುಮಾರ್, ಚಂದ್ರಭೂಪಾಲ್, ಜಿ.ಡಿ.ಮಂಜುನಾಥ್, ಕಲಗೋಡು ರತ್ನಾಕರ್, ಸಿದ್ದಪ್ಪ, ಚಿನ್ನಪ್ಪ, ಶಿವಾನಂದ್, ಚಂದ್ರಶೇಖರ್.ಎಸ್.ಟಿ, ವಸಂತ್ ಕುಮಾರ್ ಇದ್ದರು.

RELATED ARTICLES
- Advertisment -
Google search engine

Most Popular

Recent Comments