ಶಿವಮೊಗ್ಗ: ೨೦೧೮ರ ಬಜೆಟ್‌ನಲ್ಲಿ ಭರವಸೆ ಈಡೇರಿಸದ ಸರ್ಕಾರದ ಕ್ರಮವನ್ನು ಖಂಡಿಸಿ ಗ್ರಾಮೀಣ ವಿಕಲಚೇತನ ಪುನರ್ವಸತಿ ಕಾರ್ಯಕರ್ತರ ಗರಿಷ್ಟ ಗೌರವ ಧನ ಬೆಂಬಲಿಸಲು ಒತ್ತಾಯಿಸಿ ಕರ್ನಾಟಕ ರಾಜ್ಯ ವಿಕಲಚೇತನರ ಹಾಗೂ ವಿವಿಧೋದ್ಧೇಶ ಮತ್ತು ಗ್ರಾಮೀಣ ಪುನರ್ವಸತಿ ಕಾರ್ಯಕರ್ತರ ರಾಜ್ಯ ಒಕ್ಕೂಟದ ವತಿಯಿಂದ ಇಂದು ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಲಾಯಿತು.
ರಾಜ್ಯ ಸರ್ಕಾರ ೨೦೧೮ರ ಬಜೆಟ್‌ನಲ್ಲಿ ಗ್ರಾಮೀಣ ವಿಕಲಚೇತನ ಪುನರ್ವಸತಿ ಕಾರ್ಯಕರ್ತರ (ಎಂಆರ್‌ಡಬ್ಲ್ಯೂ, ವಿಆರ್‌ಡಬ್ಲ್ಯೂ) ಗರಿಷ್ಟ ಗೌರವಧನಕ್ಕಾಗಿ ಫೆ.೧ ಮತ್ತು ೨ ರಂದು ಫ್ರೀಡಂ ಪಾರ್ಕ್‌ನಲ್ಲಿ ಅನಿರ್ಧಿಷ್ಠಾ ವಧಿ ಧರಣಿ ನಡೆಸಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವರಿಗೆ ಮನವಿ ಸಲ್ಲಿಸಲಾಗಿತ್ತು. ಬಜೆಟ್‌ನಲ್ಲಿ ಬೇಡಿಕೆ ಈಡೇರಿಸುವುದಾಗಿ ಸಚಿವರು ಭರವಸೆ ನೀಡಿದ್ದರು ಎಂದು ತಿಳಿಸಿದರು.
೨೦೧೭ರ ನವೆಂಬರ್‌ನಲ್ಲಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವರು ಇದೇ ರೀತಿ ಭರವಸೆ ನೀಡಿದ್ದರು. ಅವರು ನೀಡಿದ್ದ ಭರವಸೆ ಈಡೇರಿಸಿಲ್ಲ. ವಿಕಲಚೇತನರಿಗಾಗಿ ಸರ್ಕಾರದ ಸೌಲಭ್ಯಗಳನ್ನು ಮನೆ ಬಾಗಿಲಿಗೆ ತಲುಪಿಸಿ ಕಾರ್ಯನಿರ್ವಹಿಸುತ್ತಿರುವವರಿಗೆ ಇದರಿಂದ ತೊಂದರೆಯಾಗಿದೆ ಎಂದು ದೂರಿದರು.
ವಿಕಲಚೇತನ ಪುನರ್ವಸತಿ ಕಾರ್ಯಕರ್ತರಿಗೆ ಗರಿಷ್ಟ ಗೌರವಧನ ನೀಡಬೇಕು. ಮಹಿಳಾ ಕಾರ್ಯಕರ್ತರಿಗೆ ವೇತನ ಸಹಿತ ಹೆರಿಗೆ ರಜೆ ಮಂಜೂರು ಮಾಡಬೇಕು, ಭವಿಷ್ಯ ನಿಧಿ ಜೀವನ ಭದ್ರತೆಗೆ ೫ ಲಕ್ಷ ರೂ. ಹಿಡುಗಂಟು ಒದಗಿಸಬೇಕು, ಎಲ್ಲ ವಿದಧ ಪುನರ್ವಸತಿ ಕಾರ್ಯಕರ್ತರಿಗೆ ಇಂಧನ ಚಾಲಿತ ಸ್ಕೂಟರ್ ಒದಗಿಸಬೇಕು, ಕನಿಷ್ಟ ವೇತನ, ಸೇವಾ ಭದ್ರತೆ ನೀಡಬೇಕು ಎಂದು ಆಗ್ರಹಿಸಿದರು.
ಪ್ರತಿಭಟನೆಯಲ್ಲಿ ಸಂಘದ ಪ್ರಮುಖರಾದ ಡಿ.ಆರ್.ದಿವಾಕರ್ ಸೇರಿದಂತೆ ಹಲವರಿದ್ದರು.
ಗರಿಷ್ಠ ಗೌರವ ಧನ ಬೆಂಬಲಿಸಲು ಒತ್ತಾಯ
RELATED ARTICLES