ಶಿವಮೊಗ್ಗ: ತುಂಗಾ ಜಲಾಶಯ ವ್ಯಾಪ್ತಿಯಲ್ಲಿ ಹಾಗೂ ಶಿಕಾರಿಪುರ ತಾಲ್ಲೂಕಿನಾದ್ಯಂತ ಉತ್ತಮ ವರ್ಷಧಾರೆ ಹಿನ್ನಲೆಯಲ್ಲಿ ತಾಲ್ಲೂಕಿನ ಅನ್ನದಾತನ ಜೀವನಾಡಿ ಅಂಜನಾಪುರ ಜಲಾಶಯ ಭರ್ತಿಯಾಗಿ ತನ್ನ ವೈಭವವನ್ನು ಮರಳಿ ಪಡೆದಿದೆ. ಇಂದು ಜಲಸಂಪನ್ಮೂಲ ಇಲಾಖೆಯ ವತಿಯಿಂದ ಹಮ್ಮಿಕೊಂಡಿದ್ದ “ಬಾಗಿನ ಸಮರ್ಪಣೆ” ಕಾರ್ಯಕ್ರಮದಲ್ಲಿ ಸಂಸದ ಬಿ.ವೈ. ರಾಘವೇಂದ್ರ ಅವರು ಬಾಗಿನ ಸಮರ್ಪಿಸಿದರು.
ಈ ಬಾಗಿನ ಸಮರ್ಪಣೆ ಕಾರ್ಯಕ್ರಮದಲ್ಲಿ ಶಾಸಕ ಬಿ.ವೈ. ವಿಜಯೇಂದ್ರ ಅವರು ಪಾಲ್ಗೊಂಡಿದ್ದರು. ದೀಪ ಪ್ರಜ್ವಲಿಸುವ ಮೂಲಕ ಸಭಾ ಕಾರ್ಯಕ್ರಮ ಉದ್ಘಾಟಿಸಿ, ದಂಪತಿ ಸಮೇತರಾಗಿ ಮೈದುಂಬಿ ಹರಿಯುತ್ತಿರುವ ಜಲಾಶಯಕ್ಕೆ ಸಂಸದರು ಬಾಗಿನ ಸಮರ್ಪಿಸಿದರು.
ಈ ಸಂದರ್ಭದಲ್ಲಿ ಮುಖಂಡ ಗುರುಮೂರ್ತಿ, ಹುಲ್ಮಾರು ಮಹೇಶ್, ಹನುಮಂತಪ್ಪ, ಸಿದ್ಧಲಿಂಗ, ಚನ್ನವೀರಪ್ಪ, ಭೂಕಾಂತ್, ಗಾಯತ್ರಿ ಮಲ್ಲಪ್ಪ ಸೇರಿದಂತೆ ತಾಲ್ಲೂಕಿನ ಎಲ್ಲಾ ಪ್ರಮುಖ ಗಣ್ಯರು ಉಪಸ್ಥಿತರಿದ್ದರು.