ಬೆಳಗಾವಿ: ಕಳೆದ 2 ತಿಂಗಳುಗಳಿಂದ ಗೃಹ ಲಕ್ಷ್ಮೀ ಹಣ ಬಂದಿಲ್ಲ ಎಂದು ಬಡ ಮಹಿಳೆಯರು ಕಂಗಾಲಾಗಿದ್ದಾರೆ. ಕಷ್ಟದ ದಿನಗಳಲ್ಲಿ ಗೃಹ ಲಕ್ಷ್ಮೀ ಹಣ ಕುಟುಂಬ ನಿರ್ವಹಣೆಗೆ ಬೆಂಬಲವಾಗಿ ನಿಲ್ಲುತ್ತಿದೆ.
ಹೀಗಾಗಿ ಗೃಹಲಕ್ಷ್ಮೀ ಹಣಕ್ಕಾಗಿ ಮಹಿಳೆಯರು ಕಾಯುತ್ತಿದ್ದಾರೆ. ಈ ನಡುವೆ ವಿಪಕ್ಷಗಳು ಗೃಹ ಲಕ್ಷ್ಮೀ ಯೋಜನೆ ನಿಲ್ಲುತ್ತದೆ ಎಂದು ಹೇಳಿಕೆ ನೀಡುತ್ತಿರುವುದು ಗೃಹಲಕ್ಷ್ಮೀ ಫಲಾನುಭವಿಗಳನ್ನು ಇನ್ನಷ್ಟು ಚಿಂತೆಗೆ ದೂಡಿದೆ. ಈ ನಡುವೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಗೃಹಲಕ್ಷ್ಮಿಯರಿಗೆ ಸಂತಸದ ಸುದ್ದಿ ನೀಡಿದ್ದಾರೆ.
ಗೃಹ ಲಕ್ಷ್ಮೀ ಹಣ ಇಂದು ಅಥವಾ ನಾಳೆ ಫಲಾನುಭವಿಗಳ ಖಾತೆಗೆ ಕ್ರೆಡಿಟ್ ಆಗಲಿದೆ ಎಂದು ಲಕ್ಷ್ಮೀಹೆಬ್ಬಾಳ್ಕರ್ ಹೇಳಿಕೆ ನೀಡಿದ್ದಾರೆ. ಮೇ, ಜೂನ್ ತಿಂಗಳ ಹಣ ಹಾಕಿದ್ದೇವೆ. ಇಂದು ಅಥವಾ ನಾಳೆ ಜಮೆ ಆಗಲಿದೆ ಎಂದು ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದ್ದಾರೆ.
ಗೃಹ ಲಕ್ಷ್ಮೀ ಸೇರಿದಂತೆ ಗ್ಯಾರಂಟಿ ಯೋಜನೆಗಳು ಸ್ಥಗಿತಗೊಳ್ಳುತ್ತವೆ ಎನ್ನುವ ವಿಪಕ್ಷಗಳ ಹೇಳಿಕೆಯನ್ನು ತಳ್ಳಿಹಾಕಿದ ಅವರು, ʼರಾಜ್ಯದಲ್ಲಿ ಯಾವುದೇ ಕಾರಣಕ್ಕೂ ಗೃಹಲಕ್ಷ್ಮೀ ಯೋಜನೆ ನಿಲ್ಲುವುದಿಲ್ಲ. ಐದು ವರ್ಷಗಳವರೆಗೂ ಇದು ಮುಂದುವರಿಯಲಿದೆ. ಬಿಜೆಪಿಯವರು ಸುಮ್ಮನೆ ಅಪಪ್ರಚಾರ ಮಾಡುತ್ತಿದ್ದಾರೆ ಎಂದು ಹೇಳಿದರು.