Monday, November 11, 2024
Google search engine
Homeಅಂಕಣಗಳುಲೇಖನಗಳುರಾಜಕಾಲುವೆಗಳ ಸ್ವಚ್ಛತೆಗೆ ಕ್ರಮಕೈಗೊಳ್ಳಿ ಜಿಲ್ಲಾಡಳಿತ-ಪಾಲಿಕೆ ಅಧಿಕಾರಿಗಳ ಸಭೆ

ರಾಜಕಾಲುವೆಗಳ ಸ್ವಚ್ಛತೆಗೆ ಕ್ರಮಕೈಗೊಳ್ಳಿ ಜಿಲ್ಲಾಡಳಿತ-ಪಾಲಿಕೆ ಅಧಿಕಾರಿಗಳ ಸಭೆ

ಶಿವಮೊಗ್ಗ : ನಗರದಲ್ಲಿ ಕಳೆದ ಮೂರ‍್ನಾಲ್ಕು ದಿನಗಳಿಂದ ಸುರಿಯುತ್ತಿರುವ ಅಕಾಲಿಕ ಮಳೆ ಯಿಂದಾಗಿ ಉಂಟಾಗಿರುವ ಹಾನಿಯ ಬಗ್ಗೆ ಮಾಹಿತಿ ನೀಡುವಂತೆ ಜಿಲ್ಲಾಧಿಕಾರಿ ಡಾ|| ಎಂ.ಲೋಕೇಶ್ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಇಂದು ನಗರದ ಜಿಲ್ಲಾಧಿಕಾರಿಗಳ ಕಛೇರಿಯಲ್ಲಿ ನಡೆದ ಅಧಿಕಾರಿಗಳ ಸಭೆಯಲ್ಲಿ ಮಾತನಾಡಿದ ಅವರು, ಕಳೆದ ಕೆಲ ದಿನಗಳಿಂದ ಸಂಜೆ ವೇಳೆ ಸಾಕಷ್ಟು ಮಳೆಯಾಗುತ್ತಿದೆ. ಇದರಿಂದ ತಗ್ಗು ಪ್ರದೇಶಗಳಿಗೆ ನೀರು ನುಗುತ್ತಿದೆ. ಅಲ್ಲದೆ ಕೆಲ ಮನೆಗಳಿಗೂ ಸಹ ಹಾನಿಯುಂಟಾ ಗಿದೆ. ಅಲ್ಲದೆ ಈ ಬಗ್ಗೆ ಸ್ಥಳಪರಿಶೀಲನೆ ನಡೆಸಿ, ನಷ್ಟದ ಪ್ರಮಾಣವನ್ನು ತಿಳಿಸಬೇಕೆಂದರು.
ತಗ್ಗು ಪ್ರದೇಶಗಳಿಗೆ ನೀರು ನುಗ್ಗಲು ಕಾರಣವೇನು ಎಂಬುದರ ಬಗ್ಗೆ ಪರಿಶೀಲನೆ ನಡೆಸ ಬೇಕು. ಅದಕ್ಕೆ ಸಂಬಂಧಪಟ್ಟಂತೆ ಕ್ರಮಕೈಗೊಳ್ಳ ಬೇಕೆಂದ ಅವರು, ರಾಜಕಾಲುವೆಯನ್ನು ಶುಚಿ ಗೊಳಿಸಿ, ನೀರು ತಗ್ಗು ಪ್ರದೇಶಗಳಿಗೆ ನುಗ್ಗದಂತೆ ಮುನ್ನೆಚ್ಚರಿಕೆ ಕ್ರಮ ವಹಿಸಬೇಕೆಂದು ಸಭೆಯಲ್ಲಿ ಉಪಸ್ಥಿತರಿದ್ದ ಪಾಲಿಕೆಯ ಆಯುಕ್ತರು ಹಾಗೂ ಅಧಿಕಾರಿ ವರ್ಗದವರಿಗೆ ಸೂಚನೆ ನೀಡಿದರು.
ಪಾಲಿಕೆಯ ಉಪ ಆಯುಕ್ತ ನಾಗರಾಜ್ ಮಾತನಾಡಿ, ಈಗಾಗಲೇ ಅಮೃತ್ ಯೋಜನೆ ಯಡಿ ರಾಜಕಾಲುವೆಯ ಆಧುನೀಕರಣಕ್ಕೆ ಯೋಜನೆಯನ್ನು ರೂಪಿಸಲಾಗಿದೆ. ಆದರೆ ಈ ಯೋಜನೆ ಅನುಷ್ಠಾನಕ್ಕೆ ಕಾಲಾವಕಾಶ ಬೇಕಾಗಿರು ವುದರಿಂದ ಶೀಘ್ರಗತಿಯಲ್ಲಿ ತುರ್ತು ಕ್ರಮಕೈಗೊಳ್ಳಲಾಗುತ್ತಿದೆ ಎಂದರು.
ಪಾಲಿಕೆಯ ಪರಿಸರ ಹಾಗೂ ಆರೋಗ್ಯಾಧಿಕಾರಿಗಳು ಕೇವಲ ದೂರವಾಣಿಯಲ್ಲಿ ವಿಷಯ ವನ್ನು ಸಂಗ್ರಹಿಸದೇ ಖುದ್ದಾಗಿ ಸ್ಥಳ ಪರಿಶೀಲನೆ ನಡೆಸಬೇಕು. ಆ ಮೂಲಕ ತಗ್ಗು ಪ್ರದೇಶಗಳಿಗೆ ನೀರು ನುಗ್ಗಿದ ನಿವಾಸಿಗಳಲ್ಲಿ ಆತ್ಮ ವಿಶ್ವಾಸ ಮೂಡಿ ಸುವಂತಹ ಕೆಲಸ ಮಾಡಬೇಕು ಎಂದು ಕಟ್ಟುನಿ ಟ್ಟಿನ ಸೂಚನೆಯನ್ನು ಜಿಲ್ಲಾಧಿಕಾರಿಗಳು ನೀಡಿದರು.
ಸಭೆಯಲ್ಲಿ ಆಯುಕ್ತ ಮುಲ್ಲೈ ಮುಹಿಲನ್, ಅಪರ ಜಿಲ್ಲಾಧಿಕಾರಿ ಚನ್ನಬಸಪ್ಪ, ಉಪವಿಭಾಗಾಧಿಕಾರಿ ಕೃಷ್ಣಮೂರ್ತಿ ಸೇರಿದಂತೆ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

RELATED ARTICLES
- Advertisment -
Google search engine

Most Popular

Recent Comments