Tuesday, November 5, 2024
Google search engine
Homeಇ-ಪತ್ರಿಕೆಶಿವಮೊಗ್ಗ: ಜು. 13ಕ್ಕೆ ಲೋಕ್ ಅದಾಲತ್; 12 ಸಾವಿರ ಪ್ರಕರಣಗಳ ವಿಲೇವಾರಿಯ ಗುರಿ

ಶಿವಮೊಗ್ಗ: ಜು. 13ಕ್ಕೆ ಲೋಕ್ ಅದಾಲತ್; 12 ಸಾವಿರ ಪ್ರಕರಣಗಳ ವಿಲೇವಾರಿಯ ಗುರಿ

ರಾಜೀ ಸಂಧಾನದ ಮೂಲಕ ಪ್ರಕರಣಗಳ ಇತ್ಯರ್ಥ: ನ್ಯಾ.ಮಂಜುನಾಥ ನಾಯಕ್

ಶಿವಮೊಗ್ಗ: ರಾಷ್ಟ್ರೀಯ ಕಾನೂನು ಸೇವಾ ಪ್ರಾಧಿಕಾರ ಮತ್ತು ರಾಜ್ಯ ಕಾನೂನು ಸೇವಾ ಪ್ರಾಧಿಕಾರದ ಆದೇಶದ ಹಿನ್ನೆಲೆಯಲ್ಲಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರವು ಜುಲೈ ೧೩ ರಂದು ಶನಿವಾರ ಜಿಲ್ಲೆಯ ಎಲ್ಲಾ ನ್ಯಾಯಾಲಯಗಳಲ್ಲಿ ಲೋಕ್‌ ಅದಾಲತ್‌ ಆಯೋಜಿಸಿದ್ದು, ಸಾರ್ವಜನಿಕರು ಇದರ ಸದುಪಯೋಗ ಪಡೆದುಕೊಳ್ಳುವಂತೆ ಮನವಿ ಮಾಡಿದೆ.

ಲೋಕ ಅದಾಲತ್‌ ಹಿನ್ನೆಲೆಯಲ್ಲಿ ಬುಧವಾರ ಜಿಲ್ಲಾ ನ್ಯಾಯಾಲಯದ ಸಭಾಂಗಣದಲ್ಲಿ ಕರೆದಿದ್ದ ಪತ್ರಿಕಾಗೋಷ್ಠಿಯಲ್ಲಿ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಮಂಜುನಾಥ ನಾಯಕ್ ಮಾಹಿತಿ ನೀಡಿದರು.

ರಾಜೀಯಾಗಬಹುದಾದ ಸಿವಿಲ್ ಮತ್ತು ಕ್ರಿಮಿನಲ್ ಪ್ರಕರಣಗಳನ್ನು ಸುಲಭವಾಗಿ ಮತ್ತು ಶೀಘ್ರವಾಗಿ ಇತ್ಯರ್ಥಪಡಿಸುವ ಉದ್ದೇಶದೊಂದಿಗೆ ‘ಲೋಕ್ ಅದಾಲತ್’ ಆಯೋಜಿಸಿದ್ದು, ಪಕ್ಷಗಾರರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ತಮ್ಮ ಬಾಕಿ ಇರುವ ಪ್ರಕರಣಗಳನ್ನು ಇತ್ಯರ್ಥಪಡಿಸಿಕೊಳ್ಳಬೇಕೆಂದು ಅವರು ತಿಳಿಸಿದರು.

ಜಿಲ್ಲೆಯ ಎಲ್ಲಾ ನ್ಯಾಯಾಲಯಗಳಲ್ಲಿ ಇತ್ಯರ್ಥಕ್ಕಾಗಿ ಬಾಕಿ ಇರುವ ಸಿವಿಲ್, ವೈವಾಹಿಕ, ಮೋಟಾರು ಪರಿಹಾರ ಪ್ರಕರಣಗಳು, ಚೆಕ್ ಬೌನ್ಸ್, ರಾಜೀಯಾಗಬಹುದಾದ ಕ್ರಿಮಿನಲ್ ಪ್ರಕರಣಗಳು ಹಾಗೂ ಕಲಂ 6 ಹಿಂದೂ ವಾರಸು ಕಾಯ್ದೆಗೆ ಸಂಬಂಧಿಸಿದ ಪ್ರಕರಣಗಳು, , ವಿಭಜನಾ ಪ್ರಕರಣಗಳು ಹಾಗೂ ಇತರೆ ಪ್ರಕರಣಗಳನ್ನು ಗುರುತಿಸಿ, ಪ್ರಕರಣಗಳ ಉಭಯ ಕಕ್ಷಿದಾರರನ್ನು ಕರೆಯಿಸಿಕೊಂಡು ಅವರ ಒಪ್ಪಿಗೆಯ ಪ್ರಕಾರ ರಾಜೀ ಸಂಧಾನದ ಮೂಲಕ ಪ್ರಕರಣಗಳ ಇತ್ಯರ್ಥ ಮಾಡಲಾಗುವುದು ಎಂದು ವಿವರಿಸಿದರು.

ಬ್ಯಾಂಕುಗಳಿಗೆ ಸಂಬಂಧಿಸಿದ ಸಾಲದ ಹಣದ ವಸೂಲಾತಿ ಪ್ರಕರಣಗಳು, ವಿದ್ಯುಚ್ಛಕ್ತಿ, ಜಲಮಂಡಳಿ ಹಾಗೂ ನ್ಯಾಯಾಲಯಕ್ಕೆ ಬರಬಹುದಾದಂತಹ ಇತರೆ ಯಾವುದೇ ಪ್ರಕರಣಗಳನ್ನು ಪೂರ್ವ ವ್ಯಾಜ್ಯ ಪ್ರಕರಣಗಳೆಂದು ಪರಿಗಣಸಿ, ಅವುಗಳಲ್ಲಿ ಸಹ ಉಭಯ ಕಕ್ಷಿದಾರರನ್ನು ಕರೆಯಿಸಿಕೊಂಡು ರಾಜೀ ಸಂಧಾನದ ಮೂಲಕ ವಿವಾದಗಳನ್ನು ಬಗೆಹರಿಸಿ ಅವಾರ್ಡ್ ಪಾಸು ಮಾಡಲಾಗುವುದು. ಅಂತಹ ಅವಾರ್ಡ್ ನ್ಯಾಯಾಲಯದಲ್ಲಿ ಮಾಡಬಹುದಾದ ಡಿಕ್ರಿ(ತೀರ್ಪು) ಇದ್ದಂತೆ. ಇಂತಹ ಅವಾರ್ಡ್‍ಗಳನ್ನು ಸಂಬಂಧಪಟ್ಟ ಸಿವಿಲ್ ನ್ಯಾಯಾಲಯಗಳಲ್ಲಿ ಅಮಲ್‍ಬಜಾವಣೆ ಮಾಡಲು ಕಾನೂನಿನಲ್ಲಿ ಅವಕಾಶ ಇದೆ. ಆದ್ದರಿಂದ ಜನತೆ ಇಂತಹ ಪ್ರಕ್ರಿಯೆಯ ಉಪಯೋಗವನ್ನು ಪಡೆಯಬೇಕೆಂದು ತಿಳಿಸಿದರು.ಪತ್ರಿಕಾಗೋಷ್ಟಿಯಲ್ಲಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಎಂ.ಎಸ್.ಸಂತೋಷ್ ಕುಮಾರ್ ಪಾಲ್ಗೊಂಡಿದ್ದರು.

RELATED ARTICLES
- Advertisment -
Google search engine

Most Popular

Recent Comments