Saturday, December 14, 2024
Google search engine
Homeಇ-ಪತ್ರಿಕೆಗೌರಿ ಲಂಕೇಶ್‌ ಹತ್ಯೆ ಕೇಸ್‌: ಆರೋಪಿಗಳಿಗೆ ಷರತ್ತುಬದ್ಧ ಜಾಮೀನು

ಗೌರಿ ಲಂಕೇಶ್‌ ಹತ್ಯೆ ಕೇಸ್‌: ಆರೋಪಿಗಳಿಗೆ ಷರತ್ತುಬದ್ಧ ಜಾಮೀನು

ಬೆಂಗಳೂರು: ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ 3 ಮಂದಿ ಆರೋಪಿಗಳಿಗೆ ಹೈಕೋರ್ಟ್‌ ಜಾಮೀನು ಮಂಜೂರು ಮಾಡಿದೆ.

ನ್ಯಾ.ವಿಶ್ವಜಿತ್ ಶೆಟ್ಟಿ ಅವರಿದ್ದ ಹೈಕೋರ್ಟ್ ಏಕಸದಸ್ಯ ಪೀಠ 6 ವರ್ಷದ ನಂತರ ಆರೋಪಿಗಳಾದ ನವೀನ್ ಕುಮಾರ್, ಅಮಿತ್, ಎಚ್‌ಎಲ್ ಸುರೇಶ್ ಅವರಿಗೆ ಜಾಮೀನು ಮಂಜೂರು ಮಾಡಿದೆ.

ಈ ಮೂರು ಮಂದಿ ಆರೋಪಿಗಳ ಪರವಾಗಿ ಅರುಣ್ ಶ್ಯಾಮ್, ಮಧುಕರ್ ದೇಶಪಾಂಡೆ, ಬಸವರಾಜ ಸಪ್ಪಣ್ಣವರ್ ವಾದ ಮಂಡಿಸಿದ್ದರು. ವಿಚಾರಣೆ ಮುಗಿಯದೇ ದೀರ್ಘ ಕಾಲ‌ ಜೈಲಿನಲ್ಲಿಡುವಂತಿಲ್ಲವೆಂಬ ತೀರ್ಪು ಇದೆ. ವಾದ ಆಲಿಸಿದ ನ್ಯಾಯ ಪೀಠ ಆರೋಪಿಗಳು ಷರತ್ತುಬದ್ದ ಜಾಮೀನು ನೀಡಿದೆ.

ಪತ್ರಕರ್ತೆ ಗೌರಿ ಲಂಕೇಶ್ ಅವರನ್ನು 2017, ಸೆ.5 ರಂದು ಗುಂಡಿಕ್ಕಿ ಹತ್ಯೆ ಮಾಡಲಾಗಿತ್ತು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಇದುವರೆಗೂ 18 ಆರೋಪಿಗಳು ಬಂಧಿಸಲಾಗಿದೆ.

ಕೋರ್ಟ್‌ ವಿಧಿಸಿರುವ ಷರತ್ತುಗಳು ಪೂರ್ಣಗೊಂಡ ನಂತರ ಇಂದು  ಅಥವಾ ನಾಳೆ ಆರೋಪಿಗಳು ಜೈಲಿನಿಂದ ಬಿಡುಗಡೆಯಾಗುವ ಸಾಧ್ಯತೆಯಿದೆ.

RELATED ARTICLES
- Advertisment -
Google search engine

Most Popular

Recent Comments