Thursday, December 5, 2024
Google search engine
Homeಇ-ಪತ್ರಿಕೆಕಾಗೋಡು ತಿಮ್ಮಪ್ಪಗೆ ರಾಜ್ಯ ಮಟ್ಟದ ಕಾಯಕ ರತ್ನ ಪ್ರಶಸ್ತಿ

ಕಾಗೋಡು ತಿಮ್ಮಪ್ಪಗೆ ರಾಜ್ಯ ಮಟ್ಟದ ಕಾಯಕ ರತ್ನ ಪ್ರಶಸ್ತಿ

ಆನಂದಪುರ: ಮಾಜಿ ವಿಧಾನಸಭಾಧ್ಯಕ್ಷರು, ಹಿರಿಯ ರಾಜಕೀಯ ಮತ್ಸದ್ಧಿ  ಕಾಗೋಡು ತಿಮ್ಮಪ್ಪನವರಿಗೆ ರಾಜ್ಯಮಟ್ಟದ ಕಾಯಕ ರತ್ನ ಪ್ರಶಸ್ತಿಯನ್ನು ಜು.13 ರಂದು ಕಾಯಕನಾಡು ಬೀದರ್‌ನ ಡಾ.ಚನ್ನಬಸವ ಪಟ್ಟದೇವರ ರಂಗಮಂದಿರದಲ್ಲಿ ನೀಡಿ ಗೌರವಿಸಲಾಗುವುದು ಎಂದು ಕರ್ನಾಟಕ ರಾಜ್ಯ ವೈಜ್ಞಾನಿಕ ಸಂಶೋಧನಾ ಪರಿಷತ್ತಿನ ಶಿವಮೊಗ್ಗ ಜಿಲ್ಲಾಧ್ಯಕ್ಷ ಬಿ.ಡಿ.ರವಿಕುಮಾರ್ ತಿಳಿಸಿದ್ದಾರೆ.

ಕರ್ನಾಟಕ ರಾಜ್ಯ ವೈಜ್ಞಾನಿಕ ಸಂಶೋಧನಾ ಪರಿಷತ್ತು ವೈಜ್ಞಾನಿಕ ಚಿಂತಕ ಡಾ.ಹುಲಿಕಲ್ ನಟರಾಜ್ ಅವರ ನೇತೃತ್ವದಲ್ಲಿ ಆರಂಭಿಸಿ ಯಶಸ್ವಿ 4 ವರ್ಷಗಳಾಗಿದ್ದು, ಪ್ರತಿ ವರ್ಷ ರಾಜ್ಯ ಮಟ್ಟದ ವೈಜ್ಞಾನಿಕ ಸಮ್ಮೇಳನಗಳನ್ನು, ನಾಯಕತ್ವ ಶಿಬಿರಗಳನ್ನು, ವಿಚಾರ ಸಂಕಿರಣ, ಸಾಧಕರಿಗೆ ಹೆಚ್.ಎನ್.ಪ್ರಶಸ್ತಿ ಹಾಗೂ ಶ್ರಮಿಕರಿಗೆ ಕಾಯಕ ರತ್ನ ಪ್ರಶಸ್ತಿ ಪ್ರಧಾನ, ಸಾಹಿತಿ, ಚಿಂತಕರೊಂದಿಗೆ ಸಂವಾದ, ವಿದ್ಯಾರ್ಥಿಗಳಿಗೆ ಅರಿವಿನ ಕಾರ್ಯಕ್ರಮಗಳನ್ನು ಆಯೋಜಿಸುತ್ತ ಬಂದಿದೆ.

ಬಸವಕಲ್ಯಾಣ ಅನುಭವ ಮಂಟಪದ ಅಧ್ಯಕ್ಷರಾದ ನಾಡೋಜ ಡಾ.ಬಸವಲಿಂಗ ಪಟ್ಟದೇವರ ದಿವ್ಯ ಸಾನ್ನಿಧ್ಯದಲ್ಲಿ ಹಾಗೂ ಜ್ಞಾನ ಯೋಗಾಶ್ರಮದ ಸಿದ್ರಾಮ ಶರಣರು ಬೆಳ್ದಾಳ ಇವರ ನೇತೃತ್ವದಲ್ಲಿ ನಡೆಯುವ ಕಾರ್ಯಕ್ರಮವನ್ನು ಅರಣ್ಯ,ಜೈವಿಕ ಮತ್ತು ಪರಿಸರ ಇಲಾಖೆ ಹಾಗೂ ಬೀದರ್ ಜಿಲ್ಲಾ ಉಸ್ತುವಾರಿ ಸಚಿವರಾದ ಈಶ್ವರ ಖಂಡ್ರೆ ಉದ್ಘಾಟಿಸುವರು.

ಇದೆ ಸಂದರ್ಭದಲ್ಲಿ ಸಾಧಕರಿಗೆ ಕಾಯಕ ರತ್ನ ಪ್ರಶಸ್ತಿಯನ್ನು ನೀಡಿ ಗೌರವಿಸಲಾಗುತ್ತಿದೆ ಎಂದರು.

ಈ ಸಂದರ್ಭದಲ್ಲಿ ವೆಂಕಟೇಶ್ ಜೋಯಿಸ್, ವೆಂಕಟೇಶ್ ಚಂದಳ್ಳಿ, ರಾಜೇಂದ್ರ ಆವಿನಹಳ್ಳಿ, ಜಗನ್ನಾಥ್,ಆರ್.ಉಮೇಶ್ ಏನ್.,ಗಣಪತಿ, ಪ್ರಕಾಶ್ ಕೆ.ಆರ್.ಅವಿನಾಶ್.ಅಮಿತ್ ಆರ್.ಮೊದಲಾದವರು ಹಾಜರಿದ್ದರು.

RELATED ARTICLES
- Advertisment -
Google search engine

Most Popular

Recent Comments