ಬೆಂಗಳೂರು : ವಿಧಾನಸಭೆ ಇತಿಹಾಸದಲ್ಲಿ ಮೊದಲ ಬಾರಿಗೆ ನಡೆದ ಲೆಜಿಸ್ಲೇಜರ್ ಕಪ್-2024 ಚೆಸ್ ಪಂದ್ಯಾವಳಿಯಲ್ಲಿ ಜೇವರ್ಗಿ ಕ್ಷೇತ್ರದ ಶಾಸಕ ಅಜಯ್ ಸಿಂಗ್ ಅವರು ಎಲ್ಲಾ ಸುತ್ತಿನಲ್ಲೂ ವಿಜೇತರಾಗಿ ಚಾಂಪಿಯನ್ ಆಗಿದ್ದಾರೆ.
ಸ್ಪೀಕರ್ ಯು.ಟಿ.ಖಾದರ್ ಅವರು ವಿಶ್ವ ಚೆಸ್ ದಿನದ ಅಂಗವಾಗಿ ಲೆಜಿಸ್ಲೇಜರ್ ಕಪ್ ಪಂದ್ಯಾವಳಿ ಆಯೋಜಿಸಿದ್ದು ಆರು ಸುತ್ತುಗಳಲ್ಲಿ ಪಂದ್ಯಗಳು ನಡೆದಿದ್ದವು.
ಅಜಯ್ ಸಿಂಗ್ ಅವರು 2 ಲಕ್ಷ ನಗದನ್ನು ಒಳಗೊಂಡಿರುವ ಪ್ರಥಮ ಬಹುಮಾನ ಗೆದ್ದರೆ, ಖಾನಾಪುರ ಶಾಸಕ ವಿಠ್ಠಲ್ ಸೋಮಣ್ಣ ಹಲಗೇಕರ್ ಅವರು ದ್ವಿತೀಯ ಬಹುಮಾನ ಮತ್ತು ಪ್ರತಾಪ್ ಸಿಂಹ ನಾಯಕ್ ಅವರು ತೃತೀಯ ಬಹುಮಾನ ಗಳಿಸಿದರು. ವಿಜೇತರೆಲ್ಲರಿಗೂ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬಹುಮಾನ ವಿತರಿಸಿ ಶುಭ ಹಾರೈಸಿದರು.
ವಿಧಾನಸಭೆಯಲ್ಲಿ ಲೆಜಿಸ್ಲೇಚರ್ ಕಪ್-2024 ಚೆಸ್ ಪಂದ್ಯಾವಳಿ: ಶಾಸಕ ಅಜಯ್ ಸಿಂಗ್ ಚಾಂಪಿಯನ್
RELATED ARTICLES