Monday, November 11, 2024
Google search engine
Homeಇ-ಪತ್ರಿಕೆಭದ್ರಾ ಜಲಾಶಯ ಭರ್ತಿ ಆಗುವ ಸಂಭವ: ಯಾವುದೇ ಕ್ಷಣ ನದಿಗೆ ನೀರು; ಎಚ್ಚರಿಕೆಯ ಸಂದೇಶ

ಭದ್ರಾ ಜಲಾಶಯ ಭರ್ತಿ ಆಗುವ ಸಂಭವ: ಯಾವುದೇ ಕ್ಷಣ ನದಿಗೆ ನೀರು; ಎಚ್ಚರಿಕೆಯ ಸಂದೇಶ

ಶಿವಮೊಗ್ಗ :  ಪಶ್ಚಿಮ ಘಟ್ಟದಲ್ಲಿ ವ್ಯಾಪಕವಾಗಿ ಮಳೆ ಸುರಿಯುತ್ತಿರುವ ಕಾರಣ, ಜಿಲ್ಲೆಯ ಎಲ್ಲಾ ಜಲಾಶಯಗಳು ಭರ್ತಿಯಾಗ ತೊಡಗಿವೆ. ಈ ನಡುವೆ ಭದ್ರಾ ಜಲಾಶಯಕ್ಕೆ ಒಳಹರಿವು ಹೆಚ್ಚಾಗಿದ್ದು 40 ಸಾವಿರ ಕ್ಯೂಸೆಕ್ಸ್‌ ನೀರು ಹರಿದು ಬರುತ್ತಿದೆ. ಯಾವುದೇ ಯಾವುದೇ ಕ್ಷಣ ಜಲಾಶಯ ಭರ್ತಿಯಾಗುವ ಹಿನ್ನೆಲೆಯಲ್ಲಿ ನದಿ ಪಾತ್ರದ ಜನರಿಗೆ ಕರ್ನಾಟಕ ನೀರಾವರಿ ನಿಗಮ ಎಚ್ಚರಿಕೆ ಸಂದೇಶ ನೀಡಿದೆ.

ಮಲೆನಾಡಿನಲ್ಲಿ ಸುರಿಯುತ್ತಿರುವ ಮಳೆಯಿಂದಾಗಿ ಭದ್ರಾ ಜಲಾಶಯಕ್ಕೆ ಈಗ ಒಳಹರಿವು ಹೆಚ್ಚಾಗಿದ್ದು 40 ಸಾವಿರ ಕ್ಯೂಸೆಕ್ಸ್‌ ನೀರು ಹರಿದು ಬರುತ್ತಿದೆ. ಜಲಾಶಯದ ನೀರಿನ ಮಟ್ಟ 174 ಅಡಿ ಮೂರು ಇಂಚು ತಲುಪಿದೆ. ಈ ಹಿನ್ನೆಲೆಯಲ್ಲಿ ಮಳೆ ಮುಂದುವರಿದರೇ ಜಲಾಶಯ ಗರಿಷ್ಟ ಮಟ್ಟ ಬೇಗನೆ ತಲುಪುವ ಸಾಧ್ಯತೆ ಇದೆ. ಜಲಾಶಯ ಭರ್ತಿಯಾದರೆ ಸುರಕ್ಷತೆಯ ದೃಷ್ಟಿಯಿಂದ ಜಲಾಶಯದ ನೀರನ್ನು ನದಿಗೆ ಬೀಡಲಾಗುತ್ತದೆ. ಈ ಕಾರಣದಿಂದ ನದಿಪಾತ್ರದ ಜನರು ಎಚ್ಚರಿಕೆ ವಹಿಸಬೇಕು ಎಂದು ಪ್ರಕಟಣೆ  ತಿಳಿಸಿದೆ.

ಎಚ್ಚರಿಕೆ ಸಂದೇಶ ಏನು?
ಭದ್ರಾ ನದಿ ದಂಡೆಯ ತಗ್ಗು ಪ್ರದೇಶದಲ್ಲಿ ವಾಸಿಸುವ ಜನರಿಗೆ. ಈ ಮೂಲಕ ತಿಳಿಯಪಡಿಸುದು ಏನೇಂದರೆ,  ಭದ್ರಾ ಜಲಾಶಯದ ಜಲಾನಯನ ಪ್ರದೇಶದಲ್ಲಿ, ಸತತವಾಗಿ ಮಳೆ ಬೀಳುತ್ತಿದ್ದು, ಜಲಾಶಯಕ್ಕೆ ಬರುತ್ತಿರುವ ಒಳಹರಿವಿನ ಪ್ರಮಾಣ ಕ್ರಮೇಣ ಹೆಚ್ಚಾಗುತ್ತಿದೆ. ದಿನಾಂಕ:26.07.2024 ರಂದು ಜಲಾಶಯದ ನೀರಿನ ಮಟ್ಟ 174 ಅಡಿ 3 ಇಂಚುಗಳಿಗೆ ತಲುಪಿರುತ್ತದೆ. ಹರಿದು ಬರುವ ಒಳಹರಿವಿನ ಪ್ರಮಾಣ 35000-40000 ಕ್ಯೂಸೆಕ್ಸ್ ಇದ್ದು, ಇದೇ ರೀತಿ ಮುಂದುವರೆದಲ್ಲಿ ಭದ್ರಾ ಜಲಾಶಯದ ಗರಿಷ್ಟ ನೀರಿನ ಮಟ್ಟಕ್ಕೆ ಅತೀ ಶೀಘ್ರವಾಗಿ ಭರ್ತಿಯಾಗುವ ಸಂಭವವಿದೆ.

ಆದ್ದರಿಂದ ಅಣೆಕಟ್ಟಿನ ಸುರಕ್ಷತೆಯಿಂದ ಹೆಚ್ಚುವರಿ ನೀರನ್ನು ಯಾವ ಸಮಯದಲ್ಲಾದರೂ ಒಳ ಹರಿವಿನ ಪ್ರಮಾಣಕ್ಕೆ ಅನುಗುಣವಾಗಿ Spill Way Gate ಮುಖಾಂತರ ನದಿಗೆ ಬಿಡಲಾಗುವುದು. ಆದುದರಿಂದ ಭದ್ರಾ ನದಿಯ ಎಡ ಮತ್ತು ಬಲ ದಂಡೆಯ ಉದ್ದಕ್ಕೂ ತಗ್ಗು ಪ್ರದೇಶದಲ್ಲಿ ವಾಸಿಸುವ ಜನರು ಮುಂಜಾಗ್ರತೆಯಾಗಿ ಸುರಕ್ಷಿತ ಸ್ಥಳಗಳಿಗೆ ಹೋಗಬೇಕಾಗಿ ಈ ಮೂಲಕ ಕೋರಲಾಗಿದೆ. ನದಿ ಪಾತ್ರದಲ್ಲಿ ಸಾರ್ವಜನಿಕರು ತಿರುಗಾಡುವುದು, ಜಾನುವಾರುಗಳನ್ನು ನದಿ ಪಾತ್ರದಲ್ಲಿ ಮೇಯಿಸುವುದನ್ನು ನಿಷೇಧಿಸಲಾಗಿದೆ. ಸಾರ್ವಜನಿಕರು ಇಲಾಖೆಯೊಂದಿಗೆ ಸಹಕರಿಸಲು ಕೋರಲಾಗಿದೆ.

RELATED ARTICLES
- Advertisment -
Google search engine

Most Popular

Recent Comments