ಬಳ್ಳಾರಿ: ತುಂಗಭದ್ರಾ ಜಲಾಶಯ ಬಹುತೇಕ ಭರ್ತಿಯಾಗಿದೆ, ಇದರ 28 ಕ್ರಸ್ಟ್ ಗೇಟ್ ಓಪನ್ ಮಾಡಿ, ನದಿಗೆ 83,649 ಕ್ಯುಸೆಕ್ ನೀರನ್ನು ಬಿಡುಗಡೆ ಮಾಡಲಾಗಿದೆ.
105 ಟಿಎಂಸಿ ಸಾಮರ್ಥ್ಯದ ಈ ಜಲಾಶಯದಲ್ಲಿ 102. 576 ಟಿಎಂಸಿ ನೀರು ಸಂಗ್ರಹವಾಗಿದ್ದು, 28 ಕ್ರಸ್ಟ್ ಗೇಟ್‌ಗಳನ್ನು ತೆರೆಯುವ ಮೂಲಕ ನದಿಗೆ ನೀರು ಬಿಡಲಾಗಿದೆ.
81030 ಕ್ಯೂಸೆಕ್ ನೀರು ಒಳಹರಿವು ಇದ್ದು, ಇಷ್ಟೇ ಪ್ರಮಾಣದಲ್ಲೇ ನದಿಗೆ ನೀರನ್ನು ಬಿಡುಗಡೆ ಮಾಡಲಾಗುತ್ತಿದೆ.
ಭಾರೀ ಪ್ರಮಾಣದ ನೀರನ್ನು ಬಿಡುಗಡೆ ಮಾಡಿದ ಹಿನ್ನೆಲೆಯಲ್ಲಿ ನದಿ ಪಾತ್ರಕ್ಕೆ ಜನರು ಮತ್ತು ಜಾನುವಾರುಗಳು ತೆರಳದಂತೆ ಜನರಿಗೆ ಡಂಗುರ ಸಾರಿ ಎಚ್ಚರಿಕೆ ನೀಡಲಾಗುತ್ತಿದೆ.