Thursday, December 5, 2024
Google search engine
Homeಅಂಕಣಗಳುಲೇಖನಗಳುಬಿಜೆಪಿಯನ್ನು ಅಧಿಕಾರಕ್ಕೆ ತರಲು ಎಲ್ಲರೂ ಶ್ರಮಿಸಿ : ಈಶ್ವರಪ್ಪ ನೇತೃತ್ವದಲ್ಲಿ ಇಂದು ಹಲವರು ಬಿಜೆಪಿಗೆ ಸೇರ್ಪಡೆ

ಬಿಜೆಪಿಯನ್ನು ಅಧಿಕಾರಕ್ಕೆ ತರಲು ಎಲ್ಲರೂ ಶ್ರಮಿಸಿ : ಈಶ್ವರಪ್ಪ ನೇತೃತ್ವದಲ್ಲಿ ಇಂದು ಹಲವರು ಬಿಜೆಪಿಗೆ ಸೇರ್ಪಡೆ

ಶಿವಮೊಗ್ಗ: ಜಿಲ್ಲಾ ಬಿಜೆಪಿ ಕಾರ್ಯಾಲಯದಲ್ಲಿ ಇಂದು ನಡೆದ ಕಾರ್ಯಕ್ರಮದಲ್ಲಿ ವಿಧಾನಪರಿಷತ್ ವಿಪಕ್ಷ ನಾಯಕ ಕೆ.ಎಸ್.ಈಶ್ವರಪ್ಪ ಸಮ್ಮುಖದಲ್ಲಿ ವಿವಿಧ ಪಕ್ಷಗಳ ಮುಖಂಡರು ಹಾಗೂ ಸಮಾಜದ ಮುಖಂಡರು, ಕಾರ್ಯಕರ್ತರು ಬಿಜೆಪಿಗೆ ಸೇರ್ಪಡೆಯಾದರು.
ಮುಖಂಡರನ್ನು ಪಕ್ಷಕ್ಕೆ ಸ್ವಾಗತಿಸಿದ ಕೆ.ಎಸ್.ಈಶ್ವರಪ್ಪ ಮಾತನಾಡಿ, ಪ್ರಧಾನಿ ನರೇಂದ್ರ ಮೋದಿ ಹಾಗೂ ಬಿ.ಎಸ್.ಯಡಿಯೂರಪ್ಪ ಅವರ ನಾಯಕತ್ವವನ್ನು ಮೆಚ್ಚಿ ಎಲ್ಲ ಪಕ್ಷಗಳಿಂದ ಪ್ರಮುಖ ಮುಖಂಡರು ಹಾಗೂ ಕಾರ್ಯಕರ್ತರು ಬಿಜೆಪಿಯನ್ನು ಸೇರುತ್ತಿದ್ದಾರೆ ಎಂದು ತಿಳಿಸಿದರು.
ರಾಜ್ಯದಲ್ಲಿ ಬಿಜೆಪಿಯನ್ನು ಅಧಿಕಾರಕ್ಕೆ ತರುವ ನಿಟ್ಟಿನಲ್ಲಿ ಎಲ್ಲರೂ ಶ್ರಮ ವಹಿಸಬೇಕಿದೆ. ಪಕ್ಷದ ಅಭ್ಯರ್ಥಿಗಳು ಅತ್ಯಧಿಕ ಮತಗಳಿಂದ ಗೆಲುವು ಸಾಧಿಸಲು ಕಾರ್ಯಪ್ರವೃತ್ತರಾಗಬೇಕಿದೆ ಎಂದರು.
ಕ್ಷೇತ್ರವಾರು ಅಭಿವೃದ್ದಿಗೆ ಪೂರಕ ವಾದ ವಾತಾವರಣ ಕಲ್ಪಿಸಬೇಕು. ಈ ನಿಟ್ಟಿನಲ್ಲಿ ಬಿಜೆಪಿ ಅಭ್ಯರ್ಥಿಗಳ ಗೆಲುವಿಗೆ ಎಲ್ಲರೂ ಒಗ್ಗೂಡಿ ಕೆಲಸ ಮಾಡಬೇಕೆಂದು ಹೇಳಿದರು.
ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದ ಅಭ್ಯರ್ಥಿ ಕೆ.ಬಿ. ಅಶೋಕ ನಾಯ್ಕ ಅವರು ಪಕ್ಷಗಳ ಮುಖಂಡರನ್ನು ಸ್ವಾಗತಿಸಿದರು.
ಶಿವಮೊಗ್ಗ ಗ್ರಾಮಾಂತರ ಪ್ರಮುಖ ರಾದ ಎಪಿಎಂಸಿ ಸದಸ್ಯ ಲಕ್ಷ್ಮಿ ಕಾಂತಶೆಟ್ಟಿ, ಕೇಶವ ನಾಯರ್, ಶ್ರೀಧರ್, ಮರಡಿ ಸುರೇಶ್, ಗಂಗಾ ಧರ್, ವಿಶ್ವನಾಥ, ಷಡಾಕ್ಷರಪ್ಪ, ವಿರು ಪಾಕ್ಷಪ್ಪ ಮೊದಲಾದವರು ಸೇರ್ಪಡೆಯಾದರು.
ಈ ಸಂದರ್ಭದಲ್ಲಿ ಜಿಲ್ಲಾ ಬಿಜೆಪಿ ಪ್ರಧಾನ ಕಾರ್ಯದರ್ಶಿ ಡಿ.ಎಸ್. ಅರುಣ್, ಬಿ.ಆರ್. ಮಧುಸೂದನ್ ಮೊದಲಾದವರು ಇದ್ದರು.

RELATED ARTICLES
- Advertisment -
Google search engine

Most Popular

Recent Comments