Thursday, December 5, 2024
Google search engine
Homeಇ-ಪತ್ರಿಕೆಶಾಸಕ ಚನ್ನಬಸಪ್ಪರಿಂದ 4836 ಆಶ್ರಯ ಮನೆಗಳ ಕಾಮಗಾರಿ ಪ್ರಗತಿ ಪರಿಶೀಲನೆ

ಶಾಸಕ ಚನ್ನಬಸಪ್ಪರಿಂದ 4836 ಆಶ್ರಯ ಮನೆಗಳ ಕಾಮಗಾರಿ ಪ್ರಗತಿ ಪರಿಶೀಲನೆ

ಶಿವಮೊಗ್ಗ: ಪ್ರಧಾನಮಂತ್ರಿ ಆವಾಸ್ ಯೋಜನೆ ಅಡಿಯಲ್ಲಿ ಗೋವಿಂದಪುರ ಹಾಗೂ ಗೋಪಿಶೆಟ್ಟಿಕೊಪ್ಪ ಬಡಾವಣೆಗಳಲ್ಲಿ G+2 ಮಾದರಿಯಲ್ಲಿ ಮೂಲಭೂತ ಸೌಕರ್ಯಗಳೊಂದಿಗೆ ನಿರ್ಮಾಣ ಹಂತದಲ್ಲಿರುವ 4836 ಮನೆಗಳ ಕಾಮಗಾರಿಯ ಪ್ರಗತಿಯ ಪರಿಶೀಲನೆಯನ್ನು ಶಾಸಕ ಎಸ್. ಎನ್.‌ ಚನ್ನಬಸಪ್ಪ ಅವರ ನೇತೃತ್ವದಲ್ಲಿ ನಡೆಸಲಾಯಿತು.

ಈ ವೇಳೆ ಅಧಿಕಾರಿಗಳಿಂದ ಮನೆಗಳ ನಿರ್ಮಾಣ ಕಾಮಗಾರಿ ಪ್ರಗತಿ ಕುರಿತು ಚರ್ಚಿಸಿ, ಶೀಘ್ರವಾಗಿ ಮನೆಗಳ ಕಾಮಗಾರಿಯನ್ನು ಪೂರ್ಣಗೊಳಿಸಲು ನಿರ್ದೇಶನ ನೀಡಿ, ನಿಧಾನ ಗತಿಯಲ್ಲಿ ಸಾಗುತ್ತಿರುವ ಕಾಮಗಾರಿಯ ಕುರಿತು ಸಂಬಂಧ ಪಟ್ಟ ಗುತ್ತಿಗೆದಾರರಿಗೆ ನೋಟಿಸ್ ನೀಡಲು ತೀರ್ಮಾನಿಸಲಾಯಿತು.

ಈ ಸಂದರ್ಭದಲ್ಲಿ ವಸತಿ ಇಲಾಖೆ, ಬೆಂಗಳೂರು ಪ್ರಧಾನ ಕಾರ್ಯದರ್ಶಿಗಳಾದ ನವೀನ್ ರಾಜ್ ಸಿಂಗ್ ಐ.ಎ.ಎಸ್ ಪ್ರಧಾನ ವ್ಯವಸ್ಥಾಪಕರಾದ ಸುಶೀಲಮ್ಮ , ಮಹಾನಗರ ಪಾಲಿಕೆ ಆಯುಕ್ತರಾದ ಡಾ. ಕವಿತಾ ಸೇರಿದಂತೆ ಸಂಬಂಧಪಟ್ಟ ಅಧಿಕಾರಿಗಳು ಉಪಸ್ಥಿತರಿದ್ದರು.

RELATED ARTICLES
- Advertisment -
Google search engine

Most Popular

Recent Comments