Thursday, December 5, 2024
Google search engine
Homeಇ-ಪತ್ರಿಕೆಮಣಿಪಾಲ್ ಕಾರ್ಡ್ ನೊಂದಣಿ ಆರಂಭ: ಡಯಾಲಿಸಿಸ್‍ನಲ್ಲಿ ಶೇ.100 ರಷ್ಟು ರಿಯಾಯಿತಿ

ಮಣಿಪಾಲ್ ಕಾರ್ಡ್ ನೊಂದಣಿ ಆರಂಭ: ಡಯಾಲಿಸಿಸ್‍ನಲ್ಲಿ ಶೇ.100 ರಷ್ಟು ರಿಯಾಯಿತಿ

ಶಿವಮೊಗ್ಗ : 2000 ದಲ್ಲಿ ಪ್ರಾರಂಭವಾದ ಮಣಿಪಾಲ್ ಆರೋಗ್ಯ ಕಾರ್ಡ್ ಸಾರ್ವಜನಿಕರಿಗೆ ಕೈಗೆಟುಕುವ ದರದಲ್ಲಿ ಆರೋಗ್ಯ ಸೇವೆಯನ್ನು ಒದಗಿಸಲು ಶ್ರಮಿಸುತ್ತಿದೆ. ಮಣಿಪಾಲ್ ಆರೋಗ್ಯ ಕಾರ್ಡ್ ಇಡೀ ಕುಟುಂಬಕ್ಕಾಗಿ, ಉತ್ತಮ ಮೌಲ್ಯ, ವಿಶ್ವಾಸಾರ್ಹ ಸೇವೆ ಎಂಬ ಅಡಿಬರಹದ ಅಡಿಯಲ್ಲಿ ಎಲ್ಲಾ ಸದಸ್ಯರಿಗೆ ಸಮಗ್ರ ಆರೋಗ್ಯ ಪ್ರಯೋಜನಗಳನ್ನು ಒದಗಿಸುವ ಗುರಿಯನ್ನು ಹೊಂದಿದೆ ಎಂದು ಮಣಿಪಾಲ್ ಕಾರ್ಡ್ ವ್ಯವಸ್ಥಾಪಕ ಮೋಹನ್ ಶೆಟ್ಟಿ ಹೇಳಿದರು. 

ಗುರುವಾರ ಪತ್ರಿಕಾಭವನದಲ್ಲಿ ನಡೆದ ಪತ್ರಿಕಾಗೋಷ್ಟಿಯಲ್ಲಿ ಮಾತನಾಡಿದ ಅವರು, ಕಳೆದ 23 ವರ್ಷಗಳಲ್ಲಿ ಮಣಿಪಾಲ್ ಆರೋಗ್ಯ ಕಾರ್ಡ್ ಲಕ್ಷಾಂತರ ಜನರಿಗೆ ರಿಯಾಯಿತಿ ದರದಲ್ಲಿ ಉತ್ತಮ ಗುಣಮಟ್ಟದ ಆರೋಗ್ಯ ಸೇವೆಯನ್ನು ಒದಗಿಸಿದೆ. 2023 ರಲ್ಲಿ 3,60,000 ಸದಸ್ಯರು ನೋಂದಾಯಿಸಿಕೊಂಡಿದ್ದಾರೆ. ಇದು ಅದರ ಬೆಳೆಯುತ್ತಿರುವ ಜನಪ್ರಿಯತೆಗೆ ಸಾಕ್ಷಿಯಾಗಿದೆ ಎಂದರು.

ಮಣಿಪಾಲ್ ಆರೋಗ್ಯ ಕಾರ್ಡ್‍ದಾರರು ತಜ್ಞ ಮತ್ತು ಸೂಪರ್ ಸ್ಪೆಷಲಿಸ್ಟ್ ವೈದ್ಯರೊಂದಿಗೆ ಸಮಾಲೋಚನೆ ಶುಲ್ಕದಲ್ಲಿ ಶೇ.50 ರಷ್ಟು ರಿಯಾಯಿತಿ, ರೋಗನಿರ್ಣಯ ಮತ್ತು ಪ್ರಯೋಗಾಲಯ ಪರೀಕ್ಷೆ ಸೇವೆಯಲ್ಲಿ ಶೇ.25 ರಷ್ಟು ರಿಯಾಯಿತಿ, ರೇಡಿಯಾಲಜಿ, ಹೊರರೋಗಿ ಕಾರ್ಯವಿಧಾನಗಳು ಮತ್ತು ಮಧುಮೇಹ ಪಾದದ ಆರೈಕೆಯಲ್ಲಿ ಶೇ.20 ರಷ್ಟು ರಿಯಾಯಿತಿ, ಡಯಾಲಿಸಿಸ್‍ನಲ್ಲಿ ಶೇ.100 ರಷ್ಟು ರಿಯಾಯಿತಿ, ಆಸ್ಪತ್ರೆಯ ಔಷಧಿಗಳ ಮೇಲೆ ಶೇ.10 ವರೆಗೆ ರಿಯಾಯಿತಿ ಮತ್ತು ಜನರಲ್ ವಾರ್ಡ್‍ನಲ್ಲಿ ಒಳರೋಗಿಗಳ ಬಿಲ್‍ಗಳಲ್ಲಿ (ಕಾನ್ಸುಮಬೆಲ್ಸ್ ಮತ್ತು ಪ್ಯಾಕೇಜ್‍ಗಳನ್ನು ಹೊರತುಪಡಿಸಿ) ಶೇ.25 ರಷ್ಟು ರಿಯಾಯಿತಿ ಸೌಲಭ್ಯವಿದೆ ಎಂದರು. 

ಕಾರ್ಡ್‍ದಾರರು ಕಸ್ತೂರ್ಬಾ ಆಸ್ಪತ್ರೆ-ಮಣಿಪಾಲ, ಡಾ.ಟಿಎಂಎ ಪೈ ಆಸ್ಪತ್ರೆ-ಉಡುಪಿ, ಡಾ.ಟಿಎಂಎ ಪೈ ರೋಟರಿ ಆಸ್ಪತ್ರೆ-ಕಾರ್ಕಳ, ಕೆಎಂಸಿ ಆಸ್ಪತ್ರೆ-ಮಂಗಳೂರು ಮತ್ತು ಅತ್ತಾವರ, ದುರ್ಗಾ ಸಂಜೀವನಿ ಮಣಿಪಾಲ ಆಸ್ಪತ್ರೆ-ಕಟೀಲು, ಮಣಿಪಾಲ ಆಸ್ಪತ್ರೆ-ಗೋವಾ ಮತ್ತು ಮಣಿಪಾಲ ಹಾಗೂ ಮಂಗಳೂರಿನಲಿನ ದಂತ ಕಾಲೇಜುಗಳಲ್ಲಿ ಪ್ರಯೋಜನಗಳನ್ನು ಪಡೆಯಬಹುದು. ಮಣಿಪಾಲ ಮತ್ತು ಮಂಗಳೂರಿನಲ್ಲಿ ಇತರ ಆಸ್ಪತ್ರೆಗಳಲ್ಲಿನ ರಿಯಾಯಿತಿಗಳು ಮತ್ತು ಹೆಚ್ಚಿನ ಮಾಹಿತಿಗಾಗಿ, ದೂರವಾಣಿ ಸಂಖ್ಯೆ : 9980854700 ಮತ್ತು 08202923748 ನ್ನು ಸಂಪರ್ಕಿಸಬಹುದು ಎಂದರು.

ಶಿವಮೊಗ್ಗದ ಅಧಿಕೃತ ಪ್ರತಿನಿಧಿ ನವೀನ್.ಕೆ.ಆರ್  (7829540338) ಆಗಿರುತ್ತಾರೆ ಎಂದು ಮಾಹಿತಿ ನೀಡಿದರು.

ಪತ್ರಿಕಾಗೋಷ್ಟಿಯಲ್ಲಿ ಪ್ರತಿನಿಧಿಯಾದ ಪ್ರವೀಣ್, ಆರೋಗ್ಯ ಕಾರ್ಡಿನ ಮುಖ್ಯ ಸಂಯೋಜಕ ನವೀನ್.ಕೆ.ಆರ್ ಉಪಸ್ಥಿತರಿದ್ದರು.

RELATED ARTICLES
- Advertisment -
Google search engine

Most Popular

Recent Comments