Thursday, December 5, 2024
Google search engine
Homeಇ-ಪತ್ರಿಕೆಆಗುಂಬೆ ಬಳಿ 4 ಪಥದ ಸುರಂಗ ರಸ್ತೆಗೆ ಬಿ.ವೈ.ರಾಘವೇಂದ್ರ ಮನವಿ: ಸ್ಪಂದಿಸಿದ ಗಡ್ಕರಿ

ಆಗುಂಬೆ ಬಳಿ 4 ಪಥದ ಸುರಂಗ ರಸ್ತೆಗೆ ಬಿ.ವೈ.ರಾಘವೇಂದ್ರ ಮನವಿ: ಸ್ಪಂದಿಸಿದ ಗಡ್ಕರಿ

ನವದೆಹಲಿ: ಕೇಂದ್ರ ಭೂಸಾರಿಗೆ ಮಂತ್ರಾಲಯದ ಸಚಿವ  ನಿತಿನ್  ಗಡ್ಕರಿ ಯವರನ್ನು ಇಂದು ಅವರ ಗೃಹ ಕಛೇರಿಯಲ್ಲಿ ಶಿವಮೊಗ್ಗ ಜಿಲ್ಲಾ ಸಂಸದ ಬಿ ವೈ ರಾಘವೇಂದ್ರರವರು ಭೇಟಿ ಮಾಡಿ, ಶಿವಮೊಗ್ಗ ಲೋಕಸಭಾ ವ್ಯಾಪ್ತಿಯಲ್ಲಿ ಅಭಿವೃದ್ಧಿಯಾಗಬೇಕಾದ ಹೆದ್ದಾರಿ ಕಾಮಗಾರಿಗಳ ಅಗತ್ಯತೆಗಳ ಬಗ್ಗೆ ಚರ್ಚಿಸಿ ಯೋಜನೆಗಳಿಗೆ ಅನುಮೋದನೆ ದೊರಕಿಸಿಕೊಡಲು ಮನವಿ ಮಾಡಿದರು. 

1) ಆಗುಂಬೆಘಾಟಿ ರಸ್ತೆಗೆ ಪರ್ಯಾಯವಾಗಿ ಮೇಗರವಳ್ಳಿಯಿಂದ ಸೋಮೇಶ್ವರದವರೆಗೆ 4 ಪಥದ ಸುರಂಗ ಮಾರ್ಗದ ರಸ್ತೆ ನಿರ್ಮಾಣ.

2) ಕುಂದಾಪುರದಿಂದ ಗಂಗೊಳ್ಳಿ ಬಂದರಿನವರೆಗೆ 5.60 ಕಿ.ಮೀ ಉದ್ದದ ರಸ್ತೆ ಹಾಗು ಭಾರಿ ಸೇತುವೆ ನಿರ್ಮಾಣ.

3) ರಾ. ಹೆದ್ದಾರಿ 766 ಸಿ ಬೈಂದೂರಿನಿಂದ ವಿವಿಧೋದ್ದೇಶ ಬಂದರಿನವರೆಗೆ ತಾರಾಪತಿ ಅಳವೆಕೋಡಿ ಮೂಲಕ ವಿಸ್ತರಣೆ ಮಾಡಿ 3.80 ಕಿ.ಮೀ ಉದ್ದದ ರಸ್ತೆ ಹಾಗು ಸೇತುವೆಗಳ ನಿರ್ಮಾಣ.

4) ರಾ. ಹೆದ್ದಾರಿ 766 ಸಿ ಬೈಂದೂರಿನಿಂದ ರಾಣಿಬೆನ್ನೂರಿನವರೆಗೆ ಬಾಕಿ ಉಳಿದ ಭಾಗಗಳಲ್ಲಿ ದ್ವಿಪಥ ರಸ್ತೆ ನಿರ್ಮಾಣ

5) ರಾ. ಹೆದ್ದಾರಿ 369 ಇ ಸಾಗರದಿಂದ ಮರಕುಟಕವರೆಗೆ ದ್ವಿಪಥ ರಸ್ತೆ (ಸಾಗರ ಪಟ್ಟಣದ ಬೈಪಾಸ್ ರಸ್ತೆ ಸೇರಿ) ನಿರ್ಮಾಣ

ಸಚಿವರು ಸಕಾರಾತ್ಮಕವಾಗಿ ಸ್ಪಂದಿಸಿ, ಸಂಬಂದಿಸಿದ ಕೇಂದ್ರ ಭೂಸಾರಿಗೆ ಮಂತ್ರಾಲಯದ ಅಧಿಕಾರಿಗಳಿಗೆ ಸದರಿ ಕಾಮಗಾರಿಗಳ ಯೋಜನಾ ವರದಿ ತಯಾರಿಸಲು ಸಮಾಲೋಚಕರನ್ನು ತಕ್ಷಣ ನಿಯೋಜಿಸಲು ಸೂಚಿಸಿದ್ದು, ಯೋಜನಾ ವರದಿ ಪಡೆದು ಮಂಜೂರಾತಿ ನೀಡಲು ಸಹ ಕ್ರಮವಹಿಸಲು ಸೂಚಿಸಿದರು.

RELATED ARTICLES
- Advertisment -
Google search engine

Most Popular

Recent Comments